Asia Cup 2022 : ಭಾರತವು ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನದ ವಿರುದ್ಧ ಹೈ-ವೋಲ್ಟೇಜ್ ಪಂದ್ಯದೊಂದಿಗೆ ಏಷ್ಯಾ ಕಪ್ ಸರಣಿಯನ್ನು ಪ್ರಾರಂಭಿಸಲಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಿದ್ದವು, ಪಾಕಿಸ್ತಾನವು ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಭಾನುವಾರ ನಡೆಯುವ ಬಿಗ್ ಮ್ಯಾಚ್‌ಗೂ ಮುನ್ನ ಭಾರತದ ಆಟಗಾರರು ನೆಟ್ಸ್‌ನಲ್ಲಿ ಬೆವರಿಲಿಸುತ್ತಿದ್ದಾರೆ.
ಬ್ಯಾಟ್ ಝಳಪಿಸಲಿದ್ದಾರೆ ವಿರಾಟ್
ಬಹಳ ದಿನಗಳಿಂದ ಕಳಪೆ ಫಾರ್ಮ್ ನಲ್ಲಿ ಹೋರಾಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಭಾರತದ ಮಾಜಿ ನಾಯಕ ನೆಟ್‌ಗಳಲ್ಲಿ ಬೆವರಿಳಿಸುತ್ತಿದ್ದಾರೆ, ಮತ್ತು ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಅರ್ಷ್‌ದೀಪ್ ಸಿಂಗ್ ನೇತೃತ್ವದ ವೇಗದ ಬೌಲರ್‌ಗಳು ಭರ್ಜರಿ ತಯಾರಿಯಲ್ಲಿದ್ದಾರೆ.
ರೋಹಿತ್-ರಾಹುಲ್ ಕೂಡ ಭರ್ಜರಿ ಬ್ಯಾಟಿಂಗ್
ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಕೆಲವು ಭಾರಿ ಹೊಡೆತಗಳ ಮೂಲಕ ಉತ್ತಮ ಟಚ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾಕಿಸ್ತಾನದ ವೇಗದ ದಾಳಿಯನ್ನು ಗಮನಿಸಿದರೆ, ಭಾರತೀಯ ಬೌಲರ್‌ಗಳು ಸಾಕಷ್ಟು ಶಾಟ್-ಪಿಚ್ ಬಾಲ್‌ಗಳನ್ನು ಬೌಲಿಂಗ್ ಮಾಡುವುದನ್ನು ಕಾಣಬಹುದು, ನಮ್ಮ್ ಬ್ಯಾಟ್ಸಮನ್ ಗಳು ಸರಿಯಾಗಿ ಬ್ಯಾಟ್ಸ್ ಬಿಸಿದರೆ ಗೆಲುವು ಭಾರತಕ್ಕೆ ಖಚಿತ. ನೆಟ್ಸ್‌ನಲ್ಲಿ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಿದ ರೀತಿ ನೋಡಿದರೆ ಭಾರತ ಮೂರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿಯಲಿದೆಯಂತೆ.
ಬೌಲಿಂಗ್ ಭಾರಿ ಸಿದ್ಧತೆ..!
ದುಬೈನಲ್ಲಿ ಶುಷ್ಕ ಹವಾಮಾನದ ಪರಿಸ್ಥಿತಿಯನ್ನು ಗಮನಿಸಿದರೆ, ಭಾರತವು ಮೂವರು ವೇಗದ ಬೌಲರ್‌ಗಳೊಂದಿಗೆ ಆಡಬಹುದು. ಹಾಗೆ, ಯುಜ್ವೇಂದ್ರ ಚಾಹಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಸೇರಿಸಿದರೆ, ರವೀಂದ್ರ ಜಡೇಜಾ ಎರಡನೇ ಸ್ಪಿನ್ನರ್ ಆಗಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭಾರತದ ಮೂರನೇ ಸೀಮರ್ ಆಗಿ ಬೌಲಿಂಗ್ ಮಾಡುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.