IPL 2021 ಹರಾಜಿನಲ್ಲಿ ಕರ್ನಾಟಕದ 14 ಜನ ಆಟಗಾರರು..!
ಹರಾಜಿನಲ್ಲಿ ಪಾಲ್ಗೊಳ್ಳಲಿರುವ ಒಟ್ಟು 292 ಆಟಗಾರರ ಪಟ್ಟಿಯನ್ನು ಬಿಸಿಸಿಐ ಅಂತಿಮಗೊಳಿಸಿದೆ.
ನವದೆಹಲಿ: ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಫೆಬ್ರವರಿ 18ರಂದು ಚೆನ್ನೈನಲ್ಲಿ ನಡೆಯಲಿರುವ 2021ರ ಐಪಿಎಲ್ ಹರಾಜಿನಲ್ಲಿ ಕರ್ನಾಟಕದ 14 ಆಟಗಾರರು ಪಾಲ್ಗೊಳ್ಳಲಿದ್ದಾರೆ.
ಕರುಣ್ ನಾಯರ್, ಅಭಿಮನ್ಯು ಮಿಥುನ್, ಕೃಷ್ಣಪ್ಪ ಗೌತಮ್, ಜೆ. ಸುಚಿತ್, ರೋನಿತ್ ಮೋರೆ ಸೇರಿದಂತೆ ರಾಜ್ಯ ತಂಡದ ಪ್ರಮುಖ 14 ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳಲಿದ್ದಾರೆ. ಹರಾಜಿನಲ್ಲಿ ಪಾಲ್ಗೊಳ್ಳಲಿರುವ ಒಟ್ಟು 292 ಆಟಗಾರರ ಪಟ್ಟಿಯನ್ನು ಬಿಸಿಸಿಐ(BCCI) ಅಂತಿಮಗೊಳಿಸಿದೆ.
India vs England: 2nd Test ಪಂದ್ಯದಿಂದ ಹೊರಗುಳಿದ ವೇಗದ ಬೌಲರ್, ಇಂಗ್ಲೆಂಡ್‌ಗೆ ದೊಡ್ಡ ಆಘಾತ
ಈ ಬಾರಿಯ ಹರಾಜಿಗೆ 1114 ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಈ ಪೈಕಿ 8 ಫ್ರಾಂಚೈಸಿಗಳು ಒಟ್ಟು 292 ಆಟಗಾರರನ್ನು ಅಂತಿಮವಾಗಿ ಹರಾಜಿಗೆ ಹೆಸರನ್ನು ಫೈನಲ್ ಮಾಡಿವೆ. 8 ವರ್ಷಗಳ ನಿಷೇಧದ ಬಳಿಕ ಐಪಿಎಲ್(IPL 2021) ಆಡುವ ಕನಸು ಕಾಣುತ್ತಿದ್ದ ಟೀಂ ಇಂಡಿಯಾ ವೇಗಿ ಶ್ರೀಶಾಂತ್‌ಗೆ ನಿರಾಸೆಯಾಗಿದ್ದು, ಅಂತಿಮ 292 ಆಟಗಾರರ ಪಟ್ಟಿಯಲ್ಲಿ ಕೇರಳ ವೇಗಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಅಜಿಂಕ್ಯಾ ರಹಾನೆ ಬ್ಯಾಟಿಂಗ್ ಫಾರ್ಮ್ ಬಗ್ಗೆ ಪ್ರಶ್ನೆ ಎತ್ತಿದ ಸಂಜಯ್ ಮಂಜ್ರೇಕರ್
ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ(Cheteshwar Pujara) ಕೂಡಾ ಈ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. 2014ರ ಬಳಿಕ ಐಪಿಎಲ್ ಆಡದ ಪೂಜಾರ ಮೂಲ ಬೆಲೆ 50 ಲಕ್ಷ ರುಪಾಯಿ ನಿಗದಿಪಡಿಸಲಾಗಿದೆ. ಈ ಹಿಂದೆ ಪೂಜಾರ ಕಿಂಗ್ಸ್ ಇಲೆವನ್ ಪಂಜಾಬ್, ಕೋಲ್ಕತ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು.
Ind vs Eng: ಚೆನ್ನೈನಲ್ಲಿ ಇತಿಹಾಸ ರಚಿಸಲಿದೆಯೇ Team India
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.