Asian Games 2023: 9 ವರ್ಷಗಳ ಬಳಿಕ ಚಿನ್ನ ಗೆದ್ದ ಭಾರತ ಪುರುಷರ ಹಾಕಿ ತಂಡ: ಪ್ಯಾರಿಸ್ ಒಲಿಂಪಿಕ್ಸ್’ಗೆ ಟಿಕೆಟ್ ಫಿಕ್ಸ್

Indian men's hockey team: ಒಂಬತ್ತು ವರ್ಷಗಳ ನಂತರ ಏಷ್ಯನ್ ಗೇಮ್ಸ್‌’ನಲ್ಲಿ ಭಾರತ ಹಾಕಿ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತವು ಪ್ಯಾರಿಸ್ ಒಲಿಂಪಿಕ್ಸ್ 2024 ರ ಕೋಟಾವನ್ನು ಸಹ ಪಡೆದುಕೊಂಡಿದೆ

Written by - Bhavishya Shetty | Last Updated : Oct 6, 2023, 06:35 PM IST
Asian Games 2023: 9 ವರ್ಷಗಳ ಬಳಿಕ ಚಿನ್ನ ಗೆದ್ದ ಭಾರತ ಪುರುಷರ ಹಾಕಿ ತಂಡ: ಪ್ಯಾರಿಸ್ ಒಲಿಂಪಿಕ್ಸ್’ಗೆ ಟಿಕೆಟ್ ಫಿಕ್ಸ್ title=
India Men's Hockey Team

Asian Games 2023: 2023ರ ಏಷ್ಯನ್ ಗೇಮ್ಸ್‌’ನಲ್ಲಿ ಭಾರತ ಹಾಕಿ ತಂಡ ಫೈನಲ್‌’ನಲ್ಲಿ ಜಪಾನ್ ತಂಡವನ್ನು ಸೋಲಿಸುವ ಮೂಲಕ ಚಿನ್ನದ ಪದಕ ಗೆದ್ದಿದೆ. ಶುಕ್ರವಾರ ಅಂದರೆ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ 5-1 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿತು.

ಇದನ್ನೂ ಓದಿ: ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸುವ ಸ್ಟೇಡಿಯಂಗಳಲ್ಲಿ ಫ್ರೀ ಆಗಿ ಸಿಗಲಿದೆ ಈ ವಸ್ತು!

ಈ ಗೆಲುವಿನ ಮೂಲಕ ಒಂಬತ್ತು ವರ್ಷಗಳ ನಂತರ ಏಷ್ಯನ್ ಗೇಮ್ಸ್‌’ನಲ್ಲಿ ಭಾರತ ಹಾಕಿ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತವು ಪ್ಯಾರಿಸ್ ಒಲಿಂಪಿಕ್ಸ್ 2024 ರ ಕೋಟಾವನ್ನು ಸಹ ಪಡೆದುಕೊಂಡಿದೆ.

 

 

ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ರಣಾವತ್ ಮದುವೆ..! ‘ರಾಣಿ’ಯ ವರಿಸುವ ವರನ್ಯಾರು ಗೊತ್ತಾ?

ಈ ಪಂದ್ಯದ ಆರಂಭದಲ್ಲಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪಂದ್ಯದ ಮೊದಲ ಕ್ವಾರ್ಟರ್ ಗೋಲು ರಹಿತವಾಗಿ ಉಳಿದಿತ್ತು. ಮಂದೀಪ್ ಸಿಂಗ್ ಎರಡನೇ ಕ್ವಾರ್ಟರ್‌’ನಲ್ಲಿ ಮೊದಲ ಗೋಲು ಗಳಿಸಿದರು. ವಿರಾಮದ ವೇಳೆಗೆ ಸ್ಕೋರ್ 1-0 ಆಗಿತ್ತು. ಮೂರನೇ ಕ್ವಾರ್ಟರ್‌’ನಲ್ಲಿ ಭಾರತ ಇನ್ನೆರಡು ಗೋಲು ಗಳಿಸಿ 3-0 ಮುನ್ನಡೆ ಸಾಧಿಸಿತು. ಮೂರನೇ ಕ್ವಾರ್ಟರ್‌’ನಲ್ಲಿ ಹರ್ಮನ್‌ಪ್ರೀತ್ ಮತ್ತು ಅಮಿತ್ ರೋಹಿದಾಸ್ ಗೋಲು ದಾಖಲಿಸಿದರು. ಇನ್ನು ಮೂರನೇ ಕ್ವಾರ್ಟರ್‌’ನ ಅಂತ್ಯಕ್ಕೆ 3-0 ಮುನ್ನಡೆ ಸಾಧಿಸಿದರೆ, ನಾಲ್ಕನೇ ಕ್ವಾರ್ಟರ್‌’ನಲ್ಲಿ ಅಭಿಷೇಕ್ ಮತ್ತೊಂದು ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 4-0ಗೆ ಹೆಚ್ಚಿಸಿದರು. ಈ ಕ್ವಾರ್ಟರ್‌’ನಲ್ಲಿ ಜಪಾನ್ ಒಂದು ಗೋಲು ಗಳಿಸಿತು. ಆದರೆ ಹರ್ಮನ್‌’ಪ್ರೀತ್ ಭಾರತದ ಐದನೇ ಗೋಲು ಗಳಿಸಿ ಮುನ್ನಡೆಯನ್ನು 5-1ಕ್ಕೆ ಹೆಚ್ಚಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 9 ವರ್ಷಗಳ ಬಳಿಕ ಚಿನ್ನ ಮುಡಿಗೇರಿಸಿಕೊಂಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News