Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿಯ ಈ ದಿನ ಗುರುವಾರ, ಉ.ಷಾ. ನಕ್ಷತ್ರ, ವೃದ್ಧಿ ಯೋಗ, ಬವ ಕರಣ. ಮೇಷದಿಂದ ಮೀನ ರಾಶಿಯವರೆಗೆ ಇಂದಿನ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಬಿಡುವಿಲ್ಲದ ದಿನವನ್ನು ನೀವು ಅನುಭವಿಸುವಿರಿ. ಆದಾಗ್ಯೂ, ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುವುದರಿಂದ ಲಾಭದಾಯಕ ದಿನವನ್ನು ನಿರೀಕ್ಷಿಸಬಹುದು. ನಿಮ್ಮ ಗುರಿಗಳ ಮೇಲೆ ಗಮನ ಕೇಂದ್ರೀಕರಿಸುವುದರಿಂದ ಯಶಸ್ಸು ನಿಮ್ಮದಾಗುತ್ತದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನೀವಿಂದು ವಿಶ್ರಾಂತಿ ಪಡೆಯುವುದರಿಂದ ದಿನವನ್ನು ಅದ್ಭುತವಾಗಿಸಬಹುದು. ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ. ವ್ಯಾಪಾರಸ್ಥರು ಲಾಭವನ್ನು ನಿರೀಕ್ಷಿಸಬಹುದು. ಮನೆಯಲ್ಲಿ ಅತಿಥಿಗಳ ಆಗಮನವು ವಾತಾವರಣವನ್ನು ಸುಧಾರಿಸುತ್ತದೆ. ಸಂಜೆ ಕುಟುಂಬದೊಂದಿಗೆ ವಿನೋದಮಯ ಸಮಯವನ್ನು ಆನಂದಿಸುವಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಿಮ್ಮ ಆಹಾರ ಕ್ರಮವನ್ನು ಬದಲಾಯಿಸುವುದು ಅವಶ್ಯಕ. ಹಣಕಾಸಿನ ನೆರವು ನಿಮ್ಮ ದಾರಿಗೆ ಬರಬಹುದು. ವೃತ್ತಿಪರ ಸಲಹೆಗಳನ್ನು ಪಾಲಿಸುವುದು ಪ್ರಯೋಜನಕಾರಿ ಆಗಿದೆ. ಗೃಹಿಣಿಯರು ಮನೆಯ ಅಲಂಕಾರದಲ್ಲಿ ಕೆಲವು ಬದಲಾವಣೆಗಳನ್ನು ಯೋಜಿಸಬಹುದು.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ಹಣಕಾಸಿನ ಹರಿವು ಹೆಚ್ಚಾಗಿ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿದೆ. ನೀವು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸ್ವಲ್ಪ ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವುದು ಮನಸ್ಸಿಗೆ ಆನಂದವನ್ನು ತರುತ್ತದೆ.
ಇದನ್ನೂ ಓದಿ- 2025ರಲ್ಲಿ ಶುಕ್ರ-ರಾಹು ಸಂಯೋಗದಿಂದ ಈ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಹಠಾತ್ ಧನಲಾಭ, ಹೆಜ್ಜೆ ಹೆಜ್ಜೆಗೂ ವಿಜಯಮಾಲೆ!
ಸಿಂಹ ರಾಶಿಯವರ ಭವಿಷ್ಯ (Leo Horoscope):
ವೃತ್ತಿಪರರು ಇಂದು ಮೇಲಾಧಿಕಾರಿಗಳಿಂದ ಪ್ರಶಂಸೆಯ ಮಾತುಗಳನ್ನು ಕೇಳುವಿರಿ. ಇದು ನಿಮ್ಮ ದಿನವನ್ನು ವಿಶೇಷವಾಗಿಸುತ್ತದೆ. ನಿಮ್ಮ ಹತ್ತಿರದವರೊಂದಿಗೆ ಒಂದು ಸುಂದರ ಪ್ರವಾಸಕ್ಕಾಗಿ ಯೋಜಿಸಬಹುದು. ಮನೆಕೆಲಸಗಳಿಗಾಗಿ ನೀವು ಸಹಾಯಹಸ್ತವನ್ನು ಚಾಚಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಫಿಟ್ನೆಸ್ ಗೆ ಆದ್ಯತೆ ನೀಡುವುದನ್ನು ಪರಿಗಣಿಸಿ. ಹಣಕಾಸಿನ ವಿಷಯಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ವಾಸಸ್ಥಳದಲ್ಲಿ ಬದಲಾವಣೆ ಸಾಧಯ್ತೆ ಇದೆ. ಆಸ್ತಿ ವಿಚಾರದಲ್ಲಿ ನಿಕಟ ಸಂಬಂಧಿಕರೊಂದಿಗೆ ಉದ್ವಿಗ್ನತೆ ಉಂಟಾಗಬಹುದು.
ತುಲಾ ರಾಶಿಯವರ ಭವಿಷ್ಯ (Libra Horoscope):
ಈ ದಿನವು ನಿಮಗೆ ಮಿಶ್ರ ಫಲಗಳಿಂದ ಕೂಡಿರಲಿದೆ. ಸಂಭಾವ್ಯ ಅಡೆತಡೆಗಳಿಂದಾಗಿ ಕ್ಲಾಸದಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುವುದನ್ನು ತಪ್ಪಿಸಿ. ವ್ಯವಹಾರದಲ್ಲಿ ತೀವ್ರ ಪೈಪೋಟಿಯ ನಡುವೆಯೂ ಒಪ್ಪಂದಕ್ಕೆ ಸಹಿ ಹಾಕುವಿರಿ. ವ್ಯವಹಾರಕ್ಕೆ ಸಂಬಂಧಿಸಿದ ಪ್ರಯಾಣವು ಲಾಭದಾಯಕವಾಗಿರಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಉದ್ಯೋಗ ಬದಲಾವನೆಯು ನೀವು ಯೋಜಿಸಿದಂತೆ ನಡೆಯದಿರಬಹುದು. ಆದರೆ, ಶೀಘ್ರದಲ್ಲೇ ನಿಮಗೆ ಶುಭ ಸುದ್ದಿ ದೊರೆಯಲಿದೆ. ಹೊಸ ಆಹಾರಕ್ರಮವು ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. ಪೋಷಕರಲ್ಲಿ ವಿಶ್ವಾಸವಿಡುವುದು ಸಹಾಯಕವಾಗಲಿದೆ.
ಇದನ್ನೂ ಓದಿ- ಮನೆಯಿಂದ 'ನಕಾರಾತ್ಮಕ ಶಕ್ತಿ' ಹೊರಹಾಕಲು ಈ ಸಿಂಪಲ್ ವಾಸ್ತು ಟಿಪ್ಸ್ ಫಾಲೋ ಮಾಡಿ!
ಧನು ರಾಶಿಯವರ ಭವಿಷ್ಯ (Sagittarius Horoscope):
ಭವಿಷ್ಯಕ್ಕಾಗಿ ಹಣ ಉಳಿತಾಯ ಮಾಡುವುದನ್ನು ಪರಿಗಣಿಸಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿದರೆ ನಿಮ್ಮ ಸಂಪತ್ತು ವೃದ್ಧಿಯಾಗಲಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಜಿಸಬಹುದು. ಆಸ್ತಿ ವ್ಯವಹಾರದಲ್ಲಿ ಸಮಯವು ನಿಮ್ಮ ಪರವಾಗಿರಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಉಳಿತಾಯವನ್ನು ಹೆಚ್ಚಿಸುವ ಮಾರ್ಗಗಳನ್ನು ಕಂಡುಕೊಳ್ಳಬಹುದು. ತುರ್ತು ವಿಷಯಗಳಿಗಾಗಿ ನೀವು ಪ್ರವಾಸ ಕೈಗೊಳ್ಳಬೇಕಾಗಬಹುದು. ಆಸ್ತಿಯಲ್ಲಿ ಹೂಡಿಕೆಯು ಉತ್ತಮ ಆದಾಯವನ್ನು ನೀಡುತ್ತದೆ. ಶೈಕ್ಷಣಿಕ ಪ್ರಗತಿಯು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನೀವಿಂದು ಅಗತ್ಯವಾದ ವಿಶ್ರಾಂತಿ ಪಡೆಯುವುದರಿಂದ ಆರೋಗ್ಯವನ್ನು ಸುಧಾರಿಸಬಹುದು. ಹಣಕಾಸಿನ ವಿಷಯಗಳು ಕಾಳಜಿಯನ್ನು ಹೆಚ್ಚಿಸಬಹುದು. ಆಸ್ತಿ ವಿಚಾರವಾಗಿ ಸಾಲವನ್ನು ಪಡೆಯಲು ಯೋಜಿಸುತ್ತಿದ್ದರೆ ಇಂದು ಶುಭ ಸುದ್ದಿ ನಿರೀಕ್ಷಿಸಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ಅಗತ್ಯ ವಸ್ತುಗಳಿಗಾಗಿ ಶಾಪಿಂಗ್ ಮಾಡಬಹುದು. ಕೆಲಸದ ಲಾಭವನ್ನು ಕ್ರೋಢೀಕರಿಸಲು ಇದು ಉತ್ತಮ ಸಮಯ. ನಿರಂತವಾಗಿ ಚರ್ಮದ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಇಂದು ಪರಿಹಾರ ದೊರೆಯುವ ಸಾಧ್ಯತೆ ಇದೆ. ಕುಟುಂಬದ ಹಿರಿಯರ ಭಾವನೆಗಳನ್ನು ಗೌರವಿಸಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.