IND vs AUS Test Series: ಮುಂದಿನ ತಿಂಗಳಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 4 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗೂ ಮುನ್ನ ಆಸ್ಟ್ರೇಲಿಯಾ ಪಾಳಯದಿಂದ ದೊಡ್ಡ ಸುದ್ದಿಯೊಂದು ಹೊರಬೀಳುತ್ತಿದೆ. ಈ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ತಂಡದ ದೊಡ್ಡ ಮ್ಯಾಚ್ ವಿನ್ನರ್ ಆಟಗಾರನನ್ನು ಹೊರಗಿಡಲಾಗಿದೆ. ಈ ಆಟಗಾರ ಸ್ವತಃ ಮೊದಲ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂದು ಖಚಿತಪಡಿಸಿದ್ದಾರೆ. ಎರಡು ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ರಿಷಬ್ ಡಿಸ್ಚಾರ್ಜ್!


ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಖಚಿತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಸ್ಟಾರ್ಕ್ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ನಂತರ ಸರಣಿಯ ಕೊನೆಯ ಪಂದ್ಯದಲ್ಲಿ ಆಡಲಿಲ್ಲ. ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ತಂಡದ ಅತಿ ದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರು. ಅವರ ನಿರ್ಗಮನ ತಂಡಕ್ಕೆ ದೊಡ್ಡ ಹೊಡೆತವಾಗಿ ಪರಿಣಮಿಸಲಿದೆ.


“ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಆದರೆ ಇನ್ನೂ ಕೆಲವು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.


ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ಫೆಬ್ರವರಿ 9 ರಿಂದ 13 ರವರೆಗೆ ಮತ್ತು ಎರಡನೆಯದು ನವದೆಹಲಿಯಲ್ಲಿ ಫೆಬ್ರವರಿ 17 ರಿಂದ 21 ರವರೆಗೆ ನಡೆಯಲಿದೆ. ಸ್ಟಾರ್ಕ್ ಹೊರತಾಗಿ, ಪ್ರೊಟೀಸ್ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದಾಗಿನಿಂದ ಕ್ಯಾಮರೂನ್ ಗ್ರೀನ್ ಕೂಡ ಬೆರಳಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ, ಆಸ್ಟ್ರೇಲಿಯನ್ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಅವರು ಸರಣಿಯ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ತಮ್ಮ ಫಿಟ್‌ನೆಸ್ ಅನ್ನು ಸಾಬೀತುಪಡಿಸಲು ಗ್ರೀನ್‌ಗೆ ಎಲ್ಲಾ ಅವಕಾಶಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: IND vs NZ: ಅವಕಾಶ ಸಿಕ್ಕ ತಕ್ಷಣ ಇತಿಹಾಸ ಸೃಷ್ಟಿಸಿದ ಚಹಲ್, ಈ ದಾಖಲೆ ಬರೆದ ಭಾರತದ ಮೊದಲ ಆಟಗಾರ.!


ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದಂದು ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಟಾರ್ಕ್ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಸ್ಟಾರ್ಕ್ ಅವರ ಮಧ್ಯದ ಬೆರಳಿನಲ್ಲಿ ಸ್ನಾಯುರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಕಾರಣದಿಂದ ಸಿಡ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡಲು ಅಸಾಧ್ಯವಾಯಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.