ಭದ್ರತೆಯನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿ ರೋಹಿತ್ ಶರ್ಮಾ ಪಾದ ಮುಟ್ಟಿದ ಅಭಿಮಾನಿ..! ವಿಡಿಯೋ ವೈರಲ್
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Hit Man Rohith Sharma: ಐದು ಟೆಸ್ಟ್ ಪಂದ್ಯಗಳ ಸರಣಿಯ ಭಾಗವಾಗಿ ಉಪ್ಪಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೊದಲ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ... ಈ ಪಂದ್ಯದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದ್ದು.. ಭದ್ರತಾ ಸಿಬ್ಬಂದಿಯ ಕಣ್ಣಿಗೆ ಬಟ್ಟೆ ಕಟ್ಟಿದ ಹಾಗೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ.. ಕ್ರೀಸ್‌ನಲ್ಲಿದ್ದ ರೋಹಿತ್ ಶರ್ಮಾ ಬಳಿ ಬಂದು ಅವರ ಕಾಲು ಮುಟ್ಟಿದ್ದಾನೆ..
ಭಾರತೀಯ ಸ್ಪಿನ್ನರ್ ಗಳ ಕೈಚಳಕಕ್ಕೆ ಇಂಗ್ಲೆಂಡ್ 246ಕ್ಕೆ ಆಲೌಟ್, ಟೀಮ್ ಇಂಡಿಯಾ ಶುಭಾರಂಭ
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಆಲೌಟ್ ಆಗಿತ್ತು. ನಾಯಕ ಬೆನ್‌ಸ್ಟೋಕ್ಸ್ 70 ರನ್ ಗಳಿಸಿದರೆ, ಬೈರ್‌ಸ್ಟೋವ್ (37), ಬೆನ್ ಡಕೆಟ್ (35) ಮತ್ತು ಜೋ ರೂಟ್ (29) ರನ್ ಗಳಿಸಿ ಮಿಂಚಿದರು.. ಭಾರತದ ಬೌಲರ್‌ಗಳಲ್ಲಿ ಅಶ್ವಿನ್ ಮತ್ತು ಜಡೇಜಾ ತಲಾ ಮೂರು ವಿಕೆಟ್ ಪಡೆದರೆ, ಬುಮ್ರಾ ಮತ್ತು ಅಕ್ಷರ್ ತಲಾ ಎರಡು ವಿಕೆಟ್ ಪಡೆದರು.
ಆ ಬಳಿಕ ಭಾರತ ತಂಡ ಮೊದಲ ಇನಿಂಗ್ಸ್ ಆರಂಭಿಸಿತು. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕ್ರೀಸ್‌ಗೆ ಬಂದರು. ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು.. ವಿರಾಟ್ ಕೊಹ್ಲಿ ಅವರ ಹೆಸರಿನ ಜೆರ್ಸಿಯನ್ನು ಧರಿಸಿದ ಅಭಿಮಾನಿಯೊಬ್ಬರು ರೋಹಿತ್ ಶರ್ಮಾ ಅವರತ್ತ ಬಂದು.. ಪಾದಗಳನ್ನು ಮುಟ್ಟಿದ್ದಾರೆ.. ತಕ್ಷಣ ಹಿಟ್ ಮ್ಯಾನ್ ಅವರನ್ನು ತಬ್ಬಿಕೊಂಡಿದ್ದಾರೆ.. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋ ಇದೀಗ ವೈರಲ್ ಆಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.