IND vs AFG : ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ 111 ರನ್ ಗಳ ಜಯ

ಏಷ್ಯಾ ಕಪ್ 2022 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಕೊನೆಯ ಪಂದ್ಯ ದಲ್ಲಿ ಟೀಂ ಇಂಡಿಯಾ 101 ರನ್ ಗಳ ಭರ್ಜರಿ ಜಯ ಸಾಧಿಸಿದೆ.   

Written by - Channabasava A Kashinakunti | Last Updated : Sep 8, 2022, 10:52 PM IST
  • ಅಫ್ಘಾನಿಸ್ತಾನ ವಿರುದ್ಧ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ
  • ಕೊಹ್ಲಿ ಟಿ20ಯಲ್ಲಿ 3,500 ರನ್ ಮತ್ತುಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ
  • ಟೀಂ ಇಂಡಿಯಾ 212/2 ಕ್ಕೆ ತಮ್ಮ ಬ್ಯಾಟಿಂಗ್ ಮುಕ್ತಾಯ ಗೊಳಿಸಿದರು.
IND vs AFG : ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ 111 ರನ್ ಗಳ ಜಯ title=

Asia Cup 2022 : ಏಷ್ಯಾ ಕಪ್ 2022 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಕೊನೆಯ ಪಂದ್ಯ ದಲ್ಲಿ ಟೀಂ ಇಂಡಿಯಾ 101 ರನ್ ಗಳ ಭರ್ಜರಿ ಜಯ ಸಾಧಿಸಿದೆ.   

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಮೊದಲ ಟಿ20 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅಲ್ಲದೆ, ಕೊಹ್ಲಿ ಟಿ20ಯಲ್ಲಿ 3,500 ರನ್ ಮತ್ತುಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ಸಿಡಿಸಿದ್ದಾರೆ. ವಿರಾಟ್ ಅವರ ಅಮೋಘ ಶತಕದ ನಂತರ, ಟೀಂ ಇಂಡಿಯಾ 212/2 ಕ್ಕೆ ತಮ್ಮ ಬ್ಯಾಟಿಂಗ್ ಮುಕ್ತಾಯ ಗೊಳಿಸಿದರು.

ಇದನ್ನೂ ಓದಿ : Virat Kohli : ಚೊಚ್ಚಲ ಶತಕ ಸಿಡಿಸಿ ಭಾವುಕರಾಗಿ, ಮದುವೆ ಉಂಗುರಕ್ಕೆ ಕಿಸ್ ಮಾಡಿದ ಕೊಹ್ಲಿ

ಕೊಹ್ಲಿ 61 ಎಸೆತಗಳಲ್ಲಿ 122 ರನ್‌ಗಳನ್ನು ಸಿಡಿಸಿದರೆ, ಪಂತ್ 16 ರಲ್ಲಿ 20 ರನ್ ಗಳಿಸಿದರು. ಅಫ್ಘಾನಿಸ್ತಾನಕ್ಕೆ ಈಗ 20.0 ಓವರ್‌ಗಳಲ್ಲಿ ಟೀಂ ಇಂಡಿಯಾ 213 ರನ್‌ಗಳ ಟಾರ್ಗೆಟ್ ನೀಡಿತ್ತು. ಆದ್ರೆ,  ಅಫ್ಘಾನಿಸ್ತಾ ತಂಡವು 20 ಓವರಗಳಿಗೆ 8 ವಿಕೆಟ್ ಕಳೆದುಕೊಂಡು 111 ರನ್ ಗಳಿಸಿತು.

ಟೀಂ ಇಂಡಿಯಾ ಪ್ಲೇಯಿಂಗ್ XI : ಕೆಎಲ್ ರಾಹುಲ್(ಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ಡಬ್ಲ್ಯೂ), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.

ಅಫ್ಘಾನಿಸ್ತಾನದ ಪ್ಲೇಯಿಂಗ್ XI: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ಡಬ್ಲ್ಯೂ), ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ಸಿ), ಕರೀಮ್ ಜನತ್, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಎಫ್.

ಇದನ್ನೂ ಓದಿ : Ind vs AFG T20 : ಟಿ20ಐನಲ್ಲಿ ಪ್ರಪ್ರಥಮ ಶತಕ ಸಿಡಿಸಿದ ಕಿಂಗ್ ಕೊಹ್ಲಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News