India vs Australia Test: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ನವೆಂಬರ್ 22 ರಿಂದ ಅಲ್ಲಿ ಪ್ರಾರಂಭವಾಗಲಿದ್ದು, ಈ 5 ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾಗೆ ಅಗ್ನಿ ಪರೀಕ್ಷೆಯೆಂದೇ ಹೇಳಬಹುದು. ನ್ಯೂಜಿಲೆಂಡ್ ವಿರುದ್ಧ ಸತತ 3 ಟೆಸ್ಟ್ ಪಂದ್ಯಗಳನ್ನು ಸೋತ ನಂತರ ರೋಹಿತ್ ಶರ್ಮಾ ಮೇಲೆ ಸಾಕಷ್ಟು ಒತ್ತಡವಿದೆ. ಇನ್ನೊಂದೆಡೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯುಟಿಸಿ) ಫೈನಲ್‌ಗೆ ತಲುಪುವ ನಿರೀಕ್ಷೆಯೂ ಹುಸಿಯಾಗಿದೆ. ಇದೀಗ ಪ್ರಶಸ್ತಿ ಸುತ್ತಿಗೆ ತಲುಪಲು ಭಾರತ ಮುಂಬರುವ ದಿನಗಳಲ್ಲಿ ಅದ್ಭುತ ಪ್ರದರ್ಶನ ನೀಡಬೇಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತಲೆಕೆಳಗಾದ ಬಿಗ್‌ಬಾಸ್ ಲೆಕ್ಕಾಚಾರ.. ಈ ವಾರ ಮನೆಯಿಂದ ಹೊರ ಹೋಗೋದೇ ಈ ಸ್ಟ್ರಾಂಗ್‌ ಸ್ಪರ್ಧಿ!


ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಭಾರತೀಯ ಅನುಭವಿ ಬ್ಯಾಟ್ಸ್‌ಮನ್‌ಗಳಿಂದ ಆಸ್ಟ್ರೇಲಿಯಾದಲ್ಲಿ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತವರು ನೆಲದಲ್ಲಿ ದಯನೀಯವಾಗಿ ವಿಫಲರಾಗಿದ್ದರು. ಕಳೆದ 5 ಟೆಸ್ಟ್ ಪಂದ್ಯಗಳು ನಾಯಕ ರೋಹಿತ್‌ಗೆ ದುಃಸ್ವಪ್ನವಾಗಿತ್ತು. 10 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕವನ್ನು ಗಳಿಸಲು ಶಕ್ತರಾಗಿದ್ದಾರೆ. ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಅವರ ಖಾತೆಯಲ್ಲಿ ಕೇವಲ 133 ರನ್‌ಗಳಿದ್ದವು. ಆದರೆ, ವಿರಾಟ್ 5 ಪಂದ್ಯಗಳಲ್ಲಿ 192 ರನ್ ಗಳಿಸಿದ್ದರು.


ಈಗ ವಿರಾಟ್ ಮತ್ತು ರೋಹಿತ್ ಆಸ್ಟ್ರೇಲಿಯಾದಲ್ಲಿ ತಮ್ಮ ಫಾರ್ಮ್‌ಗೆ ಮರಳಲು ಬಯಸುತ್ತಿದ್ದಾರೆ. ಹಲವು ದಾಖಲೆಗಳ ಮೇಲೂ ಅವರು ಕಣ್ಣಿಟ್ಟಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ರನ್ ಗಳಿಸುವ ವಿಷಯದಲ್ಲಿ ಇಬ್ಬರೂ ಭಾರತದ ಅಗ್ರ ಬ್ಯಾಟ್ಸ್‌ಮನ್‌ಗಳು. ಈ ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ರೋಹಿತ್. ಅವರು 37 ಟೆಸ್ಟ್ ಪಂದ್ಯಗಳ 64 ಇನ್ನಿಂಗ್ಸ್‌ಗಳಲ್ಲಿ 2685 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕ ಮತ್ತು 8 ಅರ್ಧ ಶತಕಗಳೂ ಸೇರಿವೆ.


ಇನ್ನು ವಿರಾಟ್ ಬಗ್ಗೆ ಮಾತನಾಡುವುದಾದರೆ, ಅವರು 41 ಟೆಸ್ಟ್ ಪಂದ್ಯಗಳಲ್ಲಿ 2427 ರನ್ ಗಳಿಸಿದ್ದಾರೆ. ಅವರ ಸರಾಸರಿ 36.77 ಆಗಿದೆ. ಇದರಲ್ಲಿ 4 ಶತಕ ಹಾಗೂ 11 ಅರ್ಧ ಶತಕ ಕೂಡ ಸೇರಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 12 ನೇ ಸ್ಥಾನದಲ್ಲಿದ್ದಾರೆ. ಅಂದರೆ ರೋಹಿತ್‌ಗಿಂತ 258 ರನ್‌ ಹಿಂದಿದ್ದಾರೆ.


ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇವರಿಬ್ಬರ ನಡುವೆ ಕುತೂಹಲಕಾರಿ ಪೈಪೋಟಿ ನಡೆಯಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪರ ಅಗ್ರ ಸ್ಕೋರರ್ ಆಗಿ ಇಬ್ಬರಲ್ಲಿ ಯಾರು ಉಳಿಯಲಿದ್ದಾರೆ ಎಂದು ನೋಡಬೇಕಾಗಿದೆ.


ಇದನ್ನೂ ಓದಿ: ರಿಷಬ್‌ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಯಾರ ಮಗಳು ಗೊತ್ತೇ.. ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ?


ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಅವರನ್ನು ಹಿಂದಿಕ್ಕುವ ಅವಕಾಶವನ್ನು ವಿರಾಟ್ ಮತ್ತು ರೋಹಿತ್ ಹೊಂದಿದ್ದಾರೆ. ಬಾಬರ್ 32 ಪಂದ್ಯಗಳಲ್ಲಿ 2760 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ. ಇನ್ನು ರೋಹಿತ್ ಅವರಿಗಿಂತ 75 ರನ್ ಹಿಂದಿದ್ದು, ವಿರಾಟ್ 333 ರನ್ ಹಿಂದಿದ್ದಾರೆ. ಈಗ ಇಬ್ಬರೂ ಆಟಗಾರರು ತಮ್ಮ ಸಾಂಪ್ರದಾಯಿಕ ಎದುರಾಳಿಗಳನ್ನು ಹಿಂದಿಕ್ಕಬಹುದೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ