India vs South Africa 2nd Test, Playing 11: ಕೇಪ್ ಟೌನ್‌’ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಗ್ರೌಂಡ್ (NCG) ನಲ್ಲಿ ಭಾರತ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಜನವರಿ 3 ಬುಧವಾರದಿಂದ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಅನುಭವಿ ಸುನಿಲ್ ಗವಾಸ್ಕರ್ ಭಾರತದ ಪ್ಲೇಯಿಂಗ್-11 ಆಯ್ಕೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಆಕೆ ನನ್ನನ್ನು ಸಾಯಿಸಿತ್ತಾಳೆ”- ಪತ್ನಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಕೆಎಲ್ ರಾಹುಲ್


ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 0-1 ಅಂತರದಲ್ಲಿ ಹಿನ್ನಡೆಯಲ್ಲಿದೆ. ಸೆಂಚುರಿಯನ್‌ ಸೂಪರ್‌ ಸ್ಪೋರ್ಟ್ ಪಾರ್ಕ್‌’ನಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 32 ರನ್‌’ಗಳ ಸೋಲನ್ನು ಎದುರಿಸಬೇಕಾಯಿತು.


ಇದೀಗ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಜನವರಿ 3ರಿಂದ ನಡೆಯಲಿದೆ. ಈ ಮಧ್ಯೆ, ಅನುಭವಿ ಸುನಿಲ್ ಗವಾಸ್ಕರ್ ಎರಡನೇ ಟೆಸ್ಟ್ ಪಂದ್ಯಕ್ಕೂ ಮೊದಲು ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಸೂಚಿಸಿದ್ದಾರೆ.


ಸುನಿಲ್ ಗವಾಸ್ಕರ್ ಅವರು ಸ್ಟಾರ್ ಸ್ಪೋರ್ಟ್ಸ್‌ ಜೊತೆ ಮಾತನಾಡುತ್ತಾ, “ನನ್ನ ಪ್ಲೇಯಿಂಗ್ 11 ನಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಆದರೆ ರವೀಂದ್ರ ಜಡೇಜಾ ಫಿಟ್ ಆಗಿದ್ದರೆ ರವಿಚಂದ್ರನ್ ಅಶ್ವಿನ್ ಬದಲಿಗೆ ಅವರು ಮರಳಬೇಕು. ನನ್ನ ಪ್ರಕಾರ ಮೊದಲ ಪಂದ್ಯದಲ್ಲಿ ಜಡೇಜಾ ಬದಲಿಗೆ ಅಶ್ವಿನ್ ಅವರನ್ನು ಬಳಸಿಕೊಳ್ಳಲಾಗಿತ್ತು. ಪ್ರಸಿದ್ಧ ಕೃಷ್ಣನ ರೂಪದಲ್ಲಿ ಮತ್ತೊಂದು ಬದಲಾವಣೆ ಮಾಡಬಹುದು. ಅವರ ಜಾಗಕ್ಕೆ ಮುಖೇಶ್ ಕುಮಾರ್ ಅವರನ್ನು ಸೇರಿಸಿಕೊಳ್ಳಬಹುದು” ಎಂದಿದ್ದಾರೆ.


ಇದನ್ನೂ ಓದಿ: ಗುರು ಮೋದಿಯಂತೆ ದಿಕ್ಕು ತಪ್ಪಿಸುವಲ್ಲಿ ಪ್ರತಾಪ್ ಸಿಂಹ ‘ಬ್ರಿಲಿಯಂಟ್ ಪೊಲಿಟಿಷಿಯನ್’..!


ಗವಾಸ್ಕರ್ ಪ್ರಕಾರ 2ನೇ ಟೆಸ್ಟ್‌’ಗೆ ಟೀಂ ಇಂಡಿಯಾ ಪ್ಲೇಯಿಂಗ್ XI:


ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜಸೇವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮುಖೇಶ್ ಕುಮಾರ್ ಮತ್ತು ಮೊಹಮ್ಮದ್ ಸಿರಾಜ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ