ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಿಂದ ಸ್ಟಾರ್ ಆಟಗಾರ ಔಟ್: ಈತನ ಬದಲಿಗೆ ಬಂದಿದ್ದು ಕಿಲಾಡಿ ಆಲ್ ರೌಂಡರ್!
ಜಸ್ಪ್ರೀತ್ ಬುಮ್ರಾ ಅವರು ಬೆನ್ನುನೋವಿನ ಕಾರಣದಿಂದ ಪಂದ್ಯದಿಂದ ಹೊರಗುಳಿದಿದ್ದರು. ಬುಮ್ರಾ ಸ್ಥಾನವನ್ನು ಚಹಾರ್ ತುಂಬುತ್ತಾರೆ ಎಂದು ಭಾವಿಸಿದರೆ, ಇದೀಗ ಸಮಸ್ಯೆ ಹಿನ್ನೆಲೆಯಲ್ಲಿ ಚಹಾರ್ ಕೂಡ ಪಂದ್ಯದಿಂದ ಹೊರಗುಳಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಉಳಿದ ಎರಡು ODIಗಳಿಗೆ ದೀಪಕ್ ಚಹಾರ್ ಬದಲಿಗೆ ಭಾರತದ ತಂಡದಲ್ಲಿ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಚಹಾರ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ವರದಿ ಮಾಡಲಿದ್ದಾರೆ. ಬಳಿಕ ಅಲ್ಲಿನ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸಲಿದೆ ಎಂದು ಹೇಳಿದೆ.
ಇದನ್ನೂ ಓದಿ: Viral Video : ಭಾರತ ಸೋಲಿನ ನಂತರ ಚಪ್ಪಾಳೆ ತಟ್ಟಿದ ಕಾರ್ತಿಕ್, ಪಂಚ್ ನೀಡಿದ ರೋಹಿತ್!
ಜಸ್ಪ್ರೀತ್ ಬುಮ್ರಾ ಅವರು ಬೆನ್ನುನೋವಿನ ಕಾರಣದಿಂದ ಪಂದ್ಯದಿಂದ ಹೊರಗುಳಿದಿದ್ದರು. ಬುಮ್ರಾ ಸ್ಥಾನವನ್ನು ಚಹಾರ್ ತುಂಬುತ್ತಾರೆ ಎಂದು ಭಾವಿಸಿದರೆ, ಇದೀಗ ಸಮಸ್ಯೆ ಹಿನ್ನೆಲೆಯಲ್ಲಿ ಚಹಾರ್ ಕೂಡ ಪಂದ್ಯದಿಂದ ಹೊರಗುಳಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಮಂಗಳವಾರ ಮುಕ್ತಾಯಗೊಳ್ಳಲಿದ್ದು, ಎರಡನೇ ಏಕದಿನ ಪಂದ್ಯ ಭಾನುವಾರ ನಡೆಯಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಪ್ರತಿ ತಂಡಕ್ಕೆ 40 ಓವರ್‌ಗಳನ್ನು ನಿಗದಿಪಡಿಸಲಾಗಿತ್ತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 250 ರನ್‌ಗಳ ಗುರಿಯನ್ನು ನೀಡಿತು. ಸಂಜು ಸ್ಯಾಮ್ಸನ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕಗಳ ಹೊರತಾಗಿಯೂ, ಭಾರತ ಗುರಿಯನ್ನು ಬೆನ್ನಟ್ಟಲು ವಿಫಲವಾಯಿತು. ಈ ಮೂಲಕ ಸೌತ್ ಆಫ್ರಿಕಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಇನ್ನು ಮೊದಲ ಏಕದಿನ ಪಂದ್ಯದಲ್ಲಿ ಚಹಾರ್ ಆಡಿರಲಿಲ್ಲ. ಶಾರ್ದೂಲ್ ಠಾಕೂರ್, ಅವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್ ಭಾರತದ ವೇಗದ ದಾಳಿಯನ್ನು ರೂಪಿಸಿದ್ದರು.
ಇದನ್ನೂ ಓದಿ: ಇಡೀ ಕ್ರಿಕೆಟ್ ಆಟದ ಸ್ವರೂಪವೇ ಬದಲಾಗಲು ಕಾರಣವಾಯ್ತು ಒಂದು ಹುಡುಗಿಯ ಸ್ಕರ್ಟ್!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಭಾರತ ತಂಡ ಹೀಗಿದೆ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.