ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದನ್ನೂ ಓದಿ: ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ
ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಮೃಣಾಲ್ ಠಾಕೂರ್ ಡಯಟ್ ಸೀಕ್ರೆಟ್ ಗೊತ್ತಾದ್ರೆ ನಾಳೆಯಿಂದ ಅದನ್ನೇ ಫಾಲೋ ಮಾಡ್ತೀರಾ..!
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ ಎಂದು ಅವರು ಹೇಳಿದರು.
ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ