IND vs BAN T20 :ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 T20 ಪಂದ್ಯಗಳ ಸರಣಿಯ ಎರಡನೇ ಪಂದ್ಯ ದೆಹಲಿಯಲ್ಲಿ ನಡೆಯಲಿದೆ.ಬುಧವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯಕುಮಾರ್ ಯಾದವ್ ತಂಡವು ಸರಣಿಯನ್ನು ಗೆಲ್ಲವ ತವಕದಲ್ಲಿದೆ. ಗ್ವಾಲಿಯರ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು.ಇದೀಗ ಎರಡನೇ ಟಿ20 ಗೆಲ್ಲುವ ಮೂಲಕ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲಿದೆ. ಇದಕ್ಕೂ ಮುನ್ನ ಸೂರ್ಯ ನಾಯಕತ್ವದಲ್ಲಿ ಭಾರತ ಶ್ರೀಲಂಕಾವನ್ನು 3-0 ಅಂತರದಿಂದ ಸೋಲಿಸಿತ್ತು.
ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಭಾರತದ ಸ್ಟಾರ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ದೊಡ್ಡ ದಾಖಲೆ ಬರೆಯಲು ಮುಂದಾಗಿದ್ದಾರೆ. 2022 ರಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್, ಟಿ 20 ನಲ್ಲಿ ದೇಶದ ಪ್ರಮುಖ ಬೌಲರ್ಗಳಲ್ಲಿ ಒಬ್ಬರಾಗಿದ್ದಾರೆ.ಅರ್ಷದೀಪ್ ತಮ್ಮ ವೃತ್ತಿಜೀವನದಲ್ಲಿ ಒಂದು ಮೈಲಿಗಲ್ಲು ಸಾಧಿಸುವ ಸನಿಹದಲ್ಲಿದ್ದಾರೆ. ಸರಣಿಯ ಅಂತ್ಯದ ವೇಳೆಗೆ ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂದೆನಿಸಿಕೊಳ್ಳುವ ಸಾಧ್ಯತೆ ಇದೆ. ಭಾರತದ ಇಬ್ಬರು ದಿಗ್ಗಜ್ಜರನ್ನು ಹಿಂದಿಕ್ಕಿ ಹೊಸ ಇತಿಹಾಸ ಬರೆಯಲು ಮುಂದಾಗಿದ್ದಾರೆ ಅರ್ಷದೀಪ್ ಸಿಂಗ್ .
ಇದನ್ನೂ ಓದಿ: IND vs BAN: T20I ಸರಣಿಯ ನಡುವೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ ಈ ಆಟಗಾರ!
ಮುರಿಯುವತ್ತ ಬುಮ್ರಾ ಮತ್ತು ಭುವನೇಶ್ವರ್ ದಾಖಲೆ :
ಗ್ವಾಲಿಯರ್ನಲ್ಲಿ ನಡೆದ ಮೊದಲ ಟಿ20ಯಲ್ಲಿ ಮೂರು ವಿಕೆಟ್ಗಳನ್ನು ಕಬಳಿಸಿದ ನಂತರ, ಅರ್ಶ್ದೀಪ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 86 ವಿಕೆಟ್ಗಳನ್ನು ಪಡೆದಿದ್ದಾರೆ.ಅವರು ಪ್ರಸ್ತುತ ಫಾರ್ಮ್ ಅನ್ನು ಉಳಿಸಿಕೊಂಡರೆ, ಅವರು ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕುವ ಸಾಧ್ಯತೆ ಇದೆ. ಬುಮ್ರಾ 70 ಟಿ20 ಪಂದ್ಯಗಳಲ್ಲಿ 89 ವಿಕೆಟ್ಗಳನ್ನು ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ 87 ಟಿ20 ಪಂದ್ಯಗಳಲ್ಲಿ 90 ವಿಕೆಟ್ ಪಡೆದಿದ್ದಾರೆ.ಈ ವಿಷಯದಲ್ಲಿ ಯುಜುವೇಂದ್ರ ಚಹಾಲ್ ಇನ್ನೂ ನಂಬರ್-1 ಸ್ಥಾನದಲ್ಲಿದ್ದಾರೆ.
ಕೇವಲ ಒಂದು ವಿಕೆಟ್ ಹಿಂದೆ :
ಭಾರತದ ಪರ T20ಯಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆಯುವ ವಿಷಯದಲ್ಲಿ, ಅವರು ತಮ್ಮ ಸಹ ಆಟಗಾರ ಹಾರ್ದಿಕ್ ಪಾಂಡ್ಯರಿಂದ ಕೇವಲ ಒಂದು ವಿಕೆಟ್ ಹಿಂದಿದ್ದಾರೆ. ಇಬ್ಬರೂ ಈ ಸರಣಿಯಲ್ಲಿ ಆಡುತ್ತಿದ್ದಾರೆ.ಹಾರ್ದಿಕ್ ಇದುವರೆಗೆ ಟಿ20ಯಲ್ಲಿ ಭಾರತದ ಪರ 87 ವಿಕೆಟ್ ಪಡೆದಿದ್ದಾರೆ. ಭಾರತದ ಮುಂದಿನ ಎರಡು ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಮತ್ತು ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅಕ್ಟೋಬರ್ 12 ರಂದು ನಡೆಯಲಿವೆ. ನಂತರ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪ್ರವೇಶಿಸಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.