ಕ್ರೀಡಾ ಇಲಾಖೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೇಂದ್ರ ಕಚೇರಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jan 8, 2024, 10:04 PM IST
  • ಶಿಬಿರಕ್ಕೆ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
  • ಹೆಚ್ಚಿನ ಮಾಹಿತಿಗಾಗಿ ತುಕಾರಾಂ ರಂಜಪಲ್ಲಿ, ಮೊ.ಸಂ: 8197398600 ಇವರನ್ನು ಸಂಪರ್ಕಿಸಬಹುದು
ಕ್ರೀಡಾ ಇಲಾಖೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ title=

ಕೊಪ್ಪಳ: 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕೇಂದ್ರ ಕಚೇರಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ- "ಕಾಂಗ್ರೆಸ್‌ ಗ್ಯಾರಂಟಿಯಿಂದ ಆರ್ಥಿಕ ಬಲ; ಅಂಕಿ-ಅಂಶ ಬೇಕಿದ್ದರೆ ಕೇಳಿ ಪಡೆಯಿರಿ"

ಯುವಜನರಿಗೆ ಪೂರಕವಾದ ಉದ್ಯೋಗಗಳ ವಿಫುಲ ಅವಕಾಶಗಳಿದ್ದು, ಅದರಂತೆ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರವನ್ನು ಇಲಾಖೆಯ ಕೇಂದ್ರ ಕಛೇರಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

16 ರಿಂದ 30 ವರ್ಷ ವಯೋಮಿತಿಯ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜನವರಿ 24 ರಿಂದ ಫೆಬ್ರವರಿ 07 ರವರೆಗೆ 15 ದಿನಗಳ ಜಿಮ್/ಫಿಟ್ನೆಸ್ ತರಬೇತಿ, 15 ರಿಂದ 29 ವರ್ಷ ವಯೋಮಾನದ ಎಸ್‌ಎಸ್‌ಎಲ್‌ಸಿ ಪಾಸ್/ಫೇಲ್ ಆದ ಅಭ್ಯರ್ಥಿಗಳಿಗೆ ಜನವರಿ 26 ರಿಂದ ಫೆ.07 ರವರೆಗೆ 13 ದಿನಗಳ ಬ್ಯೂಟಿಷಿಯನ್ ತರಬೇತಿ, ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಜ.27 ರಿಂದ ಫೆ.07 ರವರೆಗೆ 12 ದಿನಗಳ ವಿಡಿಯೋಗ್ರಫಿ ತರಬೇತಿ ಹಾಗೂ ಪದವಿ ಹಾಗೂ ಜರ್ನಲಿಸಂ ವಿದ್ಯಾರ್ಹತೆ ಹೊಂದಿರುವವರಿಗೆ 8 ದಿನಗಳ ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ- "ಕಾಂಗ್ರೆಸ್‌ ಗ್ಯಾರಂಟಿಯಿಂದ ಆರ್ಥಿಕ ಬಲ; ಅಂಕಿ-ಅಂಶ ಬೇಕಿದ್ದರೆ ಕೇಳಿ ಪಡೆಯಿರಿ"

ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಮೇಲ್ಕಂಡ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಶಿಬಿರಗಳಿಗೆ ಹಾಜರಾಗಲು ಆಸಕ್ತ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಕಛೇರಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಜನವರಿ 15 ರ ಸಾಯಂಕಾಲ 5.30ರೊಳಗಾಗಿ(ಕಛೇರಿ ಅವಧಿಯೊಳಗೆ) ಸಲ್ಲಿಸಬೇಕು.

ಶಿಬಿರಕ್ಕೆ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ತುಕಾರಾಂ ರಂಜಪಲ್ಲಿ, ಮೊ.ಸಂ: 8197398600 ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News