ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 3 ನೇ ಟಿ-20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ 9 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.



COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿರಾಟ್ ಪಡೆ ಶಿಖರ್ ಧವನ್ ಅವರ 36 ರನ್ ಗಳ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 134 ರನ್ ಗಳಿಸಿತು. ದಕ್ಷಿಣ ಆಫ್ರಿಕಾದ ಪರ ಫೋರ್ಟಿನ್, ರಬಡಾ, ಹೆಂಡ್ರಿಕ್ಸ್ ಅವರ  ತಲಾ 2 ,3, 2 ರಂತೆ ವಿಕೆಟ್ ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿದರು.



ಭಾರತ ತಂಡ ನೀಡಿದ 135 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಕೇವಲ ಒಂದು ವಿಕೆಟ್ ನಷ್ಟಕ್ಕೆ 16. 5 ಓವರ್ ಗಳಲ್ಲಿ 140 ರನ್ ಗಳಿಸಿ ಗೆಲುವು ಸಾಧಿಸಿತು. ಆ ಮೂಲಕ ಈಗ ಸರಣಿಯನ್ನು ಸಮ ಮಾಡಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಡಿಕಾಕ್ ಅವರ ಅಜೇಯ 79 ರನ್ ಗಳ ನೆರವಿನಿಂದ ಸುಲಭ ಗೆಲುವು ಸಾಧಿಸಿತು.  ಅವರು ಇದರಲ್ಲಿ ಆರು ಬೌಂಡರಿ ಹಾಗೂ 5 ಸಿಕ್ಸರ್ ಗಳು ಸೇರಿದ್ದವು .