Wrestlers Protest: ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥರ ಮೇಲೆ ಲೈಂಗಿಕ ಕಿರುಕುಳದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರ ಮತ್ತು ಕುಸ್ತಿಪಟುಗಳ ನಡುವಿನ ಜಟಾಪಟಿ ಮುಕ್ತಾಯಗೊಂಡ ಬಳಿಕ ಈ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ, ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.
ಪ್ರತೀಕಾರದ ಮನೋಭಾವದಿಂದ ತಾವು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸುಳ್ಳು ದೂರು ದಾಖಲಿಸಿದ್ದು, ಈಗ ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸಿರುವುದಾಗಿ ಅಪ್ರಾಪ್ತ ಬಾಲಕಿಯ ತಂದೆ ಹೇಳಿದ್ದಾರೆ. ಸತ್ಯ ಈಗಲೇ ಹೊರಬರಬೇಕು ಮತ್ತು ನ್ಯಾಯಾಲಯದಲ್ಲಿ ಅಲ್ಲ ಎಂದು ಅವರು ಹೇಳಿದ್ದಾರೆ.
Minor wrestler's father tells PTI they deliberately filed false sexual harassment complaint against WFI Chief
— Press Trust of India (@PTI_News) June 8, 2023
ಕಳೆದ ಬಾರಿ ನಡೆದ ವಿಚಾರಣೆಯಲ್ಲಿ ಮಗಳ ಸೋಲಿನ ಬಗ್ಗೆ ನ್ಯಾಯಯುತ ತನಿಖೆಗೆ ಸರ್ಕಾರ ಭರವಸೆ ನೀಡಿತ್ತು, ಹೀಗಾಗಿ ತಾವು ಸತ್ಯವನ್ನು ಮಾತನಾಡಲು ನಿರ್ಧರಿಸಿರುವುದಾಗಿ ಅಪ್ರಾಪ್ತೆಯ ತಂದೆ ಪಿಟಿಐಗೆ ತಿಳಿಸಿದ್ದಾರೆ.
ಬುಧವಾರವೇ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ಸಭೆ ನಡೆಸಿದ್ದಾರೆ ಎಂಬುದು ಇಲ್ಲಿ ಗಮನಾರ್ಹ. ಇದಾದ ನಂತರ ಕುಸ್ತಿಪಟುಗಳು ಜೂನ್ 15 ರವರೆಗೆ ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದರು.
ಅಪ್ರಾಪ್ತ ಬಾಲಕಿಯ ತಂದೆ ಹೇಳಿದ್ದೇನು?
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅವರ ಮತ್ತು ಅವರ ಮಗಳ ಅಸಮಾಧಾನದ ಕುರಿತು ಅಪ್ರಾಪ್ತೆಯ ತಂದೆ ಕೂಡ ಪ್ರತಿಕ್ರಿಯಿಸಿದ್ದಾರೆ. ಇದು 2022 ರಲ್ಲಿ ಲಖನೌನಲ್ಲಿ ನಡೆದ ಏಷ್ಯನ್ ಅಂಡರ್-17 ಚಾಂಪಿಯನ್‌ಶಿಪ್‌ನ ಟ್ರಯಲ್‌ನೊಂದಿಗೆ ಆರಂಭಗೊಂಡಿದೆ ಎಂದು ಅವರು ಹೇಳಿದ್ದಾರೆ, ಇದರಲ್ಲಿ ಅಪ್ರಾಪ್ತ ಬಾಲಕಿ ಫೈನಲ್‌ನಲ್ಲಿ ಸೋತ ನಂತರ ಭಾರತೀಯ ತಂಡಕ್ಕೆ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ರೆಫರಿಯ ನಿರ್ಧಾರಕ್ಕೆ ಬ್ರಿಜ್ ಭೂಷಣ್ ಕಾರಣ ಎಂದು ಅವರು ಹೇಳಿದ್ದರು, “ನನ್ನ ಮಗಳ ಒಂದು ವರ್ಷದ ಶ್ರಮವು ರೆಫರಿಯ ನಿರ್ಧಾರದಿಂದ ವ್ಯರ್ಥವಾದ ಕಾರಣ ನಾನು ಸೇಡು ತೀರಿಸಿಕೊಳ್ಳುವ ಭಾವನೆಯಿಂದ ತುಂಬಿದೆ. ನಾನು ಸೇಡು ತೀರಿಸಿಕೊಳ್ಳಲು ನಿರ್ಧರಿಸಿದೆ" ಎಂದು ಅವರು ಹೇಳಿದ್ದಾರೆ.
ಸಭೆಯ ನಂತರ ಕುಸ್ತಿಪಟುಗಳು ಮತ್ತು ಸರ್ಕಾರ ಹೇಳಿದ್ದೇನು?
ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಆರು ಗಂಟೆಗಳ ಸುದೀರ್ಘ ಸಭೆಯನ್ನು "ಪಾಸಿಟಿವ್" ಎಂದು ವಿವರಿಸಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜೂನ್ 15 ರೊಳಗೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬುಧವಾರ ಹೇಳಿದ್ದಾರೆ.
ಇದನ್ನೂ ಓದಿ-Wrestlers Protest: ಅಮಿತ್ ಶಾ ಜೊತೆಗಿನ ಭೇಟಿ ಹಾಗೂ ನೌಕರಿಗೆ ಹಾಜರಾಗುವ ಕುರಿತು ಸ್ಪಷ್ಟನೆ ನೀಡಿದ ಬಜರಂಗ್ ಪುನೀಯಾ
ಒಲಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸಭೆಯ ನಂತರ ತಮ್ಮ ಪ್ರತಿಭಟನೆ ಇನ್ನೂ ಮುಗಿದಿಲ್ಲ ಮತ್ತು ಸರ್ಕಾರದ ಮನವಿಯ ಮೇರೆಗೆ ತಮ್ಮ ಪ್ರತಿಭಟನೆಯನ್ನು ಜೂನ್ 15 ರವರೆಗೆ ಮುಂದೂಡಿದ್ದೇವೆ ಎಂದು ಹೇಳಿದ್ದರು.
ಜೂನ್ 15 ರೊಳಗೆ ಪೊಲೀಸ್ ತನಿಖೆ ಪೂರ್ಣಗೊಳ್ಳಲಿದೆ ಎಂದು ನಮಗೆ ಹೇಳಲಾಗಿದೆ ಎಂದು ಸಭೆಯ ನಂತರ ಸಾಕ್ಷಿ ಮಲಿಕ್ ಹೇಳಿದ್ದರು. ಮೇ 28 ರಂದು ದೆಹಲಿ ಪೊಲೀಸರು ಕುಸ್ತಿಪಟುಗಳ ವಿರುದ್ಧ ದಾಖಲಿಸಿದ ಎಫ್‌ಐಆರ್ ಅನ್ನು ಹಿಂಪಡೆಯಲಿದ್ದಾರೆ ಎಂದು ಅವರು ಹೇಳಿದ್ದರು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.