ಕೊನೆಗೂ ಅಭಿಮಾನಿಗಳ ಆಸೆ ಪೂರೈಸಿದ ಅಡೀಡಸ್! ಟೀಂ ಇಂಡಿಯಾ ವಿಶ್ವಕಪ್ ಜೆರ್ಸಿಯಲ್ಲಿ ಈ ಬದಲಾವಣೆ

Team India World Cup jersey: ಅಕ್ಟೋಬರ್ 5 ರಿಂದ ಭಾರತದ ನೆಲದಲ್ಲಿ ಪ್ರಾರಂಭವಾಗುವ ವಿಶ್ವಕಪ್ 2023 ಗಾಗಿ ಅಡೀಡಸ್ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.

Written by - Bhavishya Shetty | Last Updated : Oct 4, 2023, 05:40 PM IST
    • ಐಸಿಸಿ ಕ್ರಿಕೆಟ್ ವಿಶ್ವಕಪ್ ಅಕ್ಟೋಬರ್ 5ರಿಂದ ನವೆಂಬರ್ 19 ರವರೆಗೆ ನಡೆಯಲಿದೆ
    • ಅಡೀಡಸ್ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ
    • ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ
ಕೊನೆಗೂ ಅಭಿಮಾನಿಗಳ ಆಸೆ ಪೂರೈಸಿದ ಅಡೀಡಸ್! ಟೀಂ ಇಂಡಿಯಾ ವಿಶ್ವಕಪ್ ಜೆರ್ಸಿಯಲ್ಲಿ ಈ ಬದಲಾವಣೆ title=
Team India New Jersey

Team India World Cup jersey: ಐಸಿಸಿ ಕ್ರಿಕೆಟ್ ವಿಶ್ವಕಪ್ ಅಕ್ಟೋಬರ್ 5ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿಯೇ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, ಒಟ್ಟು 48 ಪಂದ್ಯಗಳು ನಡೆಯಲಿವೆ. 2023ರ ಕ್ರಿಕೆಟ್ ವಿಶ್ವಕಪ್‌’ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ 5 ಅಕ್ಟೋಬರ್ 2023 ರಂದು ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಆತಿಥ್ಯ ವಹಿಸಲಿರುವ ಈ ಹೈ ಪ್ರೊಫೈಲ್ ಕ್ರಿಕೆಟ್ ಪಂದ್ಯಾವಳಿಯ ಪಂದ್ಯಗಳ ಸಮಯವನ್ನು ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2.00 ಗಂಟೆಗೆ ಇಡಲಾಗಿದೆ.

ಇದನ್ನೂ ಓದಿ: Virat Kohli: ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡ ಬಿಟ್ಟು ಹೊರನಡೆದ ವಿರಾಟ್ ಕೊಹ್ಲಿ!

ಅಕ್ಟೋಬರ್ 5 ರಿಂದ ಭಾರತದ ನೆಲದಲ್ಲಿ ಪ್ರಾರಂಭವಾಗುವ ವಿಶ್ವಕಪ್ 2023 ಗಾಗಿ ಅಡೀಡಸ್ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಇನ್ನು ಜೆರ್ಸಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಕಿಟ್ ಪ್ರಾಯೋಜಕ ಅಡಿಡಾಸ್ ಬುಧವಾರ, ಸೆಪ್ಟೆಂಬರ್ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ಕೂಡ ಟೀಂ ಇಂಡಿಯಾದ ಹೊಸ ಜೆರ್ಸಿಯ ವಿಡಿಯೋ ಶೇರ್ ಮಾಡಿದೆ.

ICC ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, ಒಟ್ಟು 48 ಪಂದ್ಯಗಳು ನಡೆಯಲಿವೆ. ಇಲ್ಲಿಯವರೆಗೆ, ತನ್ನ 12 ಆವೃತ್ತಿಗಳಲ್ಲಿ, ಆಸ್ಟ್ರೇಲಿಯಾ ತಂಡವು ಗರಿಷ್ಠ 5 ಬಾರಿ ವಿಶ್ವಕಪ್ ಗೆದ್ದಿದೆ. ಇದಲ್ಲದೆ ಭಾರತ ಮತ್ತು ವೆಸ್ಟ್ ಇಂಡೀಸ್ ತಲಾ ಎರಡು ಬಾರಿ ಮತ್ತು ಶ್ರೀಲಂಕಾ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಲಾ ಒಂದು ಬಾರಿ ಪ್ರಶಸ್ತಿ ಗೆದ್ದಿವೆ.

2023 ರ ಕ್ರಿಕೆಟ್ ವಿಶ್ವಕಪ್‌’ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ 5 ಅಕ್ಟೋಬರ್ 2023 ರಂದು ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ: 20 ತಿಂಗಳ ಬಳಿಕ ತಂಡಕ್ಕೆ ಮರಳಿದ ಸ್ಟಾರ್ ಸ್ಪಿನ್ನರ್ ಬಗ್ಗೆ ಮಾಜಿ ಕ್ರಿಕೆಟರ್ ಕಮೆಂಟ್!

ಭಾರತ ವಿಶ್ವಕಪ್ ಜರ್ಸಿಯಲ್ಲಿ ಈ ಬದಲಾವಣೆ:

ಭುಜದ ಮೇಲೆ ಮೂರು ಬಿಳಿ ಪಟ್ಟೆಗಳ ಬದಲಿಗೆ, ವಿಶ್ವಕಪ್‌’ನ ಹೊಸ ಜೆರ್ಸಿಯಲ್ಲಿ ಪ್ರತಿಯೊಬ್ಬ ಆಟಗಾರನ ಭುಜದ ಮೇಲೆ ಭಾರತೀಯ ತ್ರಿವರ್ಣ ಪಟ್ಟೆಗಳು ಇರುತ್ತವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News