“ನನ್ನನ್ನು ಕ್ಷಮಿಸಿ” -ವಿಶ್ವಕಪ್ ಗೆದ್ದ ಬಳಿಕ ಭಾರತೀಯರ ಬಳಿ ಮನಃಪೂರ್ವಕವಾಗಿ ಕ್ಷಮೆ ಕೇಳಿದ ವಾರ್ನರ್! ಕಾರಣವೇನು?

David Warner Apology Post: 2023ರ ವಿಶ್ವಕಪ್‌’ನಲ್ಲಿ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಅದರಲ್ಲಿ ಅವರು ಕ್ಷಮೆಯಾಚಿಸುತ್ತಿದ್ದಾರೆ.

Written by - Bhavishya Shetty | Last Updated : Nov 21, 2023, 07:57 PM IST
    • ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಆರನೇ ಬಾರಿ ಟ್ರೋಫಿ ಗೆದ್ದ ಆಸ್ಟ್ರೇಲಿಯಾ
    • ಡೇವಿಡ್ ವಾರ್ನರ್ ಪೋಸ್ಟ್ ಒಂದನ್ನು ಶೇರ್ ಮಾಡಿ ಅವರು ಕ್ಷಮೆಯಾಚಿಸುತ್ತಿದ್ದಾರೆ
    • ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌’ಗಳ ಸೋಲನ್ನು ಎದುರಿಸಬೇಕಾಯಿತು
“ನನ್ನನ್ನು ಕ್ಷಮಿಸಿ” -ವಿಶ್ವಕಪ್ ಗೆದ್ದ ಬಳಿಕ ಭಾರತೀಯರ ಬಳಿ ಮನಃಪೂರ್ವಕವಾಗಿ ಕ್ಷಮೆ ಕೇಳಿದ ವಾರ್ನರ್! ಕಾರಣವೇನು? title=
david warner apology post

David Warner Apology Post: ನವೆಂಬರ್ 19 ರಂದು ಅಹಮದಾಬಾದ್‌ನ ಪ್ರತಿಷ್ಠಿತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಭಾರತವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ವಿಶ್ವಕಪ್ 2023 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ಆರನೇ ಬಾರಿಗೆ ಈ ಟ್ರೋಫಿ ಗೆದ್ದಿದೆ.

ಇದನ್ನೂ ಓದಿ:  ಆಸೀಸ್ ವಿರುದ್ಧ ಟಿ20 ತಂಡ ಪ್ರಕಟವಾದಂತೆ ರೆಡಿಯಾಯ್ತು ಭಾರತದ ಪ್ಲೇಯಿಂಗ್ 11: ಈ ಆಟಗಾರರಿಗೆ ಸ್ಥಾನ

ಇನ್ನು 2023ರ ವಿಶ್ವಕಪ್‌’ನಲ್ಲಿ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಅದರಲ್ಲಿ ಅವರು ಕ್ಷಮೆಯಾಚಿಸುತ್ತಿದ್ದಾರೆ.

ಈ ಹಿಂದೆ ಡೇವಿಡ್ ವಾರ್ನರ್ ಅವರನ್ನು ಟ್ಯಾಗ್ ಮಾಡುವ ಮೂಲಕ ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್‌’ನಲ್ಲಿ “ವಾರ್ನರ್! ನೀವು ಕೋಟ್ಯಂತರ ಭಾರತೀಯರ ಹೃದಯವನ್ನು ಒಡೆದಿದ್ದೀರಿ” ಎಂದು ಬರೆದಿದ್ದರು. ಈ ಪೋಸ್ಟ್‌’ಗೆ ಪ್ರತಿಕ್ರಿಯಿಸಿದ ವಾರ್ನರ್, “ ನನ್ನನ್ನು ಕ್ಷಮಿಸಿ, ಇದು ಕೇವಲ ಉತ್ತಮ ಪಂದ್ಯವಾಗಿತ್ತು ಅಷ್ಟೇ. ಅಲ್ಲಿನ ವಾತಾವರಣವೂ ನೋಡಲು ಚೆನ್ನಾಗಿತ್ತು. ಎಲ್ಲರಿಗೂ ಧನ್ಯವಾದಗಳು” ಎಂದು ಪ್ರತಿಕ್ರಿಯಿಸಿದ್ದಾರೆ

2023ರ ವಿಶ್ವಕಪ್ ಫೈನಲ್‌’ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌’ಗಳ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಮತ್ತೊಮ್ಮೆ ತಂಡದ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿದೆ. 2011 ರಿಂದ ಟೀಮ್ ಇಂಡಿಯಾ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಭಾರತ ಕೊನೆಯದಾಗಿ 2013ರಲ್ಲಿ ಧೋನಿ ನಾಯಕತ್ವದಲ್ಲಿ ಐಸಿಸಿ (ಚಾಂಪಿಯನ್ಸ್ ಟ್ರೋಫಿ) ಟ್ರೋಫಿ ಗೆದ್ದಿತ್ತು. ಇದು ತಂಡದ ಕೊನೆಯ ಐಸಿಸಿ ಪ್ರಶಸ್ತಿಯಾಗಿತ್ತು. ಅಂದಿನಿಂದ ಇಂದಿನವರೆಗೂ ಐಸಿಸಿ ಪ್ರಶಸ್ತಿ ಗೆಲ್ಲಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ.

ಟಿ20 ವಿಶ್ವಕಪ್ ಮೇಲೆ ಭಾರತ ಕಣ್ಣು:

ODI ವಿಶ್ವಕಪ್ 2023 ಫೈನಲ್‌’ನ ಸೋಲನ್ನು ಮರೆತು, ಟೀಮ್ ಇಂಡಿಯಾ ಮುಂದಿನ ICC ಈವೆಂಟ್‌’ಗೆ ಅಂದರೆ ICC T20 ವಿಶ್ವಕಪ್‌’ಗೆ ತಯಾರಿಯನ್ನು ಪ್ರಾರಂಭಿಸಬೇಕಾಗಿದೆ. ಟಿ20 ವಿಶ್ವಕಪ್ ಮುಂದಿನ ವರ್ಷ ಅಂದರೆ 2024ರಲ್ಲಿ ನಡೆಯಲಿದೆ. ಇದರ ಹೋಸ್ಟಿಂಗ್ ಅನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ವೆಸ್ಟ್ ಇಂಡೀಸ್’ಗೆ ನೀಡಲಾಗಿದೆ. 11 ವರ್ಷಗಳ ನಂತರ ಈ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ತಂಡವು ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸುತ್ತದೆಯೇ? ಎಂಬುದನ್ನು ಕಾದುನೋಡಬೇಕಿದೆ.

2024ರ ಟಿ20 ವಿಶ್ವಕಪ್‌’ಗೆ ಅರ್ಹತೆ ಪಡೆದ ತಂಡಗಳೆಂದರೆ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್‌’ಲ್ಯಾಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್‌ಲ್ಯಾಂಡ್, ಪಪುವಾ ನ್ಯೂಗಿನಿಯಾ, ಕೆನಡಾ, ನೇಪಾಳ, ಓಮನ್, ಯುನೈಟೆಡ್ ಸ್ಟೇಟ್ಸ್, ವೆಸ್ಟ್ ಇಂಡೀಸ್.

ಇದನ್ನೂ ಓದಿ: ಬಿಗ್’ಬಾಸ್ ಆನೆ ವಿನಯ್ ಗೌಡ ಪ್ರತಿ ಎಪಿಸೋಡ್’ಗೆ ಪಡೆಯುವ ಸಂಭಾವನೆ ಎಷ್ಟು ಲಕ್ಷ ಗೊತ್ತಾ?

ಈ ಪಂದ್ಯಾವಳಿಯನ್ನು ರೌಂಡ್ ರಾಬಿನ್ ಮಾದರಿಯಲ್ಲಿ ಮಾತ್ರ ಆಡಲಾಗುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News