)
Varabhavishya in Kannada June 30th to July 06th: ಜುಲೈ ತಿಂಗಳ ಮೊದಲ ವಾರ ಮಿಥುಯ ರಾಶಿಯಲ್ಲಿ ಗುರು, ಕರ್ಕಾಟಕ ರಾಶಿಯಲ್ಲಿ ಚಂದ್ರನ ಸಂಚಾರದಿಂದ ಬಲಶಾಲಿ ಗಜಕೇಸರಿ ರಾಜಯೋಗ ನಿರ್ಮಾಣವಾಗಲಿದೆ. ಈ ವಾರ ಕೆಲವು ರಾಶಿಯವರ ಬದುಕಿನಲ್ಲಿ ಭಾರೀ ಅದೃಷ್ಟ ಖುಲಾಯಿಸಲಿದ್ದು ಭಾಗ್ಯದ ಬಾಗಿಲುಗಳು ತೆರೆಯಲಿವೆ.
ಮೇಷ ರಾಶಿಯವರ ವಾರ ಭವಿಷ್ಯ (Aries Weekly Horoscope):
ಈ ರಾಶಿಯವರು ಈ ವಾರ ಪ್ರಮುಖ ದಾಖಲೆಗಳ ವಿಚಾರದಲ್ಲಿ ತುಂಬಾ ಜಾಗರೂಕರಾಗಿರಿ. ಕುಟುಂಬದ ಮುಖ್ಯಸ್ಥರ ಆರೋಗ್ಯದ ಬಗ್ಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿರುತ್ತದೆ. ಆದಾಯ ಕಡಿಮೆ ಆಗಲಿದ್ದು ದೂರದ ಪ್ರಯಾಣದ ಸಂಭವವಿದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗಿಗಳು ಸ್ವಲ್ಪ ಸಂಯಮದಿಂದ ಇರುವುದು ಅಗತ್ಯ.
ವೃಷಭ ರಾಶಿಯವರ ವಾರ ಭವಿಷ್ಯ (Taurus Weekly Horoscope):
ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸದಿದ್ದರೆ ಭಾರೀ ನಷ್ಟ. ಅನಿವಾರ್ಯವಲ್ಲದಿದ್ದರೆ ದೂರದ ಪ್ರಯಾಣವನ್ನು ಮುಂದೂಡುವುದು ಉತ್ತಮ. ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳದಿರಬಹುದು. ಹಣಕಾಸಿನ ವ್ಯವಹಾರಗಳು ನಿರಾಶಾದಾಯಕವಾಗಿರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದರಿಂದ ಸಮಸ್ಯೆಗಳು ಉಲ್ಬಣಿಸಬಹುದು.
ಮಿಥುನ ರಾಶಿಯವರ ವಾರ ಭವಿಷ್ಯ (Gemini Weekly Horoscope):
ಈ ರಾಶಿಯವರು ಸ್ತ್ರೀ ಸಂಬಂಧಿ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ನೂತನ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆದಾಯ ಮಾರ್ಗಗಳು ಆಶಾದಾಯಕವಾಗಿರುತ್ತವೆ. ಆದರೆ, ವ್ಯಾಪಾರಿಗಳಿಗೆ ಅಧಿಕಾರಿಗಳೊಂದಿಗೆ ವಿವಾದಗಳು ನಿರ್ಮಾಣವಾಗಬಹುದು.
ಕರ್ಕಾಟಕ ರಾಶಿಯವರ ವಾರ ಭವಿಷ್ಯ (Cancer Weekly Horoscope):
ಈ ವಾರ ಶತ್ರುಗಳೂ ಸಹ ಮಿತ್ರರಾಗುವ ಸಂಭವವಿದೆ. ಹಿಂದೆ ನೀಡಿದ ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಸಮಾಜದಲ್ಲಿ ಗೌರವ, ಕೀರ್ತಿ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ವ್ಯವಹಾರವು ಈ ವಾರ ಲಾಭದಾಯಕವಾಗಿರುತ್ತವೆ.
ಸಿಂಹ ರಾಶಿಯವರ ವಾರ ಭವಿಷ್ಯ (Leo Weekly Horoscope):
ಈ ವಾರ ದೈವಿಕ ಸೇವೆಗಳಿಗೆ ಹಣ ವ್ಯಯವಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ಬಾಲ್ಯದ ಗೆಳೆಯರೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಮರುಪರಿಶೀಲಿಸುವುದು ಉತ್ತಮ. ಉದ್ಯೋಗಾಕಾಂಕ್ಷಿಗಳಿಗೆ ಕೆಲವು ಅನುಕೂಲಕರ ವಾತಾವರಣವಿರುತ್ತದೆ.
ಕನ್ಯಾ ರಾಶಿಯವರ ವಾರ ಭವಿಷ್ಯ (Virgo Weekly Horoscope):
ದೈವಿಕ ಸೇವಾ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಉದ್ಯೋಗ ರಂಗದಲ್ಲಿ ಒತ್ತಡ ಹೆಚ್ಚಾಗಬಹುದು. ಇತರರಿಗೆ ಹಣ ನೀಡುವ ಮೊದಲು ಯೋಚಿಸುವುದು ಉತ್ತಮ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರ ವಿಸ್ತರಣೆಗೆ ತೆಗೆದುಕೊಂಡ ನಿರ್ಧಾರಗಳು ಸ್ವಲ್ಪ ವಿರುದ್ಧ ಫಲಿತಾಂಶಗಳನ್ನು ನೀಡುತ್ತವೆ.
ತುಲಾ ರಾಶಿಯವರ ವಾರ ಭವಿಷ್ಯ (Libra Weekly Horoscope):
ಅನಾವಶ್ಯಕವಾಗಿ ಬೇರೆಯವರ ವಿಷಯದಲ್ಲಿ ಮೂಗು ತೂರಿಸಬೇಡಿ. ಇದರಿಂದ ನಿಮ್ಮ ಮಾತಿನ ಬೆಲೆ ಕಡಿಮೆಯಾಗುತ್ತದೆ. ಸಂಗಾತಿಯೊಂದಿಗೆ ವಿವಾದಗಳಿರುತ್ತವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸದಿರುವುದು ಉತ್ತಮ. ಸಹೋದರ ಸಹೋದರಿಯರ ನಡುವೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ವ್ಯಾಪಾರ ವ್ಯವಹಾರಗಳು ಸ್ವಲ್ಪ ನಿಧಾನವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚು ಜಾಗರೂಕರಾಗಿರಿ.
ವೃಶ್ಚಿಕ ರಾಶಿಯವರ ವಾರ ಭವಿಷ್ಯ (Scorpio Weekly Horoscope):
ಈ ವಾರ ವ್ಯರ್ಥ ಖರ್ಚುಗಳ ಬಗ್ಗೆ ಜಾಗರೂಕರಗಿರಿ. ಕಣ್ಣು ಸಂಬಂಧಿತ ಸಮಸ್ಯೆಗಳಿದ್ದರೆ ನಿರ್ಲಕ್ಷಿಸಬೇಡಿ. ಆರ್ಥಿಕ ವಿಚಾರದಲ್ಲಿ ಮಿಶ್ರಫಲಪ್ರದವಾದ ವಾರ. ದೈವಿಕ ಚಿಂತನೆಗಳು ಹೆಚ್ಚಾಗುತ್ತದೆ. ವೃತ್ತಿಪರ ಕೆಲಸಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಕಾರ್ಯರೂಪಕ್ಕೆ ಬರಲು ಶ್ರಮಿಸಬೇಕಾಗಬಹುದು. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತವೆ.
ಧನು ರಾಶಿಯವರ ವಾರ ಭವಿಷ್ಯ (Sagittarius Weekly Horoscope):
ಈ ವಾರ ಗಜಕೇಸರಿ ಯೋಗದಿಂದ ಅದೃಷ್ಟದ ಬಾಗಿಲುಗಳು ತೆರೆಯುತ್ತವೆ. ನಿರುದ್ಯೋಗಿಗಳಿಗೆ ಅಧಿಕಾರಿಗಳ ನೆರವಿನಿಂದ ಹೊಸ ಅವಕಾಶಗಳು ಸಿಗುತ್ತವೆ. ಪ್ರಮುಖ ಕೆಲಸಗಳಲ್ಲಿ ಕುಟುಂಬ ಸದಸ್ಯರಿಂದ ನಿರೀಕ್ಷಿತ ಬೆಂಬಲ ದೊರೆಯುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವೃತ್ತಿಪರರಿಗೆ ಬಡ್ತಿ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಲಾಭ ದೊರೆಯುತ್ತದೆ.
ಮಕರ ರಾಶಿಯವರ ವಾರ ಭವಿಷ್ಯ (Capricorn Weekly Horoscope):
ಈ ವಾರ ಹಣದ ವಿಷಯದಲ್ಲಿ ಅಷ್ಟು ಉತ್ತಮವಾಗಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹೊಸ ಸಾಲವನ್ನು ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆಯಿಂದ ಇರಿ.
ಕುಂಭ ರಾಶಿಯವರ ವಾರ ಭವಿಷ್ಯ (Aquarius Weekly Horoscope):
ರಾಜಕೀಯ ವರ್ಗದಲ್ಲಿರುವವರಿಗೆ ವಿಶೇಷ ಆಹ್ವಾನಗಳು ಬರುತ್ತವೆ. ಸ್ನೇಹಿತರಿಂದ ನಿರೀಕ್ಷಿತ ಆರ್ಥಿಕ ಸಹಾಯ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ. ಕೌಟುಂಬಿಕ ಸಮಸ್ಯೆಗಳು ರಾಜಿಯಾಗುತ್ತವೆ.
ಮೀನ ರಾಶಿಯವರ ವಾರ ಭವಿಷ್ಯ (Pisces Weekly Horoscope):
ಈ ವಾರ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ. ವ್ಯಾಪಾರ ಯೋಜನೆಗಳನ್ನು ಜಾರಿಗೆ ತರಲು ಉತ್ತಮವಾದ ವಾರ. ವೃತ್ತಿಪರ ಕ್ಷೇತ್ರದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ನಿರುದ್ಯೋಗಿಗಳು ನಿಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಆರ್ಥಿಕವಾಗಿ ಅನುಕೂಲಕರ ಸಮಯ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.