Virat Kohli: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್‌ನಲ್ಲಿ ನಡೆಯಲಿದೆ. ಡಿಸೆಂಬರ್ 6ರಿಂದ ಆರಂಭವಾಗಲಿರುವ ಈ ಪಂದ್ಯ ಹಗಲು-ರಾತ್ರಿ ಪಂದ್ಯವಾಗಲಿದೆ. ಪರ್ತ್‌ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯದಲ್ಲಿ ತಮ್ಮ ಮುನ್ನಡೆಯನ್ನು ದ್ವಿಗುಣಗೊಳಿಸಲು ಪ್ರಯತ್ನಿಸಲಿದೆ ಟೀಂ ಇಂಡಿಯಾ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಒಂದು ಸುದ್ದಿ ಹಬ್ಬಿದ್ದು ವಿರಾಟ್ ಕೊಹ್ಲಿಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಕೊಹ್ಲಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮತ್ತೆ ತೀವ್ರ ಕುಸಿತ ಕಂಡ ಚಿನ್ನದ ಬೆಲೆ ! ತಿಂಗಳ ಆರಂಭದಲ್ಲಿಯೇ ಪಾತಾಳಕ್ಕಿಳಿದ ಬಂಗಾರ !


ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಗಾಯಗೊಂಡಿದ್ದರು. ಆದರೆ ಆ ಬಳಿಕ ಚೇತರಿಸಿಕೊಂಡ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಶತಕ ಗಳಿಸಿದರು. ಎರಡನೇ ಟೆಸ್ಟ್ ಪಂದ್ಯದ ನಂತರವೂ ಕೊಹ್ಲಿ ಬಗ್ಗೆ ಇಂತಹದ್ದೇ ಸುದ್ದಿ ಇದೆ. ಆದರೆ, ಕೊಹ್ಲಿಗೆ ನಿಜವಾಗ್ಲಾ ಗಾಯವಾಗಿದೆಯೇ ಎಂದು ಅಧಿಕೃತವಾಗಿ ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಈ ಬೀಜವನ್ನ ತೆಂಗಿನ ಎಣ್ಣೆಯಲ್ಲಿ ಬೆರೆಸಿ ಹಚ್ಚಿ... ಬಿಳಿ ಕೂದಲನ್ನು 4 ವಾರಗಳಲ್ಲಿ ಶಾಶ್ವತ ಕಪ್ಪಾಗಿಸುವುದು!


ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಗಾಯದ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಏಕೆಂದರೆ ಅಭ್ಯಾಸದ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿ ಅವರ ಮೊಣಕಾಲಿನ ಮೇಲೆ ಕೆಲವು ರೀತಿಯ ಬ್ಯಾಂಡೇಜ್ ಅನ್ನು ಕಟ್ಟುತ್ತಿರುವುದು ಕಂಡುಬಂದಿದೆ. ವ್ಯಾಯಾಮ ಮುಗಿಸಿ ಕೊಹ್ಲಿ ಎದ್ದು ನಿಂತಾಗ ಸಿಬ್ಬಂದಿಯೊಬ್ಬರು ಮೊಣಕಾಲಿಗೆ ಬ್ಯಾಂಡೇಜ್ ಕಟ್ಟುತ್ತಿರುವುದು ಕಂಡು ಬಂದಿದೆ. ಇದರೊಂದಿಗೆ ಕೊಹ್ಲಿ ಗಾಯಗೊಂಡಿರಬಹುದೇ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ, ಅವರನ್ನು ನೋಡಿದರೆ ಯಾವುದೇ ತೊಂದರೆಯಲ್ಲಿರುವಂತೆ ಕಾಣಿಸುತ್ತಿಲ್ಲ. ಕೊಹ್ಲಿ ಮೊಣಕಾಲಿನಲ್ಲಿ ಸಣ್ಣಪುಟ್ಟ ಸಮಸ್ಯೆ ಇರುವ ಸಾಧ್ಯತೆ ಇದ್ದು, ಅದನ್ನು ತಪ್ಪಿಸಲು ಬ್ಯಾಂಡೇಜ್ ಕಟ್ಟಿರಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.