CWG 2022 : ಜಾವೆಲಿನ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ಆಟಗಾರ್ತಿ!

ಜಾವೆಲಿನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ. ಇವರ ಪದಕ ಸೇರಿ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ 47 ಪದಕಗಳನ್ನು ಹೊಂದಿದೆ.

Last Updated : Aug 7, 2022, 06:05 PM IST
CWG 2022 : ಜಾವೆಲಿನ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ಆಟಗಾರ್ತಿ! title=

Commonwealth Games Annu Rani : 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಇಂದು ಜಾವೆಲಿನ್ ಸ್ಪರ್ಧೆಯಲ್ಲಿ ಅಣ್ಣು ರಾಣಿಯವರು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಾವೆಲಿನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ. ಇವರ ಪದಕ ಸೇರಿ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ 47 ಪದಕಗಳನ್ನು ಹೊಂದಿದೆ.

ಅದ್ಭುತ ಪ್ರದರ್ಶನ ನೀಡಿದ ಅಣ್ಣು ರಾಣಿ 

ಭಾನುವಾರ ಇಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಅಣ್ಣು ರಾಣಿ ಇತಿಹಾಸ ನಿರ್ಮಿಸಿದ್ದು, ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಜಾವೆಲಿನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಣ್ಣು ತನ್ನ ಮೂರನೇ ಪ್ರಯತ್ನದಲ್ಲಿ 60 ಮೀಟರ್ ದೂರ ಜಾವೆಲಿನ್ ಎಸೆದು ಮೂರನೇ ಸ್ಥಾನ ಪಡೆದರು. ವಿಶ್ವ ಚಾಂಪಿಯನ್ ಆಸ್ಟ್ರೇಲಿಯದ ಕೆಲ್ಸಿ ಲೀ ಬಾರ್ಬರ್ 64.43 ಮೀಟರ್ ಎಸೆದು ಚಿನ್ನ ಗೆದ್ದರೆ, ಅವರ ದೇಶವಾಸಿ ಮೆಕೆಂಜಿ ಲಿಟಲ್ 64.27 ಮೀಟರ್ ಎಸೆದು ಎರಡನೇ ಸ್ಥಾನ ಪಡೆದರು.

ರಾಣಿಗೂ ಮುನ್ನ ಜಾವೆಲಿನ್‌ನಲ್ಲಿ ಪದಕ ಗೆದ್ದಿದ್ದ ಈ ಆಟಗಾರರು

ರಾಣಿಗಿಂತ ಮೊದಲು, ಪುರುಷರ ಜಾವೆಲಿನ್ ಎಸೆತದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಕಾಶಿನಾಥ್ ನಾಯಕ್ ಮತ್ತು ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಕ್ರಮವಾಗಿ ಕಂಚು ಮತ್ತು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ನಾಯಕ್ 2010 ದೆಹಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆದ್ದರೆ, ಚೋಪ್ರಾ 2018 ಗೋಲ್ಡ್ ಕೋಸ್ಟ್‌ನಲ್ಲಿ ಪದಕಗಳನ್ನು ಗೆದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News