ಸಾನಿಯಾ ಮಿರ್ಜಾ ಸಹೋದರಿ ಆಯೋಜಿಸಿದ್ದ ರಂಜಾನ್ ಕಾರ್ಯಕ್ರಮದಲ್ಲಿ ಏಕಾಏಕಿ ಗುಂಡಿನ ದಾಳಿ! ಆರೋಪಿ ಅರೆಸ್ಟ್‌

Anam Mirza Dawat-e-Ramzan: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಸಹೋದರಿ ಅನಮ್ ಮಿರ್ಜಾ ಬಗ್ಗೆ ದೊಡ್ಡ ಸುದ್ದಿ ಹೊರಬರುತ್ತಿದೆ. ಅನಮ್ ಮಿರ್ಜಾ ಹೈದರಾಬಾದ್‌ನಲ್ಲಿ ದಾವತ್-ಎ-ರಂಜಾನ್ Expo ಆಯೋಜಿಸಿದ್ದರು. ಆದರೆ ಈ ಸ್ಥಳದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

Written by - Bhavishya Shetty | Last Updated : Mar 31, 2025, 08:18 PM IST
    • ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ
    • ಅನಮ್ ಮಿರ್ಜಾ ಹೈದರಾಬಾದ್‌ನಲ್ಲಿ ದಾವತ್-ಎ-ರಂಜಾನ್ Expo ಆಯೋಜಿಸಿದ್ದರು
    • ಈ ಸ್ಥಳದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ
ಸಾನಿಯಾ ಮಿರ್ಜಾ ಸಹೋದರಿ ಆಯೋಜಿಸಿದ್ದ ರಂಜಾನ್ ಕಾರ್ಯಕ್ರಮದಲ್ಲಿ ಏಕಾಏಕಿ ಗುಂಡಿನ ದಾಳಿ! ಆರೋಪಿ ಅರೆಸ್ಟ್‌

Anam Mirza Dawat-e-Ramzan: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಸಹೋದರಿ ಅನಮ್ ಮಿರ್ಜಾ ಬಗ್ಗೆ ದೊಡ್ಡ ಸುದ್ದಿ ಹೊರಬರುತ್ತಿದೆ. ಅನಮ್ ಮಿರ್ಜಾ ಹೈದರಾಬಾದ್‌ನಲ್ಲಿ ದಾವತ್-ಎ-ರಂಜಾನ್ Expo ಆಯೋಜಿಸಿದ್ದರು. ಆದರೆ ಈ ಸ್ಥಳದಲ್ಲಿ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

Add Zee News as a Preferred Source

ಇದನ್ನೂ ಓದಿ: ಏಕದಿನದಲ್ಲಿ ಮೊದಲ ಬಾರಿಗೆ ದ್ವಿಶತಕ ಬಾರಿಸಿದ್ದು ಯಾರು ಗೊತ್ತಾ? ಸಚಿನ್‌ ತೆಂಡೂಲ್ಕರ್ ಅಲ್ಲ... ಅವರಿಗಿಂತ 13 ವರ್ಷ ಮೊದಲೇ ಈ ಕ್ರಿಕೆಟರ್ ಹೆಸರಿಗೆ ಸೇರಿತ್ತು ಆ ದಾಖಲೆ

ಗುಡಿ ಮಲ್ಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 29 ರಂದು (ಶನಿವಾರ) ಈ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳ ನಡುವಿನ ಜಗಳದಲ್ಲಿ ಆರೋಪಿಗಳು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿ ಆಯುಧವನ್ನು ವಶಪಡಿಸಿಕೊಂಡಿದ್ದಾರೆ.

ಗುಡಿಮಲ್ಕಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಾರ, ಎಕ್ಸ್‌ ಪೋನಲ್ಲಿ ಸುಗಂಧ ದ್ರವ್ಯ ಅಂಗಡಿ ಮತ್ತು ಆಟಿಕೆ ಅಂಗಡಿಯ ಮಾಲೀಕರ ನಡುವೆ ಸಣ್ಣಪುಟ್ಟ ವಾಗ್ವಾದ ನಡೆದಿತ್ತು. ನಂತರ ಅದನ್ನು ಇತ್ಯರ್ಥಪಡಿಸಲಾಯಿತು ಎಂದು ಇನ್ಸ್‌ಪೆಕ್ಟರ್ ಹೇಳಿದರು. ಈ ಮಧ್ಯೆ ಆರೋಪಿ ಹಸಬುದ್ದೀನ್ ತನ್ನ ಪರವಾನಗಿ ಪಡೆದ ಪಿಸ್ತೂಲಿನಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಹಾಗಾಗಿ ನಾವು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಗುಂಡು ಹಾರಿಸಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಯಾವುದೇ ಡಯೆಟ್‌.. ಜಿಮ್‌ ಬೇಡ.. ಅಡುಗೆ ಮನೆಯಲ್ಲಿನ ಈ ಮಸಾಲೆ ಸಾಕು ತೂಕ ಇಳಿಸಲು! ಒಂದೇ ವಾರದಲ್ಲಿ ರಿಸ್ಟಲ್ಟ್‌ ಪಕ್ಕಾ..

ಆರೋಪಿ ಹಸಿಬುದ್ದೀನ್ ಅಲಿಯಾಸ್ ಹೈದರ್, ಮಾಜಿ ಸರಪಂಚ್ ಮತ್ತು ಎಸಿ ಗಾರ್ಡ್ ಪ್ಯಾರಾಮೌಂಟ್ ಕಾಲೋನಿಯ ನಿವಾಸಿ. ಆತ ನಾಂಪಲ್ಲಿಯಿಂದ ಪರವಾನಗಿ ಪಡೆದ ಬಂದೂಕನ್ನು ಹೊಂದಿದ್ದಾನೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ:  Zee5 ನಲ್ಲೂ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News