Virat Kohli-Haris Rauf Viral Video: ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ಜಿದ್ದಾಜಿದ್ದಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯ ಪಲ್ಲೆಕೆಲೆಯಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ರಿಂದ ಪ್ರಾರಂಭವಾಗಲಿದೆ. ಇನ್ನು ಈ ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸ ನೀಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಭಾರತದ ಆಟಗಾರ ವಿರಾಟ್ ಕೊಹ್ಲಿಯೊಂದಿಗೆ ಕಾಣಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತ-ಪಾಕ್ ಏಷ್ಯಾಕಪ್ ಪಂದ್ಯಕ್ಕೆ ಮಳೆ ಅಡ್ಡಿ! ರದ್ದಾಗುತ್ತಾ ಹೈವೋಲ್ಟೇಜ್ ಪಂದ್ಯ?


ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮತ್ತು ಹ್ಯಾರಿಸ್ ರೌಫ್ ಪರಸ್ಪರ ಪ್ರೀತಿಯಿಂದ ಭೇಟಿಯಾಗುತ್ತಿರುವುದು ಕಂಡುಬಂದಿದೆ. ಈ ವೇಳೆ ಇವರಿಬ್ಬರು ಪರಸ್ಪರ ಅಪ್ಪಿಕೊಂಡಿದ್ದನ್ನು ಸಹ ಕಾಣಬಹುದು. ಈ ವಿಡಿಯೋ ವೈರಲ್ ಆಗಿದ್ದೇ ತಡ ನೆಟಿಜನ್ಸ್ ಕಮೆಂಟ್’ಗಳ ಮೂಲಕ ಸಖತ್ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ.


ಕ್ರಿಕೆಟ್ ಇತಿಹಾಸದಲ್ಲೇ ಮೊದಲು… ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪಾದಾರ್ಪಣೆ ಮಾಡಿದ ಮಂಗಳಮುಖಿ


ಟೀಂ ಇಂಡಿಯಾ ಶನಿವಾರ ಅಂದರೆ ಇಂದು ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ನೇಪಾಳವನ್ನು 238 ರನ್‌’ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಭಾರತ ಮತ್ತು ಪಾಕಿಸ್ತಾನವನ್ನು ಹೊರತುಪಡಿಸಿ ನೇಪಾಳವು ಗ್ರೂಪ್-ಎಯಲ್ಲಿದೆ. ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ರೀತಿಯಾಗಿ 6 ​​ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.