ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು? ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಕಾರಣ ಏನು ಗೊತ್ತಾ?

Shubman Gill unfollows India captain Rohit Sharma: ಇನ್ನೊಂದೆಡೆ ಭಾರತ ತಂಡದ ಆಡಳಿತವು ಗಿಲ್ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮತ್ತೊಂದು ಬೆಳವಣಿಗೆ ಕೂಡ ಕಂಡುಬಂದಿದ್ದು ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇನೋ ಎಂಬ ಅನುಮಾನ ಮೂಡುವಂತೆ ಮಾಡಿದೆ.

Written by - Bhavishya Shetty | Last Updated : Jun 15, 2024, 07:23 PM IST
    • ಗಿಲ್ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲು ನಿರ್ಧರಿಸಿದೆ ಎನ್ನಲಾಗಿದೆ
    • ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇನೋ ಎಂಬ ಅನುಮಾನ ಮೂಡುವಂತೆ ಮಾಡಿದೆ
    • ಟೀಂ ಇಂಡಿಯಾ ಅಮೆರಿಕ ತಲುಪಿದಾಗಿನಿಂದ ಗಿಲ್ ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ
ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು? ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಕಾರಣ ಏನು ಗೊತ್ತಾ? title=
Shubman Gill Unfollows Rohit Sharma

Shubman Gill unfollows India captain Rohit Sharma on Instagram: ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್’ರನ್ನು ICC T20 ವಿಶ್ವಕಪ್ 2024ರಲ್ಲಿ ಮೀಸಲು ಆಟಗಾರರ ಪಟ್ಟಿಯಲ್ಲಿ ಇರಿಸಲಾಗಿದೆ. ಭಾರತೀಯ ತಂಡದೊಂದಿಗೆ ಯುಎಸ್ಎಗೆ ಪ್ರಯಾಣಿಸಿದ್ದರೂ ಸಹ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ಇನ್ನೊಂದೆಡೆ ಭಾರತ ತಂಡದ ಆಡಳಿತವು ಗಿಲ್ ಅವರನ್ನು ಭಾರತಕ್ಕೆ ವಾಪಸ್ ಕಳುಹಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮತ್ತೊಂದು ಬೆಳವಣಿಗೆ ಕೂಡ ಕಂಡುಬಂದಿದ್ದು ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವೇನೋ ಎಂಬ ಅನುಮಾನ ಮೂಡುವಂತೆ ಮಾಡಿದೆ.

ಇದನ್ನೂ ಓದಿ: ತನಗಿಂತ 10 ವರ್ಷ ಕಿರಿಯ ಯುವತಿ ಜತೆ ಇರ್ಫಾನ್ ಪಠಾಣ್ ಮದ್ವೆ! ಸೌಂದರ್ಯದಲ್ಲಿ ನಟಿಯರನ್ನೂ ಮೀರಿಸ್ತಾಳೆ ಈ ಬ್ಯೂಟಿ

ಮಾಧ್ಯಮಗಳ ವರದಿ ಪ್ರಕಾರ, ಟಿ20 ವಿಶ್ವಕಪ್ ವೇಳೆ ಟೀಂ ಇಂಡಿಯಾ ಜೊತೆ ಸಮಯ ಕಳೆಯುವ ಬದಲು ಬೇರೆ ಕೆಲಸ ಮಾಡುತ್ತಿದ್ದರು. ಗಿಲ್ ತನ್ನ ವೈಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌’ನಲ್ಲಿ ಹೆಚ್ಚು ಸಕ್ರಿಯರಾಗಿದ್ದರು ಎನ್ನಲಾಗಿದೆ. ಇದರಿಂದ ಟೀಮ್ ಮ್ಯಾನೇಜ್‌ಮೆಂಟ್ ಅವರ ಮೇಲೆ ಕೋಪಗೊಂಡು ಭಾರತಕ್ಕೆ ವಾಪಸ್ ಹೋಗುವಂತೆ ಹೇಳಿದೆ. ಶುಭಮನ್ ಗಿಲ್, ರಿಂಕು ಸಿಂಗ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ಅವರನ್ನು ಆರಂಭದಲ್ಲಿ ಭಾರತೀಯ ಟಿ 20 ವಿಶ್ವಕಪ್ ತಂಡದಲ್ಲಿ ಮೀಸಲು ಎಂದು ಸೇರಿಸಲಾಯಿತು.

ಟೀಂ ಇಂಡಿಯಾ ಅಮೆರಿಕ ತಲುಪಿದಾಗಿನಿಂದ ಗಿಲ್ ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ. ಅವರು ತಮ್ಮ ಕ್ರಿಕೆಟ್ ಬದ್ಧತೆಗಳ ಮೇಲೆ ಸಂಪೂರ್ಣವಾಗಿ ಗಮನಹರಿಸುವ ಬದಲು ತಮ್ಮ ಕೆಲಸವನ್ನು ಯೋಜಿಸಲು ಸಾಕಷ್ಟು ಸಮಯವನ್ನು ಕಳೆಯುತ್ತಿದ್ದರು. ಭಾರತ-ಪಾಕಿಸ್ತಾನ ಪಂದ್ಯದ ವೇಳೆ, ಖಲೀಲ್ ಅಹ್ಮದ್, ಅವೇಶ್ ಖಾನ್ ಮತ್ತು ರಿಂಕು ಸಿಂಗ್ ತಂಡವನ್ನು ಬೆಂಬಲಿಸಲು ಕ್ರೀಡಾಂಗಣಕ್ಕೆ ಬರುತ್ತಿದ್ದರೂ ಸಹ, ಶುಬ್ಮನ್ ಗಿಲ್ ಬರುತ್ತಿರಲಿಲ್ಲ.

ಮಾಧ್ಯಮ ವರದಿಗಳ ಪ್ರಕಾರ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಶುಬ್‌ಮನ್ ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಇದು ಇಬ್ಬರು ಆಟಗಾರರ ನಡುವಿನ ಸಂಭವನೀಯ ಉದ್ವಿಗ್ನತೆಯ ಬಗ್ಗೆ ಊಹಾಪೋಹಗಳನ್ನು ತೀವ್ರಗೊಳಿಸಿದೆ.

ಇದನ್ನೂ ಓದಿ: ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಪ್ರಲ್ಹಾದ ಜೋಶಿ

 ಸದ್ಯ ಟೀಂ ಇಂಡಿಯಾ ಅಮೆರಿಕದ ಫ್ಲೋರಿಡಾದಲ್ಲಿದೆ. ಎ ಗುಂಪಿನ ತಮ್ಮ ಕೊನೆಯ ಪಂದ್ಯದಲ್ಲಿ ಕೆನಡಾವನ್ನು ಎದುರಿಸಬೇಕಾಗಿದೆ. ಆ ಬಳಿಕ ರೋಹಿತ್ ಶರ್ಮಾ ತಂಡ ವೆಸ್ಟ್ ಇಂಡೀಸ್’ಗೆ ತೆರಳಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News