ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ: ಅಭಿಮಾನಿಗಳಲ್ಲಿ ಮನೆ ಮಾಡಿದ ಆತಂಕ!
IND vs AUS: ಶುಕ್ರವಾರ ಅಂದರೆ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮಳೆಯು ಅಡ್ಡಿಯಾಗುವ ಸಾಧ್ಯತೆ ಇದೆ. ಮುಂಬೈನಲ್ಲಿ ಗುರುವಾರದಿಂದಲೇ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ದಟ್ಟ ಮೋಡಗಳು ಕೂಡ ಇರುವುದರಿಂದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ.
IND vs AUS: ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಂತರ ಇದೀಗ ಏಕದಿನ ಸರಣಿ ನಡೆಯಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ನಂತರ ತಂಡವು ಈಗ ODI ಸರಣಿಯಲ್ಲೂ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ. ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಕೆಟ್ಟ ಸುದ್ದಿಯೊಂದು ಹೊರಬಿದ್ದಿದ್ದು, ಇದನ್ನು ಕೇಳಿ ತಂಡ ಹಾಗೂ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಇದನ್ನೂ ಓದಿ: 10 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಈ ಮಾರಕ ಬೌಲರ್! ಈತನ ಬೌಲಿಂಗ್ ಸ್ಪೀಡ್ ಗಂಟೆಗೆ 140 ಕಿ.ಮೀ!
ಪಂದ್ಯಕ್ಕೂ ಮುನ್ನ ಕೆಟ್ಟ ಸುದ್ದಿ:
ಶುಕ್ರವಾರ ಅಂದರೆ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮಳೆಯು ಅಡ್ಡಿಯಾಗುವ ಸಾಧ್ಯತೆ ಇದೆ. ಮುಂಬೈನಲ್ಲಿ ಗುರುವಾರದಿಂದಲೇ ಮಳೆ ಸುರಿಯಲಾರಂಭಿಸಿದೆ. ಇದರೊಂದಿಗೆ ದಟ್ಟ ಮೋಡಗಳು ಕೂಡ ಇರುವುದರಿಂದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಅಡಚಣೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಮಾರ್ಚ್ 17ರವರೆಗೆ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಿರುವಾಗ ಶುಕ್ರವಾರವೂ ಇದೇ ವಾತಾವರಣ ಮುಂದುವರಿದರೆ ಪಂದ್ಯದ ಮೇಲೂ ಸಂಕಷ್ಟದ ಮೋಡ ಕವಿದಿರುವುದು ಸ್ಪಷ್ಟ.
ಹಾರ್ದಿಕ್ ಪಾಂಡ್ಯ ನಾಯಕತ್ವ:
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಮಾದರಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸುತ್ತಿರುವುದು ಇದೇ ಮೊದಲು. ಟಿ 20 ವಿಶ್ವಕಪ್ 2022 ರಿಂದ ಹಾರ್ದಿಕ್ ಪಾಂಡ್ಯ ಟಿ20 ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ. ಇನ್ನು ಟಿ20 ಮಾದರಿಯಲ್ಲಿ ಪಾಂಡ್ಯ ಅವರ ಅಂಕಿಅಂಶಗಳು ಸಾಕಷ್ಟು ಆಕರ್ಷಕವಾಗಿವೆ. ಇದುವರೆಗೆ 11 ಟಿ-20 ಪಂದ್ಯಗಳಲ್ಲಿ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದು, ಈ ಪೈಕಿ ಟೀಂ ಇಂಡಿಯಾ 8 ಪಂದ್ಯಗಳಲ್ಲಿ ಗೆದ್ದು ಕೇವಲ 2 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಅಲ್ಲಿ ಒಂದು ಪಂದ್ಯ ಅನಿರ್ದಿಷ್ಟವಾಗಿಯೇ ಉಳಿದಿದೆ.
ಭಾರತ ತಂಡ - ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಲೋಕೇಶ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್.
ಇದನ್ನೂ ಓದಿ: ಸತತ ಸೋಲಿನ ಬಳಿಕ ಯುಪಿ ವಾರಿಯರ್ಸ್ ವಿರುದ್ಧ ಗೆದ್ದುಬೀಗಿದ RCB: ಪ್ಲೇ ಆಫ್ ಕನಸು ಜೀವಂತ!
ಆಸ್ಟ್ರೇಲಿಯಾ ತಂಡ - ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ .
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.