cricketer died of a heart attack: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹಳ್ಳಿಯೊಂದರಲ್ಲಿ 22 ವರ್ಷದ ಯುವಕನೊಬ್ಬ ಕ್ರಿಕೆಟ್ ಆಡುತ್ತಿದ್ದಂತೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ. ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಜಿಲ್ಲೆಯ ಬಲ್ವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್‌ಕೂಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬೀದಿನಾಯಿಯನ್ನು ದತ್ತು ಪಡೆದ ನಟಿ ಜ್ಯೋತಿಕಾ ಆ ನಾಯಿಗೆ ಇಟ್ಟಿದ್ದು ಈ ತಾರೆಯ ಹೆಸರನ್ನು…!


ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಬರ್ವಾ ಸಿವಿಲ್ ಆಸ್ಪತ್ರೆಯ ಡಾ.ವಿಕಾಸ್ ತಲ್ವಾರ್ ಹೇಳಿದ್ದಾರೆ. ಆಸ್ಪತ್ರೆಗೆ ಕರೆತರುವ ಮುನ್ನವೇ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.


ಮೃತನನ್ನು ಇಂದಲ್ ಸಿಂಗ್ ಜಾದವ್ ಬಂಜಾರಾ ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಆತ ವಿಶ್ರಾಂತಿ ಪಡೆಯಲೆಂದು ಮರದ ಕೆಳಗೆ ಕುಳಿತುಕೊಂಡಿದ್ದಾರೆ. ಆದರೆ ನೋವು ಹೆಚ್ಚಾದಂತೆ, ಇತರ ಆಟಗಾರರ ಬಳಿ ತನ್ನನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ:  ಸಾಯಿ ಪಲ್ಲವಿ ದತ್ತು ಪುತ್ರಿಯೇ? ಅವರ ನಿಜವಾದ ತಂದೆ ತಾಯಿ ಯಾರೆಂದು ಸೀಕ್ರೆಟ್ ಬಿಚ್ಚಿಟ್ಟ ಬ್ಯೂಟಿ


ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಗಮನಿಸಬೇಕಾದ ಸಂಗತಿ. ಯಾವುದೇ ನಿರ್ದಿಷ್ಟ ಕಾರಣವಿಲ್ಲದೆ ಯುವಕರು ಹೃದಯಾಘಾತಕ್ಕೆ ಬಲಿಯಾದ ಅನೇಕ ಉದಾಹರಣೆಗಳಲ್ಲಿ ಇದು ಕೂಡ ಒಂದು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ