Indian players with the most Man of the Match: ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಜೊತೆಗೆ ಇದರ ಜೊತೆ ಜೊತೆಗೆ ಯೋ-ಯೋ ಟೆಸ್ಟ್ ಕೂಡ ನಡೆದಿದ್ದು, ರಿಸಲ್ಟ್ ಹೊರಬಿದ್ದಿದೆ. ವಿಶ್ವಕಪ್ ಕೂಡ ಈ ಬಾರಿ ಭಾರತದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರೀ ಸಿದ್ಧತೆ ಕೈಗೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಈ ಎಲ್ಲದರ ಮಧ್ಯೆ ನಾವಿಂದು ಐಸಿಸಿ ಮತ್ತು ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಯಾರೆಂಬುದರ ಕುರಿತು ಮಾಹಿತಿ ನೀಡಲಿದ್ದೇವೆ.


ಇದನ್ನೂ ಓದಿ: Yo-Yo Testನಲ್ಲಿ ಫೇಲ್: ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಆಯ್ಕೆಯಾಗಿದ್ದ 5 ಆಟಗಾರರು ಔಟ್!


ಆಧುನಿಕ ಯುಗದ ಶ್ರೇಷ್ಠರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ODI ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದಾರೆ. ಇವರು 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಭಾರತದ ಪರ ಅತಿ ಹೆಚ್ಚು ಪಂದ್ಯಶ್ರೇಷ್ಠ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇವರು ಒಟ್ಟು 12 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ.


ಟೀಮ್ ಇಂಡಿಯಾ ಕ್ಯಾಪ್ಟನ್ ಹಾಗೂ ಆರಂಭಿಕ ಆಟಗಾರ, ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಐಸಿಸಿ ಮತ್ತು ಏಷ್ಯಾಕಪ್ ಇತಿಹಾಸದಲ್ಲಿ ಒಟ್ಟು 10 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಇನ್ನು ನಾಲ್ಕನೇ ಸ್ಥಾನದಲ್ಲಿ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಇದ್ದು, ಇವರು ಐಸಿಸಿ-ಏಷ್ಯಾಕಪ್ ಇತಿಹಾಸದಲ್ಲಿ 9 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಬಾಚಿಕೊಂಡಿದ್ದಾರೆ.


ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ‘ದಾದಾ’ ಎಂದೇ ಖ್ಯಾತಿ ಪಡೆದವರು. ಇವರಿಗೆ ಒಟ್ಟು 8 ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ‌.


ಇದನ್ನೂ ಓದಿ: ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ 88.17 ಮೀಟರ್ ದೂರ ಜಾವೆಲಿನ್ ಎಸೆದ ವಿಡಿಯೋ


ಸದ್ಯ ಕೆಲ ಸಮಯದಿಂದ ಟೀಮ್‌ ಇಂಡಿಯಾದಿಂದ ಹೊರಗುಳಿದಿರುವ ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ 7 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.