WTC ಫೈನಲ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು ಈ ಆಟಗಾರ!

India vs Australia, WTC Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ಗೆ ಇಶಾನ್ ಕಿಶನ್ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು ಎಂದು ಭಾರತ ತಂಡದ ಮಾಜಿ ಆಯ್ಕೆಗಾರ ಸರಣ್‌ದೀಪ್ ಸಿಂಗ್ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿರುವ ಕಾರಣ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.

Written by - Bhavishya Shetty | Last Updated : Jun 1, 2023, 01:46 PM IST
    • ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ ಅಂತಿಮ ಪಂದ್ಯವು ಜೂನ್ 7 ರಿಂದ ನಡೆಯಲಿದೆ
    • ರೋಹಿತ್ ಶರ್ಮಾ ಅವರು ಕಮಾಂಡ್ ಮಾಡಲಿದ್ದು, ಅವರೇ ಆರಂಭಿಕ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.
    • ಕಿಶನ್ ಇದುವರೆಗೆ 14 ಏಕದಿನ ಹಾಗೂ 27 ಏಕದಿನ ಪಂದ್ಯಗಳನ್ನು ಆಡಿದ್ದಾರೆ.
WTC ಫೈನಲ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು ಈ ಆಟಗಾರ!  title=
World Test Championship

India vs Australia, WTC Final 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ ಅಂತಿಮ ಪಂದ್ಯವು ಜೂನ್ 7 ರಿಂದ ನಡೆಯಲಿದೆ. ಲಂಡನ್‌ ನ ಓವಲ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಅವರು ಕಮಾಂಡ್ ಮಾಡಲಿದ್ದು, ಅವರೇ ಆರಂಭಿಕ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಇದನ್ನೂ ಓದಿ: 14 ಪಂದ್ಯ, 27 ವಿಕೆಟ್…IPL ನಲ್ಲಿ ಧೂಳೆಬ್ಬಿಸಿದ್ದ ಈ ಆಟಗಾರ 8 ವರ್ಷಗಳ ಬಳಿಕ Team Indiaಗೆ ಮತ್ತೆ ಎಂಟ್ರಿ!

ರೋಹಿತ್‌ ಗೆ ಆರಂಭಿಕ ಜೋಡಿ ಯಾರು?

ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ಗೆ ಇಶಾನ್ ಕಿಶನ್ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು ಎಂದು ಭಾರತ ತಂಡದ ಮಾಜಿ ಆಯ್ಕೆಗಾರ ಸರಣ್‌ದೀಪ್ ಸಿಂಗ್ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿರುವ ಕಾರಣ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಇರಿಸಲಾಗಿದೆ. ಇಬ್ಬರೂ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಇಶಾನ್ ಇನ್ನೂ ಟೆಸ್ಟ್ ಕ್ರಿಕೆಟ್ ಆಡಿಲ್ಲ. ಆದರೆ ಸರಣ್‌ದೀಪ್ ಪ್ರಕಾರ, ಅವರು ಎಕ್ಸ್-ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು. ಕಿಶನ್ ಇದುವರೆಗೆ 14 ಏಕದಿನ ಹಾಗೂ 27 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ: Cricket: ಡಬಲ್ಯು‌ಟಿ‌ಸಿ ಫೈನಲ್ ಗೂ ಮುನ್ನ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೆ ವಿದಾಯ ಹೇಳಿದ ಟೀಮ್ ಇಂಡಿಯಾ ಆಟಗಾರ

ಶುಭ್ಮನ್ ಇತ್ತೀಚೆಗೆ IPL-2023 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಜೊತೆಗೆ ಟಾಪ್ ಸ್ಕೋರರ್ ಆಗಿ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಆದರೆ ಇಶಾನ್ ವಿಕೆಟ್ ಕೀಪರ್ ಆಗಿ ಪ್ಲೇಯಿಂಗ್-11 ರಲ್ಲಿ ಆಯ್ಕೆಯಾದರೆ, ತಂಡದ ನಿರ್ವಹಣೆಯು ತೊಂದರೆಗಳನ್ನು ಎದುರಿಸಬಹುದು. ಸರಣ್‌ದೀಪ್ ಪ್ರಕಾರ, ಇಶಾನ್ ಎಕ್ಸ್-ಫ್ಯಾಕ್ಟರ್ ಆಗಬಹುದಾದರೂ, ಡಬ್ಲ್ಯುಟಿಸಿ ಫೈನಲ್‌ ನಲ್ಲಿ ಕೆಎಸ್ ಭರತ್ ಅವರನ್ನು ವಿಕೆಟ್ ಕೀಪರ್ ಮಾಡುವುದು ಬಹುತೇಕ ಖಚಿತವಾಗಿದೆ. 29ರ ಹರೆಯದ ಭರತ್ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ ಇದುವರೆಗೆ ಕೇವಲ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News