India vs West Indies, Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜುಲೈ 12 ರಿಂದ ಡೊಮಿನಿಕಾದಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಟಗಾರನೊಬ್ಬನನ್ನು ಟೀಂ ಇಂಡಿಯಾದ ಉಪನಾಯಕನನ್ನಾಗಿ ನೇಮಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಬಿಸಿಸಿಐನಿಂದ ಉಪನಾಯಕನಾಗಿ ನೇಮಕಗೊಂಡ ಆಟಗಾರನ ವೃತ್ತಿಜೀವನವು ಈಗ ಅಪಾಯದಲ್ಲಿದೆ. ಅತ್ಯಂತ ಅಚ್ಚರಿಯ ಸಂಗತಿಯೆಂದರೆ ಬಿಸಿಸಿಐ ಏಕಾಏಕಿ ವೃತ್ತಿಜೀವನ ಸಂಕಷ್ಟದಲ್ಲಿರುವ ಆಟಗಾರನನ್ನು ಉಪನಾಯಕನನ್ನಾಗಿ ಮಾಡಿದೆ.
ಇದನ್ನೂ ಓದಿ: ODIನಲ್ಲಿ ದ್ವಿಶತಕ ಬಾರಿಸಿದ ಸ್ಫೋಟಕ ಬ್ಯಾಟ್ಸ್’ಮನ್’ಗಳು ಇವರೇ: ಭಾರತದ ಈ ಆಟಗಾರರೂ ಇದ್ದಾರೆ…
ಬಿಸಿಸಿಐ ಇದ್ದಕ್ಕಿದ್ದಂತೆ ಅಜಿಂಕ್ಯ ರಹಾನೆ ಅವರನ್ನು ಭಾರತೀಯ ಟೆಸ್ಟ್ ತಂಡದ ಉಪನಾಯಕನನ್ನಾಗಿ ಮಾಡಿದೆ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದರೆ ಭಾರತೀಯ ಟೆಸ್ಟ್ ತಂಡದಿಂದ ಅವರನ್ನು ಶಾಶ್ವತವಾಗಿ ಹೊರಗಿಡುವಂತೆ ಮಾಡಬಹುದು. ಇದು ಅತ್ಯಂತ ಆಘಾತಕಾರಿ ನಿರ್ಧಾರವಾಗಿದೆ. ಭಾರತ ಟೆಸ್ಟ್ ತಂಡದಲ್ಲಿ ಸ್ವತಃ ಅಜಿಂಕ್ಯ ರಹಾನೆ ಸ್ಥಾನ ಅಪಾಯದಲ್ಲಿದೆ. ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದ ಭಾರತ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ. ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಮರಳಿದಾಗ, ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ ಹೆಚ್ಚಿದೆ.
ಅಜಿಂಕ್ಯ ರಹಾನೆ ಅವರ ಮೇಲೆ ಇದೀಗ ಉತ್ತಮ ಪ್ರದರ್ಶನ ನೀಡುವ ಒತ್ತಡವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಜಿಂಕ್ಯ ರಹಾನೆ ವಿಫಲವಾದರೆ, ಅವರನ್ನು ಭಾರತೀಯ ಟೆಸ್ಟ್ ತಂಡದಿಂದ ಕೈಬಿಡಬಹುದು. ಇನ್ನು ಅಜಿಂಕ್ಯ ರಹಾನೆ ಬದಲಿಗೆ ಭಾರತ ಟೆಸ್ಟ್ ತಂಡದಲ್ಲಿ 5ನೇ ಸ್ಥಾನ ಪಡೆಯುವ ಅವಕಾಶಕ್ಕಾಗಿ ಒಂದಕ್ಕಿಂತ ಹೆಚ್ಚು ಆಟಗಾರರು ಕಾದು ಕುಳಿತಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ಅಜಿಂಕ್ಯ ರಹಾನೆಗೆ ದೊಡ್ಡ ಸಾಧನೆ ಮಾಡಲು ಸಾಧ್ಯವಾಗದಿದ್ದರೆ, ಅವರ ಸ್ಥಾನ ಕಳೆದುಕೊಳ್ಳುವ ಭೀತಿ ಇದೆ. ಟೀಮ್ ಇಂಡಿಯಾದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಕೆಲವು ಯುವ ಬ್ಯಾಟ್ಸ್ ಮನ್ ಗಳು ಇದ್ದಾರೆ.
ಇದನ್ನೂ ಓದಿ: 2023ರ ವಿಶ್ವಕಪ್ ಆಡಲು ಭಾರತಕ್ಕೆ ಆಗಮಿಸುತ್ತಾ ಪಾಕ್? ಪ್ರಧಾನಿಗೆ ಬರೆದ ಪತ್ರದಲ್ಲಿ ಈ ವಿಚಾರ ಪ್ರಸ್ತಾಪ
ಸೂರ್ಯಕುಮಾರ್ ಯಾದವ್ 360 ಡಿಗ್ರಿ ಆಟಗಾರರಾಗಿದ್ದು, ಶೀಘ್ರದಲ್ಲೇ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಮತ್ತೊಮ್ಮೆ ಅವಕಾಶ ನೀಡಬಹುದು. ಸೂರ್ಯಕುಮಾರ್ ಯಾದವ್ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರ 5 ನೇ ಸ್ಥಾನವನ್ನು ಕಸಿದುಕೊಳ್ಳುವ ಎಲ್ಲಾ ಸಾಮಾರ್ಥ್ಯ ಹೊಂದಿರುವ ಆಟಗಾರ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3COfPCC
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.