IPL Auction 2021: ಮುಂಬಯಿ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾದ ಅರ್ಜುನ್ ತೆಂಡೂಲ್ಕರ್ ಮೊದಲ ಪ್ರತಿಕ್ರಿಯೆ. ಇಲ್ಲಿದೆ ವಿಡಿಯೋ

ಚೆನ್ನೈನಲ್ಲಿ ಗುರುವಾರ ನಡೆದ ಐಪಿಎಲ್ 2021  ಹರಾಜಿನಲ್ಲಿ ಭಾರತದ ಶ್ರೇಷ್ಠ ಬ್ಯಾಟ್ಸ್ ಮೆನ್ ಸಚಿನ್ ತೆಂಡೂಲ್ಕರ್  ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಖರೀದಿಸಿದೆ. 

Written by - Ranjitha R K | Last Updated : Feb 19, 2021, 01:39 PM IST
  • ಮುಂಬಯಿ ಇಂಡಿಯನ್ಸ್ ಪಾಲಾದ ಸಚಿನ್ ಪುತ್ರ
  • ತಂಡಕ್ಕೆ ಆಯ್ಕೆಯಾದ ಬಳಿಕ ಅರ್ಜುನ್ ತೆಂಡೂಲ್ಕರ್ ಮೊದಲ ಪ್ರತಿಕ್ರಿಯೆ
  • ಬ್ಲೂ ಗೋಲ್ಡನ್ ಜರ್ಸಿಯನ್ನು ಧರಿಸಲು ಕಾಯುತ್ತಿದ್ದೇನೆ ಎಂದ ಅರ್ಜುನ್
IPL Auction 2021: ಮುಂಬಯಿ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾದ ಅರ್ಜುನ್ ತೆಂಡೂಲ್ಕರ್ ಮೊದಲ ಪ್ರತಿಕ್ರಿಯೆ. ಇಲ್ಲಿದೆ ವಿಡಿಯೋ title=
ಮುಂಬಯಿ ಇಂಡಿಯನ್ಸ್ ಪಾಲಾದ ಸಚಿನ್ ಪುತ್ರ (photo twitter)

ಚೆನ್ನೈ: ಚೆನ್ನೈನಲ್ಲಿ ಗುರುವಾರ ನಡೆದ ಐಪಿಎಲ್ 2021 (IPL Auction) ಹರಾಜಿನಲ್ಲಿ ಭಾರತದ ಶ್ರೇಷ್ಠ ಬ್ಯಾಟ್ಸ್ ಮೆನ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಅವರನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians)ಖರೀದಿಸಿದೆ. ಎಡಗೈ ವೇಗದ ಬೌಲರ್ ಮತ್ತು ಆಲ್‌ರೌಂಡರ್ ಅರ್ಜುನ್ ತೆಂಡೂಲ್ಕರ್   20 ಲಕ್ಷ ರೂಪಾಯಿಗಳಿಗೆ  ಮುಂಬೈ ಇಂಡಿಯನ್ಸ್ ಪಾಲಾಗಿದ್ದಾರೆ.

ಅರ್ಜುನ್ ತೆಂಡೂಲ್ಕರ್ (Arjun Tendulkar) ಇತ್ತೀಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ಪರ ಆಡಿದ್ದರು. ಅಲ್ಲದೆ, ಅವರು ಮುಂಬೈ ಇಂಡಿಯನ್ಸ್ (Mumbai Indians)ತಂಡದೊಂದಿಗೆ ಸ್ವಲ್ಪ ಸಮಯದವರೆಗೆ ತರಬೇತಿ ಪಡೆಯುತ್ತಿದ್ದರು. ಅರ್ಜುನ್ ತೆಂಡೂಲ್ಕರ್ ತಂದೆ ಸಚಿನ್ ತೆಂಡೂಲ್ಕರ್  (Sachin Tendulkar)ತಮ್ಮ ಅವಧಿಯಲ್ಲಿ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು.

ಇದನ್ನೂ ಓದಿ : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆಯ್ಕೆಯಾಗಿಲ್ಲವಾದರೂ 9.25 ಕೋಟಿ ರೂಗೆ ಹರಾಜಾದ ಕನ್ನಡಿಗ...!

ಮುಂಬೈ ಇಂಡಿಯನ್ಸ್ ಸೇರಿದ ನಂತರ ಅರ್ಜುನ್ ತೆಂಡೂಲ್ಕರ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.  'ನಾನು ಬಾಲ್ಯದಿಂದಲೂ ಮುಂಬೈ ಇಂಡಿಯನ್ಸ್ ನ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ನನ್ನ ಮೇಲೆ ವಿಶ್ವಾಸ ತೋರಿಸಿದ್ದಕ್ಕಾಗಿ ತರಬೇತುದಾರರು, ಸಪೋರ್ಟ್ ಸ್ಟಾಫ್ ಮತ್ತು ತಂಡದ ಮಾಲೀಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

'ಮುಂಬೈ ಪಾಲ್ಟಾನ್ ಸೇರಲು ನಾನು ತುಂಬಾ ಉತ್ಸುಕನಾಗಿದ್ದೇನೆ ಮತ್ತು ಬ್ಲೂ ಗೋಲ್ಡನ್ ಜರ್ಸಿಯನ್ನು (Blue golden jersey) ಧರಿಸಲು ಕುತೂಹಲದಿಂದ ಕಾಯುತ್ತಿದ್ದೇನೆ' ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ತೆಂಡೂಲ್ಕರ್ ಐಪಿಎಲ್ ಹರಾಜಿನ (IPL auction) ಒಂದು ದಿನ ಮೊದಲು ಫೋಟೋವನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲೂ ಅರ್ಜುನ್ ಮುಂಬೈ ಇಂಡಿಯನ್ಸ್ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ : ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಹರಾಜಾಗಿದ್ದು ಎಷ್ಟಕ್ಕೆ ಗೊತ್ತೇ?

ಮುಂಬಯಿ ಇಂಡಿಯನ್ಸ್ ತಂಡದ ಪಾಲಾಗಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ (Social media) ಭಾರೀ ಚರ್ಚೆ ನಡೆಯುತ್ತಿದೆ. ಈ ಆಯ್ಕೆ ನೆಪೊಟಿಸಮ್ ಗೆ (nepotism) ಉದಾಹಣೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಅರ್ಜುನ್ ಬಗ್ಗೆ ಈಗಲೇ ನಿರ್ಧಾರಕ್ಕೆ ಬರುವುದು ಸರಿಯಲ್ಲ, ಮೈದಾನದಲ್ಲಿ ಆತನ ಪ್ರದರ್ಶನ ನೋಡಿದ ಬಳಿಕ ತೀರ್ಮಾನಕ್ಕೆ ಬರುವುದು ಒಳ್ಳೆಯದು ಎಂದು ಇನ್ನೊಂದು ಗುಂಪು ವಾದಿಸುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News