Vastu Tips: ಈ ಪ್ರಾಣಿ ವಿಗ್ರಹಗಳನ್ನು ಮನೆಯ ಸರಿಯಾದ ದಿಕ್ಕಿನಲ್ಲಿಲ್ಲಿಟ್ಟರೆ ಸಂಪತ್ತು ಪ್ರಾಪ್ತಿ

Vastu Tips For Animal Statue: ಕೆಲವರು ಮನೆಯ ಅಲಂಕಾರದ ದೃಷ್ಟಿಯಿಂದ ಮನೆಯಲ್ಲಿ ಕೆಲವು ಪ್ರಾಣಿಗಳ ಪ್ರತಿಮೆಗಳನ್ನು ಇಡುತ್ತಾರೆ. ಆದರೆ,  ವಾಸ್ತುವಿನ ಪ್ರಕಾರ, ಮನೆಯಲ್ಲಿರುವ ಪ್ರಾಣಿಗಳ ವಿಗ್ರಹಗಳು ವ್ಯಕ್ತಿಯ ಅದೃಷ್ಟದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.   

Written by - Yashaswini V | Last Updated : May 18, 2023, 06:37 PM IST
  • ವಾಸ್ತು ಪ್ರಕಾರ ಮನೆಯಲ್ಲಿ ಪ್ರಾಣಿಗಳ ವಿಗ್ರಹಗಳನ್ನು ಇಡುವುದರಿಂದ ಅಂತಹ ಮನೆಯಲ್ಲಿ ಧನಾತ್ಮಕ ಶಕ್ತಿ ಪ್ರವೇಶಿಸುತ್ತದೆ
  • ಮಾತ್ರವಲ್ಲ, ಅಂತಹ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಕೂಡ ಕೊನೆಗೊಳ್ಳುತ್ತವೆ ಎಂದು ನಂಬಲಾಗಿದೆ.
  • ಹಾಗಿದ್ದರೆ, ಮನೆಯಲ್ಲಿ ಯಾವ ವಿಗ್ರಹವನ್ನು ಮನೆಯ ಯಾವ ದಿಕ್ಕಿನಲ್ಲಿ ಇಡಬೇಕು. ಇದರ ಪ್ರಯೋಜನಗಳೇನು ಎಂದು ತಿಳಿಯೋಣ...
Vastu Tips: ಈ ಪ್ರಾಣಿ ವಿಗ್ರಹಗಳನ್ನು ಮನೆಯ ಸರಿಯಾದ ದಿಕ್ಕಿನಲ್ಲಿಲ್ಲಿಟ್ಟರೆ ಸಂಪತ್ತು ಪ್ರಾಪ್ತಿ  title=

Vastu Tips For Animal Idol: ಸಾಮಾನ್ಯವಾಗಿ ನಮ್ಮಲ್ಲಿ ಕೆಲವರು ಮನೆಯ ಅಲಂಕಾರಕ್ಕಾಗಿ ವಿಗ್ರಹಗಳನ್ನು ತರುತ್ತಾರೆ. ಅವುಗಳಲ್ಲಿ ಕೆಲವರಿಗೆ ಪ್ರಾಣಿಗಳ ವಿಗ್ರಹಗಳನ್ನು ತರುವುದು ಒಂದು ರೀತಿಯ ಹವ್ಯಾಸವಾಗಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪ್ರತಿಯೊಂದು ಪ್ರಾಣಿಯೂ ಸಹ ಒಂದಲ್ಲಾ ಒಂದು ಗ್ರಹದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ, ಮನೆಯಲ್ಲಿ ಪ್ರಾಣಿಗಳ ವಿಗ್ರಹಗಳನ್ನು ತಂದಿಡುವಾಗ ಕೆಲವು ವಿಚಾರಗಳ ಬಗ್ಗೆ ನಿಗಾವಹಿಸುವುದು ಬಹಳ ಮುಖ್ಯ. ಇಲ್ಲವಾದರೆ, ಮನೆಯಲ್ಲಿ ವಾಸ್ತು ದೋಷ ಉಂಟಾಗಬಹುದು ಎಂದು ಹೇಳಲಾಗುತ್ತದೆ. 

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರಕ್ಕೂ ಕೂಡ ಬಹಳ ಮಹತ್ವವಿದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪ್ರಾಣಿಗಳ ವಿಗ್ರಹವನ್ನು ಮನೆಯಲ್ಲಿ ಇಡುವುದನ್ನು ತುಂಬಾ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಆದರೆ, ಇದನ್ನು ನೀವು ಯಾವ ಜಾಗದಲ್ಲಿ, ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸರಿಯಾದ ಜ್ಞಾನ ಹೊಂದಿರಬೇಕು. ಇಲ್ಲವಾದರೆ, ಅದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತರುವ ಬದಲಿಗೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಹುದು ಎನ್ನಲಾಗುತ್ತದೆ. 

ವಾಸ್ತವವಾಗಿ, ವಾಸ್ತು ಪ್ರಕಾರ ಮನೆಯಲ್ಲಿ ಪ್ರಾಣಿಗಳ ವಿಗ್ರಹಗಳನ್ನು ಇಡುವುದರಿಂದ ಅಂತಹ ಮನೆಯಲ್ಲಿ ಧನಾತ್ಮಕ ಶಕ್ತಿ ಪ್ರವೇಶಿಸುವುದರ ಜೊತೆಗೆ ಮನೆಯ ಹಣಕಾಸಿನ ಸಮಸ್ಯೆಗಳು ಕೂಡ ಕೊನೆಗೊಳ್ಳುತ್ತವೆ ಎಂದು ನಂಬಲಾಗಿದೆ. ಹಾಗಿದ್ದರೆ, ಮನೆಯಲ್ಲಿ ಯಾವ ವಿಗ್ರಹವನ್ನು ಮನೆಯ ಯಾವ ದಿಕ್ಕಿನಲ್ಲಿ ಇಡಬೇಕು. ಇದರ ಪ್ರಯೋಜನಗಳೇನು ಎಂದು ತಿಳಿಯೋಣ... 

ಇದನ್ನೂ ಓದಿ- Shani Jayanti Impact: ನಾಳೆಯಿಂದ ಈ ರಾಶಿಯವರಿಗೆ ಹಣದ ಸುರಿಮಳೆ

ಪ್ರಾಣಿಗಳ ವಿಗ್ರಹವನ್ನು ಮನೆಯಲ್ಲಿಡುವಾಗ ಈ ಅಂಶಗಳನ್ನು ನೆನಪಿನಲ್ಲಿಡಿ: - 
ಜೋಡಿ ಆನೆಗಳು: 

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಜೋಡಿ ಆನೆಗಳ ವಿಗ್ರಹವನ್ನು ಇಡುವುದನ್ನು ತುಂಬಾ ಶುಭ ಎಂದು ಹೇಳಲಾಗುತ್ತದೆ. ಇದರಿಂದ ಅಂತಹ ಮನೆಯಲ್ಲಿ ಒಗ್ಗಟ್ಟು ಮೂಡುತ್ತದೆ. ದಾಂಪತ್ಯವೂ ಸುಖಮಯವಾಗಿರುತ್ತದೆ ಎಂದು ನಂಬಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ,  ಮನೆಯಲ್ಲಿ ಹಿತ್ತಾಳೆ ಆನೆ ವಿಗ್ರಹಗಳನ್ನು ಇಡುವುದನ್ನು ಮಂಗಳಕರ ಎಂದು ಹೇಳಲಾಗುತ್ತದೆ. 

ಜೋಡಿ ಹಂಸ: 
ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಡ್ರಾಯಿಂಗ್ ರೂಮ್ ಅಥವಾ ಮಲಗುವ ಕೋಣೆಯಲ್ಲಿ ಜೋಡಿ ಹಂಸವನ್ನು ಇಡುವುದನ್ನು ಶುಭ ಎಂದು ಪರಿಗಣಿಸಲಾಗುತ್ತದೆ. ಇದರಿಂದ ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ ಎಂದು ನಂಬಲಾಗಿದೆ. 

ಆಮೆ: 
ವಿಷ್ಣುವಿನ ರೂಪ ಎಂದು ಪರಿಗಣಿಸಲಾಗಿರುವ ಆಮ್ಯಾ ವಿಗ್ರಹವನ್ನು ಮನೆಯ ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ಇಡುವುದು ತುಂಬಾ ಮಂಗಳಕರ. ಇದರಿಂದ ಮನೆಯಲ್ಲಿ ಸಂಪತ್ತು ವೃದ್ಧಿಯಾಗುತ್ತದೆ ಎಂದು ಹೇಳಲಾಗುತ್ತದೆ. 

ಇದನ್ನೂ ಓದಿ- ದುರಾದೃಷ್ಟವನ್ನು ಅದೃಷ್ಟವಾಗಿ ಬದಲಾಯಿಸಲು ಇಂದೇ ಮನೆಯಲ್ಲಿ ಈ ಸಸಿ ನೆಡಿ

ಹಸು: 
ಹಿಂದೂ ಧರ್ಮದಲ್ಲಿ ಹಸುವನ್ನು ಕಾಮಧೇನು ಎಂದು ಪೂಜಿಸಲಾಗುತ್ತದೆ. ಎಲ್ಲಾ ದೇವ-ದೇವತೆಗಳು ಹಸುವಿನಲ್ಲಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಹಾಗಾಗಿಯೇ ಮನೆಯಲ್ಲಿ ಹಸುವಿನ ವಿಗ್ರಹ ಮನೆಯಲ್ಲಿದ್ದರೆ ಅಂತಹ ಮನೆಯಲ್ಲಿ ಸುಖ-ಸಂತೋಷ ನೆಲೆಸುವುದು ಮಾತ್ರವಲ್ಲ, ಸಂಪತ್ತು ಕೂಡ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ. 

ಒಂಟೆ: 
ಒಂಟೆ ಹೋರಾಟ ಮತ್ತು ಯಶಸ್ಸಿನ ಸಂಕೇತ ಎಂದು ಬಣ್ಣಿಸಲಾಗುತ್ತದೆ. ಹಾಗಾಗಿ, ಮನೆಯಲ್ಲಿ ಒಂಟೆ ವಿಗ್ರಹವನ್ನು ಇಡುವುದರಿಂದ ಮನೆಯವರಿಗೆ ಪ್ರತಿ ಕೆಲಸದಲ್ಲೂ ಅದೃಷ್ಟದ ಬೆಂಬಲ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕಾಗಿ, ಒಂಟೆ ವಿಗ್ರಹವನ್ನು ಮನೆಯ ಡ್ರಾಯಿಂಗ್ ರೂಂ, ಇಲ್ಲವೇ ಲಿವಿಂಗ್ ರೂಂನ ವಾಯುವ್ಯ ದಿಕ್ಕಿನಲ್ಲಿ ಇಡಲು ಸೂಚಿಸಲಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News