ICC World Test Championship Record: ಟೆಸ್ಟ್ ಕ್ರಿಕೆಟ್ ಸ್ವರೂಪವನ್ನು ಮತ್ತಷ್ಟು ಆಸಕ್ತಿದಾಯಕವಾಗಿಸಲೆಂದೇ ICC 2019 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ ಎರಡು ಆವೃತ್ತಿಗಳು ಪೂರ್ಣಗೊಂಡಿವೆ. 2021ರಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲನ್ನು ಎದುರಿಸಬೇಕಾಯಿತು. ಆ ಬಳಿಕ 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮತ್ತೆ ಸೋಲನುಭವಿಸಿತ್ತು. ಈ ಮೂಲಕ ಭಾರತಕ್ಕೆ ಇದುವರೆಗೆ ನಡೆದಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 2 ಫೈನಲ್‌ನಲ್ಲಿ ಆಡುವ ಅವಕಾಶ ಸಿಕ್ಕಿದೆ. ಆದರೆ, ಇನ್ನೂ ಗೆದ್ದಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹುಳುಕು ಹಲ್ಲು ಮತ್ತು ತಡೆಯಲಾರದ ನೋವಿಗೆ ಉಪ್ಪು ಅಲ್ಲ ಈ ವಸ್ತು ಬಳಸಿ! ಚಿಟಿಕೆಯಲ್ಲಿ ನೋವು ಕಡಿಮೆಯಾಗಿ ಪರಿಹಾರ ಸಿಗುವುದು... 60 ವರ್ಷವಾದ್ರೂ ಹಲ್ಲುನೋವಿನ ಸಮಸ್ಯೆಯೇ ಬರಲ್ಲ


2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ನಲ್ಲಿ ಅನೇಕ ದಾಖಲೆಗಳನ್ನು ಮಾಡಲಾಗಿದೆ. ಕೆಲವು ದಾಖಲೆಗಳು ಮುರಿಯಲ್ಪಟ್ಟಿವೆ ಮತ್ತು ಕೆಲವು ಇನ್ನೂ ಹಾಗೇ ಉಳಿದಿವೆ. ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಅವಧಿಯಲ್ಲಿ 58 ಪಂದ್ಯಗಳನ್ನು ಆಡಿರುವ ಅವರು, 4973 ರನ್ ಗಳಿಸಿದ್ದಾರೆ. ಬೌಲಿಂಗ್ ಬಗ್ಗೆ ಮಾತನಾಡುವುದಾದರೆ, ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಈ ವಿಷಯದಲ್ಲಿ ನಂಬರ್-1 ಆಗಿದ್ದಾರೆ. ಲಿಯಾನ್ 43 ಪಂದ್ಯಗಳಲ್ಲಿ 187 ವಿಕೆಟ್ ಪಡೆದಿದ್ದಾರೆ.


ಅದೇ ರೀತಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. ವಾರ್ನರ್ ನವೆಂಬರ್ 2019 ರಲ್ಲಿ ಪಾಕಿಸ್ತಾನದ ವಿರುದ್ಧ ತ್ರಿಶತಕ ಗಳಿಸಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ತ್ರಿಶತಕ ಸಿಡಿಸಿದ ಏಕೈಕ ಬ್ಯಾಟ್ಸ್‌ಮನ್. ಇವರನ್ನು ಬಿಟ್ಟರೆ ಇಲ್ಲಿಯವರೆಗೆ ಯಾವುದೇ ಆಟಗಾರ 270 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಿಲ್ಲ. ವಾರ್ನರ್ ಅಡಿಲೇಡ್‌ನಲ್ಲಿ 335 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. 554 ನಿಮಿಷಗಳ ಕಾಲ ಬ್ಯಾಟ್ ಮಾಡಿದ ಅವರು 418 ಎಸೆತಗಳನ್ನು ಎದುರಿಸಿದರು. ಈ ಅವಧಿಯಲ್ಲಿ ವಾರ್ನರ್ 39 ಬೌಂಡರಿಗಳು ಮತ್ತು 1 ಸಿಕ್ಸರ್ ಬಾರಿಸಿದ್ದರು.


ಇದನ್ನೂ ಓದಿ: ರಾಜ್ಯಪಾಲರ ಕಚೇರಿ ಅಧಿಕಾರಿಗಳ ಸಿಬ್ಬಂದಿ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ಬಗ್ಗೆ HDK ಕಿಡಿ


ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ದಾಖಲೆಯನ್ನು ವಾರ್ನರ್ ಹೊಂದಿದ್ದಾರೆ. ಈ ದಾಖಲೆಯನ್ನು ಮುರಿಯಲು ಇನ್ನೂ ಯಾರಿಂದಲೂ ಸಾಧ್ಯವಾಗಿಲ್ಲ. ಈ ವಿಷಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾಕ್ ಕ್ರಾಲಿ ಎರಡನೇ ಸ್ಥಾನದಲ್ಲಿದ್ದಾರೆ. 2020 ರಲ್ಲಿ ಸೌತಾಂಪ್ಟನ್‌ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಾಲಿ 393 ಎಸೆತಗಳಲ್ಲಿ 267 ರನ್ ಗಳಿಸಿದ್ದರು. ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 2019ರಲ್ಲಿ ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಕೊಹ್ಲಿ ಅಜೇಯ 254 ರನ್ ಗಳಿಸಿದ್ದರು. ಅಗ್ರ-5ರಲ್ಲಿ ಸೇರ್ಪಡೆಗೊಂಡ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಅಂದರೆ ಅದು ಕೊಹ್ಲಿ ಮಾತ್ರ.


ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ಸ್ಕೋರ್


  • ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 335*

  • ಜ್ಯಾಕ್ ಕ್ರಾಲಿ (ಇಂಗ್ಲೆಂಡ್)- 267

  • ವಿರಾಟ್ ಕೊಹ್ಲಿ (ಭಾರತ)- 254*

  • ಟಾಮ್ ಲ್ಯಾಥಮ್ (ನ್ಯೂಜಿಲೆಂಡ್)- 252

  • ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)- 251


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.