Longest Six in Cricket History: ಕ್ರಿಕೆಟ್ ನಲ್ಲಿ ಅತೀ ಉದ್ದ ಸಿಕ್ಸರ್ ಗಳನ್ನು ಬಾರಿಸಿದ್ದು ಯಾರು ಎಂಬ ಮಾತು ಬಂದಾಗಲೆಲ್ಲ ಕ್ರಿಸ್ ಗೇಲ್, ಶಾಹಿದ್ ಅಫ್ರಿದಿ, ಯುವರಾಜ್ ಸಿಂಗ್, ಎಂ ಎಸ್ ಧೋನಿ ಎಂಬ ಹೆಸರುಗಳನ್ನು ಹೇಳುತ್ತೇವೆ. ಇಂದಿನ ದಿನಗಳಲ್ಲಿ ಲಿಯಾಮ್ ಲಿವಿಂಗ್ ಸ್ಟೋನ್ ಅವರಂತಹ ಆಟಗಾರರ ಹೆಸರು ಕೇಳಿ ಬರುತ್ತಿದೆ. ಈ ಆಟಗಾರರು ತಮ್ಮ ಕ್ರಿಕೆಟ್ ಜೀವನದೊಂದಿಗೆ ಬ್ಯಾಟ್ ಮೂಲಕ ಬಾಲ್ ನ್ನು ಎಷ್ಟು ದೂರಕ್ಕೆ ಎಸೆಯಬೇಕು ಎಂಬುದರ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದರೆ ಅಚ್ಚರಿಯ ವಿಷಯವೆಂದರೆ ಇಷ್ಟು ಬಲಿಷ್ಠ ಸಾಮರ್ಥ್ಯ ಹೊಂದಿದ್ದರೂ ಈ ಆಟಗಾರರು ಕ್ರಿಕೆಟ್ ಇತಿಹಾಸದಲ್ಲೇ ಅತಿ ಉದ್ದದ ಸಿಕ್ಸರ್ ಬಾರಿಸಲು ಸಾಧ್ಯವಾಗದೇ ತೀರಾ ಅಪರಿಚಿತ ಆಟಗಾರನ ಹೆಸರಿನಲ್ಲಿ ಈ ದಾಖಲೆ ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Bigg Boss: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಈ ವಿವಾದಾತ್ಮಕ ವ್ಯಕ್ತಿಗಳು


ಆಲ್ಬರ್ಟ್ ಟ್ರಾಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿದ ಕ್ರಿಕೆಟಿಗ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಪರ ಆಡಿದ ಈ ಆಟಗಾರ 19ನೇ ಶತಮಾನದಲ್ಲಿ ಈ ಸಾಧನೆ ಮಾಡಿದ್ದರು. ಲಾರ್ಡ್ಸ್ ಕ್ರಿಕೆಟ್ ಮೈದಾನದ ಪೆವಿಲಿಯನ್ ದಾಟಿದ್ದ ಆಲ್ಬರ್ಟ್ 19ನೇ ಶತಕದಲ್ಲಿ ಇಂತಹ ಸಿಕ್ಸರ್ ಬಾರಿಸಿದ್ದರು. ಅವರ ಈ ಸಿಕ್ಸರ್ ದೂರವು 160 ಮೀಟರ್‌ಗಳಿಗಿಂತಲೂ ಹೆಚ್ಚು. ಇದು ಕ್ರಿಕೆಟ್ ಇತಿಹಾಸದಲ್ಲಿ ಅತಿ ಉದ್ದದ ಸಿಕ್ಸರ್ ಆಗಿದೆ. ಇಂಗ್ಲೆಂಡ್‌ನ ಮೇರಿಲ್‌ಬೋರ್ನ್ ಕ್ರಿಕೆಟ್ ಕ್ಲಬ್‌ಗಾಗಿ ಆಡುವಾಗ ಆಲ್ಬರ್ಟ್ ಆಸ್ಟ್ರೇಲಿಯಾ ವಿರುದ್ಧ ಈ ಸಿಕ್ಸರ್ ಬಾರಿಸಿದ್ದಾರೆ.


ಕ್ರಿಕೆಟ್‌ನಲ್ಲಿ ಅತಿ ಉದ್ದದ ಸಿಕ್ಸರ್:


ಆಲ್ಬರ್ಟ್ ಟ್ರಾಟ್ 19 ನೇ ಶತಮಾನದ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಇವರು 164 ಮೀಟರ್‌ ದೂರದ ಸಿಕ್ಸರ್‌ ಬಾರಿಸಿದ ಸಾಧನೆ ಮಾಡಿದ್ದಾರೆ. 19 ನೇ ಶತಮಾನದಲ್ಲಿ, ಬೌಲರ್‌ಗಳು ಆಲ್ಬರ್ಟ್ ಟ್ರಾಟ್ ಎಂಬ ಹೆಸರನ್ನು ಕೇಳಿದರೆ ಭಯಪಡುತ್ತಿದ್ದರು. ಅಷ್ಟೇ ಅಲ್ಲ, ಬೌಲಿಂಗ್‌ನಲ್ಲೂ ಬ್ಯಾಟ್ಸ್‌ಮನ್‌ಗಳಿಗೆ ಭಯ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಆಟಗಾರ 1910 ರಲ್ಲಿ 41 ನೇ ವಯಸ್ಸಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತದೆ. 


ಇದನ್ನೂ ಓದಿ: Shocking News: ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ!


ಪಾಕಿಸ್ತಾನದ ಮಾಜಿ ಸ್ಫೋಟಕ ಆಲ್‌ರೌಂಡರ್ ಶಾಹಿದ್ ಅಫ್ರಿದಿ ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಅಪಾಯಕಾರಿ ಮತ್ತು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಶಾಹಿದ್ ಅಫ್ರಿದಿ 2013 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 158 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.