CWG 2022 : ಜಾವೆಲಿನ್ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ಆಟಗಾರ್ತಿ!
ಜಾವೆಲಿನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ. ಇವರ ಪದಕ ಸೇರಿ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ 47 ಪದಕಗಳನ್ನು ಹೊಂದಿದೆ.
Commonwealth Games Annu Rani : 2022 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಇಂದು ಜಾವೆಲಿನ್ ಸ್ಪರ್ಧೆಯಲ್ಲಿ ಅಣ್ಣು ರಾಣಿಯವರು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಾವೆಲಿನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿಯಾಗಿದ್ದಾರೆ. ಇವರ ಪದಕ ಸೇರಿ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ 47 ಪದಕಗಳನ್ನು ಹೊಂದಿದೆ.
ಅದ್ಭುತ ಪ್ರದರ್ಶನ ನೀಡಿದ ಅಣ್ಣು ರಾಣಿ
ಭಾನುವಾರ ಇಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಅಣ್ಣು ರಾಣಿ ಇತಿಹಾಸ ನಿರ್ಮಿಸಿದ್ದು, ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಜಾವೆಲಿನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಣ್ಣು ತನ್ನ ಮೂರನೇ ಪ್ರಯತ್ನದಲ್ಲಿ 60 ಮೀಟರ್ ದೂರ ಜಾವೆಲಿನ್ ಎಸೆದು ಮೂರನೇ ಸ್ಥಾನ ಪಡೆದರು. ವಿಶ್ವ ಚಾಂಪಿಯನ್ ಆಸ್ಟ್ರೇಲಿಯದ ಕೆಲ್ಸಿ ಲೀ ಬಾರ್ಬರ್ 64.43 ಮೀಟರ್ ಎಸೆದು ಚಿನ್ನ ಗೆದ್ದರೆ, ಅವರ ದೇಶವಾಸಿ ಮೆಕೆಂಜಿ ಲಿಟಲ್ 64.27 ಮೀಟರ್ ಎಸೆದು ಎರಡನೇ ಸ್ಥಾನ ಪಡೆದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.