“ಕೊಹ್ಲಿ, ರೋಹಿತ್ ಇದ್ದರೆ ODIನಲ್ಲಿ ಗೆಲುವು, ಇಲ್ಲದಿದ್ದರೆ…”: ಅಂತಿಮ ಪಂದ್ಯಕ್ಕೂ ಮುನ್ನ ದಿಗ್ಗಜನ ಶಾಕಿಂಗ್ ಹೇಳಿಕೆ
Team India Cricket News: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಜಯ ಸಾಧಿಸಿತ್ತು, ಮೂರು ಪಂದ್ಯಗಳ ಏಕದಿನ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ.
Team India Cricket News: ಭಾರತದ ಹಿರಿಯ ಕ್ರಿಕೆಟಿಗರೊಬ್ಬರು ಟೀಂ ಇಂಡಿಯಾದ ಗಾಯಕ್ಕೆ ತಮ್ಮ ಹೇಳಿಕೆಯ ಮೂಲಕ ಉಪ್ಪು ಸವರಿ ಎಲ್ಲೆಡೆ ತಲ್ಲಣ ಮೂಡಿಸಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಇಂದು ಸಂಜೆ 7 ರಿಂದ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಧೋನಿಯ ಪ್ರಿಯ ಶಿಷ್ಯನಿಗೆ Team Indiaದಲ್ಲಿ ಸ್ಥಾನ ಕೊಟ್ಟ ಬಿಸಿಸಿಐ!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಜಯ ಸಾಧಿಸಿತ್ತು, ಆದರೆ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪ್ರತಿದಾಳಿ ನಡೆಸಿ ಭಾರತವನ್ನು 6 ವಿಕೆಟ್ ಗಳಿಂದ ಸೋಲಿಸಿತು. ಮೂರು ಪಂದ್ಯಗಳ ಏಕದಿನ ಸರಣಿ ಸದ್ಯ 1-1ರಲ್ಲಿ ಸಮಬಲದಲ್ಲಿದೆ. ಮೂರನೇ ಏಕದಿನ ಪಂದ್ಯದಲ್ಲಿ ಸರಣಿ ನಿರ್ಧಾರವಾಗಲಿದೆ.
ಟೀಂ ಇಂಡಿಯಾ ಮಂಗಳವಾರ ಟ್ರಿನಿಡಾಡ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಸೆಣಸಾಡಲಿದೆ. ಈ ಮಧ್ಯೆ ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ದೊಡ್ಡ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ 1-1ಕ್ಕೆ ಸಮನಾಗಿದೆ. ಮೊದಲ ಪಂದ್ಯದಲ್ಲಿ ಭಾರತ ಗೆದ್ದರೆ, ಎರಡನೇ ಪಂದ್ಯದಲ್ಲಿ ಆತಿಥೇಯ ತಂಡ ಗೆದ್ದಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್-11ರಲ್ಲಿ ಹಲವು ಬದಲಾವಣೆ ಮಾಡಿದೆ. ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಇದನ್ನೂ ಓದಿ: ಏಷ್ಯಾಕಪ್ ಮಾದರಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಕಲೆಹಾಕಿದ ಕ್ರಿಕೆಟಿಗ ಯಾರು? ಭಾರತದ ಈ ದಿಗ್ಗಜನೇ ಅಗ್ರಸ್ಥಾನಿ
ಈ ಮಧ್ಯೆ ಮಾಜಿ ಭಾರತೀಯ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿಕೆಯೊಂದನ್ನು ನೀಡಿದ್ದಾರೆ. “ಈ ಬಾರಿಯ ಏಕದಿನ ವಿಶ್ವಕಪ್ ಗೂ ಮುನ್ನ ತಂಡದ ಆಡಳಿತ ಮಂಡಳಿಯಿಂದ ಹಲವು ಪ್ರಯೋಗಗಳು ನಡೆಯುತ್ತಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡುವ ಮೂಲಕ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಅವರಿಗೆ ಆಡುವ ಅವಕಾಶ ನೀಡಲಾಯಿತು. ಈ ಹಿಂದೆ ಸಾಕಷ್ಟು ಅವಕಾಶಗಳನ್ನು ಪಡೆಯದ ಆಟಗಾರರಿಗೆ ನೀವು ಹೆಚ್ಚಿನ ಅವಕಾಶಗಳನ್ನು ನೀಡಿ. ಆದರೆ ತಂಡವು ಮೂರನೇ ಏಕದಿನ ಮತ್ತು ಸರಣಿಯನ್ನು ಗೆಲ್ಲುವ ಸಾಧ್ಯತೆಯನ್ನು ಹೆಚ್ಚಿಸಬೇಕಾದರೆ, ರೋಹಿತ್ ಶರ್ಮಾ ಮತ್ತು ವಿರಾಟ್ ಅವರನ್ನು ಲೈನ್‌ಅಪ್‌ನಲ್ಲಿ ತರಬೇಕಾಗುತ್ತದೆ” ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ