)
Tulsi Astro tips: ತುಳಸಿ ಗಿಡವನ್ನು ಎಲ್ಲ ರೀತಿಯಿಂದಲೂ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿಯೂ ತುಳಸಿ ಸಸ್ಯವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಮನೆಯಲ್ಲಿ ಇದನ್ನು ನೆಡುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತವೆ. ತುಳಸಿ ಗಿಡವನ್ನು ಲಕ್ಷ್ಮಿ ದೇವಿಯ ಒಂದು ರೂಪ ಎಂದು ಹೇಳಲಾಗುತ್ತದೆ. ಅಂದರೆ ತುಳಸಿ ಎಲ್ಲಿದೆಯೋ ಅಲ್ಲಿ ಲಕ್ಷ್ಮಿ ದೇವಿಯು ಆಗಮಿಸುತ್ತಾಳೆ.
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ಸಂತೋಷ ಬರುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡವನ್ನು ಉತ್ತರ, ಈಶಾನ್ಯ ಅಥವಾ ಪೂರ್ವ ದಿಕ್ಕಿನಲ್ಲಿ ಇಡಬೇಕು. ತುಳಸಿ ಗಿಡವನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಡಬಾರದು.
ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡವನ್ನು ತಪ್ಪು ದಿಕ್ಕಿನಲ್ಲಿ ಇರಿಸಿದರೆ ಅದು ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈಶಾನ್ಯ ದಿಕ್ಕನ್ನು ಸಂಪತ್ತಿನ ದೇವರು ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ.
ಮನೆಯ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ತುಳಸಿಯನ್ನು ಈಶಾನ್ಯ ದಿಕ್ಕಿನಲ್ಲಿ ನೆಡಬೇಕು. ತುಳಸಿ ಗಿಡ ಒಣಗಿದರೆ, ಅದನ್ನು ತೆಗೆದು ನದಿಯಲ್ಲಿ ಅಥವಾ ಹತ್ತಿರದ ಬಾವಿಯಲ್ಲಿ ಹಾಕಿ.
ತುಳಸಿಯನ್ನು ಮನೆಯ ಒಳಗೆ ಅಥವಾ ಹಿತ್ತಲಿನಲ್ಲಿ ಎಂದಿಗೂ ಇಡಬಾರದು. ತುಳಸಿಯನ್ನು ಸದಾ ಮನೆಯ ಅಂಗಳದಲ್ಲಿ ಮುಖ್ಯದ್ವಾರದ ಬಳಿ ನೆಡಬೇಕು. ಇದರಿಂದ ಲಕ್ಷ್ಮೀ ದೇವಿ ನಿಮ್ಮ ಮನೆಯಲ್ಲಿ ಶಾಶ್ವತವಾಗಿ ನೆಲೆಸುವಳು.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.