ಎಬಿ ಡಿವಿಲಿಯರ್ಸ್ ಪ್ರಕಾರ ಈ ಬಾರಿ IPL ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಇದೇ ತಂಡ!

AB de Villiers on IPL 2024: ಐಪಿಎಲ್ 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಿದ್ದು, ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅನ್ನು ಎದುರಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ CSK ಭರ್ಜರಿ ಗೆಲುವು ಸಾಧಿಸಿದೆ.

Written by - Bhavishya Shetty | Last Updated : Mar 23, 2024, 10:00 PM IST
    • ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಎಬಿ ಡಿವಿಲಿಯರ್ಸ್
    • ಯಶಸ್ವಿ ಜೈಸ್ವಾಲ್ ಈ ವರ್ಷ ಐಪಿಎಲ್‌ನಲ್ಲಿ ಮಿಂಚಬಹುದು ಎಂದ ಎಬಿಡಿ
    • ಇದೀಗ ಟಿ20ಯಲ್ಲಿ ತಮ್ಮ ಪ್ರತಿಭೆ ತೋರಲು ಸಮಯ ಸಿಕ್ಕಿದೆ
ಎಬಿ ಡಿವಿಲಿಯರ್ಸ್ ಪ್ರಕಾರ ಈ ಬಾರಿ IPL ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಇದೇ ತಂಡ! title=
AB de Villiers

AB de Villiers on IPL 2024: ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಎಬಿ ಡಿವಿಲಿಯರ್ಸ್ ಈ ವರ್ಷ ಐಪಿಎಲ್‌ನಲ್ಲಿ ಮಿಂಚಬಹುದಾದ ಭಾರತದ ಯುವ ಆಟಗಾರನನ್ನು ಹೆಸರಿಸಿದ್ದಾರೆ. ಜೊತೆಗೆ ಯಾವ ತಂಡ ಸೀಸನ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಬಹುದು ಎಂಬುದನ್ನು ಸಹ ಹೇಳಿದ್ದಾರೆ.

ಐಪಿಎಲ್ 17ನೇ ಸೀಸನ್ ಮಾರ್ಚ್ 22ರಿಂದ ಆರಂಭವಾಗಿದ್ದು, ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅನ್ನು ಎದುರಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ CSK ಭರ್ಜರಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: DC vs PBK: ಕೈಹಿಡಿಯಲ್ಲಿಲ್ಲ ಪಂತ್ ಕಂಬ್ಯಾಕ್: ಪಂಜಾಬ್ ವಿರುದ್ಧ ಮುಗ್ಗರಿಸಿದ ಡೆಲ್ಲಿ

ಯೂಟ್ಯೂಬ್ ಚಾನೆಲ್‌’ನಲ್ಲಿ ಮಾತನಾಡಿದ ಡಿವಿಲಿಯರ್ಸ್, ಭಾರತೀಯ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಈ ವರ್ಷ ಐಪಿಎಲ್‌ನಲ್ಲಿ ಮಿಂಚಬಹುದು. ಅವರು ಈ ಋತುವಿನಲ್ಲಿ 500-600 ರನ್ ಗಳಿಸಬಹುದು ಎಂದಿದ್ದಾರೆ.

ಯಶಸ್ವಿ ಐಪಿಎಲ್‌’ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದು, ತಂಡಕ್ಕೆ ಆಕ್ರಮಣಕಾರಿ ಆರಂಭ ನೀಡುವ ಜವಾಬ್ದಾರಿ ಅವರ ಮೇಲಿದೆ.

“ನಾನು ಅವರ ಆಟ ನೋಡಲು ಕಾತುರರಾಗಿದ್ದೇನೆ. ಯಶಸ್ವಿ ಜೈಸ್ವಾಲ್ ಟೆಸ್ಟ್ ಮಾದರಿಯಲ್ಲಿ ತಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದ್ದಾರೆ. ಇದೀಗ ಟಿ20ಯಲ್ಲಿ ತಮ್ಮ ಪ್ರತಿಭೆ ತೋರಲು ಸಮಯ ಸಿಕ್ಕಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಪಡೆದ ಆತ್ಮವಿಶ್ವಾಸದೊಂದಿಗೆ ಐಪಿಎಲ್ ಪ್ರವೇಶಿಸಲಿದ್ದು, ಈ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಭರವಸೆ ನನಗಿದೆ. ಯಶಸ್ವಿ ಈ ಋತುವಿನಲ್ಲಿ 500 ಅಥವಾ 600 ಕ್ಕಿಂತ ಹೆಚ್ಚು ರನ್ ಗಳಿಸುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ:  ವಿಚ್ಛೇದಿತೆ ಮೇಲೆ ಲವ್… ಕಾನೂನು ಹೋರಾಟ ಮಾಡಿ ಆಕೆಯ ಪುತ್ರಿಯನ್ನೇ ದತ್ತು ಪಡೆದ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ ಮಾಂತ್ರಿಕನೀತ!

ಇನ್ನೊಂದೆಡೆ ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲುವ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News