ದಿನಭವಿಷ್ಯ 23-12-2024: ಸೋಮವಾರದಂದು ಉತ್ತರಾ ನಕ್ಷತ್ರ, ಸೌಭಾಗ್ಯ ಯೋಗ: ಈ ರಾಶಿಯವರಿಗೆ ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Today Horoscope 23rd December 2024: ಸೋಮವಾರದ ಈ ದಿನ ಉತ್ತರಾ ನಕ್ಷತ್ರ, ಸೌಭಾಗ್ಯ ಯೋಗ, ತೈತಿಲ ಕರಣ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಸೋಮವಾರದ ಈ ದಿನ ಉತ್ತರಾ ನಕ್ಷತ್ರ, ಸೌಭಾಗ್ಯ ಯೋಗ, ತೈತಿಲ ಕರಣ. ಇಂದು ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ರಾಶಿಯ ಫಲಾಫಲ ಹೇಗಿದೆ.
ಮೇಷ ರಾಶಿಯವರ ಭವಿಷ್ಯ (Aries Horoscope):
ನಿಮ್ಮ ಸುತ್ತಲಿರುವ ಜನರಿಗೆ ನಿಮ್ಮ ಮೌಲ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದರೆ ಇಂದೇ ನಿಮ್ಮ ಈ ಪ್ರಯತ್ನವನ್ನು ನಿಲ್ಲಿಸಿ. ನಿಮ್ಮ ಕೆಲಸವೇ ಬೇರೆಯವರ ಬಾಯಿ ಮುಚ್ಚಿಸುವಂತೆ ಮಾಡಿ. ನೀವು ಎಷ್ಟು ಜವಾಬ್ದಾರಿಯುತರು, ವಿಶ್ವಾಸಾರ್ಹರು ಎಂದು ಯಾರಿಗೂ ಸಾಬೀತುಪಡಿಸುವ ಅಗತ್ಯವಿಲ್ಲ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಆಸ್ತಿ ಖರೀದಿಸಲು ಪ್ರಯತ್ನಿಸುತ್ತಿರುವವರಿಗೆ ಇಂದು ಶುಭ ದಿನ. ನೀವು ಸೃಜನಾತ್ಮಕ ಕ್ಷೇತ್ರದಲ್ಲಿ ಕೆಲಸ ಮಾಡುವವರಾಗಿದ್ದರೆ ಇಂದು ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದೆ. ಯಾವುದೇ ಪ್ರಮುಖ ವಿಚಾರಗಳಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಬೇಡಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಯಾವುದೇ ವೃತ್ತಿ ಆಧಾರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಚಿಂತನಶೀಲರಾಗಿ ವರ್ತಿಸಿ. ಇಂದು ಔತಣ ಕೂಟಕ್ಕೆ ಹೋಗುವ ಸಂಭವವಿದೆ. ಹೊಸ ಒಪ್ಪಂದಗಳಲ್ಲಿ ಬಹಳ ಜಾಗರೂಕರಾಗಿರಿ. ಆರೋಗ್ಯದ ದೃಷ್ಟಿಯಿಂದ ಇಂದು ಹೊರಗಿನ ಆಹಾರಗಳ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ನಿಮ್ಮ ಪ್ರೀತಿಪಾತ್ರರೊಂದಿಗೆ ಅಹಂಕಾರವನ್ನು ಬದಿಗಿಡಿ. ನಿಮ್ಮ ಮನಸ್ಸಿನ ಭಾವನೆಗಳನ್ನೂ ಅವರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಿ. ಇಂದು ಯಾರಾದರೂ ನಿಮ್ಮ ವಿರುದ್ಧ ಒಳಸಂಚು ಮಾಡಬಹುದು. ಈ ಬಗ್ಗೆ ಜಾಗರೂಕರಾಗಿರಿ.
ಇದನ್ನೂ ಓದಿ- ತುಳಸಿ ಕಟ್ಟೆಯ ಬಳಿ ಈ ಗಿಡ ಇದ್ದರೆ ಆರ್ಥಿಕ ಮುಗ್ಗಟ್ಟು, ನೆಮ್ಮದಿ ಎನ್ನುವುದೇ ಇರಲ್ಲ...!
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿರುತ್ತೀರಿ. ಇಂದು ನಿಮ್ಮ ಜೀವನದಲ್ಲಿ ನೆಮ್ಮದಿಯನ್ನು ಪಡೆಯಲು ಸಹಾಯಕವಾಗಲಿದೆ. ಕುಟುಂಬದೊಂದಿಗೆ ಪ್ರವಾಸ ಕೈಗೊಳ್ಳಬಹುದು. ಆದರೆ, ವೆಚ್ಚ ಹೆಚ್ಚಾಗಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ನಿಮ್ಮ ಮನೆಯಲ್ಲಿನ ವಾತಾವರಣ ನಿಮ್ಮ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಯಾರಾದರೂ ನಿಮ್ಮ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಬಹುದು. ಈ ಬಗ್ಗೆ ಎಚ್ಚರಿಕೆಯಿಂದ ಇರಿ. ಸಾಮಾಜಿಕ ಮಾಧ್ಯಮದಲ್ಲಿ ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸಬೇಡಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಕೆಲಸದ ಸ್ಥಳದಲ್ಲಿ ಅತ್ಯುತ್ತಮವಾದುದನ್ನು ನೀಡಲು ನಿಮ್ಮ ದಕ್ಷತೆಯನ್ನು ಹೆಚ್ಚಿಸಿ. ನಿಮ್ಮ ಮೇಲಾಧಿಕಾರಿಗಳೊಂದಿಗೆ ಅನೌಪಚಾರಿಕ ಸಂಬಂಧವನ್ನು ನಿರ್ಮಿಸಲು ಪ್ರಯತ್ನಿಸಬಹುದು. ಹೊಸ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಇಂದು ಶುಭ ದಿನ. ಆದಾಯದ ಮೂಲಗಳು ಹೆಚ್ಚಾಗಲಿವೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನೀವು ಹಿಂದೆ ಮಾಡಿದ ಒಳ್ಳೆಯ ಕೆಲಸಗಳಿಗೆ ಇಂದು ಉತ್ತಮ ಪ್ರತಿಫಲವನ್ನು ಅನುಭವಿಸುವಿರಿ. ನೀವು ನಿಮ್ಮ ನಿಕಟವರ್ತಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ಇಂದು ಶುಭ ದಿನ. ಆರೋಗ್ಯದ ದೃಷ್ಟಿಯಿಂದ ಇಂದು ಅತ್ಯುತ್ತಮ ದಿನವಾಗಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ತಮ್ಮ ಆತ್ಮ ಸಂಗಾತಿಯನ್ನು ಹುಡುಕುತ್ತಿರುವವರಿಗೆ ಇಂದು ಶುಭ ಸುದ್ದಿ. ನಿಮ್ಮ ಬದ್ಧತೆಗಳನ್ನು ಕಾಯ್ದುಕೊಳ್ಳಲು ಹೆಚ್ಚಿನ ಶ್ರಮ ಬೇಕಾಗಬಹುದು. ಕೆಲಸಕ್ಕೆ ಹೋಗುವಾಗ ನಿಮ್ಮ ದಕ್ಷತೆಯನ್ನು ದ್ವಿಗುಣಗೊಳಿಸುವುದು ಉತ್ತಮ. ಹಳೆಯ ಕೆಲವು ಕೆಟ್ಟ ಘಟನೆಗಳು ಮರುಕಳಿಸದಂತೆ ನಿಗಾವಹಿಸಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಅಧ್ಯಾಪಕ ವೃತ್ತಿಯಲ್ಲಿರುವವರಿಗೆ ಉತ್ತಮ ದಿನವಾಗಿದೆ. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ. ಹಳೆಯ ಸ್ನೇಹಿತರೊಂದಿಗೆ ಪುನರ್ಮಿಲನ ನಿಮ್ಮ ಉತ್ಸಾಹವನ್ನು ಹೆಚ್ಚಿಸಲಿದೆ. ವಿಚಿತ್ರವಾದ ಪರಿಸ್ಥಿತಿಯನ್ನು ನೀವಿಂದು ಎದುರಿಸಬೇಕಾಗಬಹುದು. ಈ ವೇಳೆ ಬಹಳ ಎಚ್ಚರಿಕೆಯಿಂದ ಮುಂದುವರೆಯಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸ್ವಲ್ಪ ಗುಣಮಟ್ಟದ ಸಮಯವನ್ನು ಕಳೆಯಲು ಪ್ರಯತ್ನಿಸಿ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳಿಂದ ಶುಭ ಸುದ್ದಿ ನಿರೀಕ್ಷೆ ಇದೆ. ಪ್ರೀತಿಯ ಜೀವನದಲ್ಲಿ ಹೊಸ ಶಕ್ತಿಯನ್ನು ಆನಂದಿಸುವಿರಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ನಿಮ್ಮ ಖರ್ಚುಗಳು ಹೆಚ್ಚಾಗಬಹುದು. ಹಳೆಯ ಸ್ನೇಹಿತರ ಭೇಟಿಯನ್ನು ನಿರೀಕ್ಷಿಸಬಹುದು. ಉದ್ಯೋಗಸ್ಥರು ವಿನಾಕಾರಣ ಕಚೇರಿಯಲ್ಲಿ ಬೇರೆಯವರೊಂದಿಗೆ ವಾದಕ್ಕೆ ಇಳಿಯುವುದನ್ನು ತಪ್ಪಿಸಿ. ಆರೋಗ್ಯದ ದೃಷ್ಟಿಯಿಂದ ಸ್ವಲ್ಪ ಜಾಗರೂಕರಾಗಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.