ದುಬೈ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ (ICC Test Rankings) ಪಟ್ಟಿ ಬಿಡುಗಡೆಯಾಗಿದೆ. ಆ್ಯಶಸ್‌ನಲ್ಲಿ 4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ (Australia) ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋತ ನಂತರ, ಭಾರತ (India) ಮೂರನೇ ಸ್ಥಾನಕ್ಕೆ ಕುಸಿದಿದೆ.
ನ್ಯೂಜಿಲೆಂಡ್ (New Zealand) ತನ್ನ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್ 1-1 ಅಂತರದಲ್ಲಿ ಸರಣಿ ಡ್ರಾ ಮಾಡಿಕೊಂಡಿತ್ತು.
ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ 119 ಅಂಕಗಳನ್ನು ಹೊಂದಿದೆ ಮತ್ತು ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಮೂರನೇ ಸ್ಥಾನದಲ್ಲಿರುವ ಭಾರತಕ್ಕಿಂತ ಮೂರು ಅಂಕ ಮುಂದಿದೆ.
ಭಾರತ ವಿರುದ್ಧದ ಸರಣಿ ಗೆಲುವಿನ ನಂತರ ದಕ್ಷಿಣ ಆಫ್ರಿಕಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಐದನೇ ಸ್ಥಾನಕ್ಕೆ ಏರಿದೆ. ಇಂಗ್ಲೆಂಡ್ 101 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಪಾಕಿಸ್ತಾನ ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ತಲುಪಿದ್ದರೆ, ಶ್ರೀಲಂಕಾ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಜಿಂಬಾಬ್ವೆ, ಅಫ್ಘಾನಿಸ್ತಾನ ಮತ್ತು ಐರ್ಲೆಂಡ್ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿವೆ.
👊 4-0 #Ashes series winners
📊 Second on the #WTC23 table
🥇 Top-ranked Test team in the world!Australia's rise to the summit of the MRF Tyres rankings 📈https://t.co/heNbOrq0km
— ICC (@ICC) January 20, 2022
ಇದನ್ನೂ ಓದಿ: ಈ ಕಾರಣದಿಂದಲೇ ಕೆಎಲ್ ರಾಹುಲ್ ಟೀಂ ಇಂಡಿಯಾ ಮುಂದಿನ ನಾಯಕನಾಗುವುದು ಕಷ್ಟ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.