ಸಂಗೀತ ಕುರ್ಚಿಯಂತಾದ ಪಾಕ್ ಕ್ರಿಕೆಟ್ ಮಂಡಳಿ! ಶಾಹಿನ್ ಕೈಬಿಟ್ಟು ಮತ್ತೆ ಬಾಬರ್’ಗೆ ನಾಯಕತ್ವ ಹಸ್ತಾಂತರ

Babar Azam: ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಕದಿನ ಮತ್ತು ಟಿ 20 ಮಾದರಿಗಳಲ್ಲಿ ಬಾಬರ್ ಅಜಮ್ ಅವರನ್ನು ನಾಯಕರನ್ನಾಗಿ ಮಾಡಲು ಶಿಫಾರಸು ಮಾಡಿತ್ತು.

Written by - Bhavishya Shetty | Last Updated : Mar 31, 2024, 06:03 PM IST
    • ಬಾಬರ್ ಅಜಮ್ ಏಕದಿನ ಮತ್ತು ಟಿ20 ಮಾದರಿಯಲ್ಲಿ ತಂಡದ ನಾಯಕರಾಗಿದ್ದಾರೆ
    • ಎಲ್ಲಾ ಮೂರು ಸ್ವರೂಪಗಳ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ಬಾಬರ್ ಅಜಮ್
    • ಭಾನುವಾರ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದೆ
ಸಂಗೀತ ಕುರ್ಚಿಯಂತಾದ ಪಾಕ್ ಕ್ರಿಕೆಟ್ ಮಂಡಳಿ! ಶಾಹಿನ್ ಕೈಬಿಟ್ಟು ಮತ್ತೆ ಬಾಬರ್’ಗೆ ನಾಯಕತ್ವ ಹಸ್ತಾಂತರ title=
Babar Azam

Babar Azam: ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ಬದಲಾವಣೆ ಕಂಡುಬಂದಿದೆ. ಬಾಬರ್ ಅಜಮ್ ಮತ್ತೊಮ್ಮೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ತಂಡದ ನಾಯಕರಾಗಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ: ಮನೆಯ ಸುತ್ತ ಈ ಎಣ್ಣೆ ಚೆಲ್ಲಿದರೆ ಒಂದೇ ಒಂದು ಹಾವು ಕೂಡ ಅತ್ತಕಡೆ ಸುಳಿಯಲ್ಲ!

ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಕದಿನ ಮತ್ತು ಟಿ 20 ಮಾದರಿಗಳಲ್ಲಿ ಬಾಬರ್ ಅಜಮ್ ಅವರನ್ನು ನಾಯಕರನ್ನಾಗಿ ಮಾಡಲು ಶಿಫಾರಸು ಮಾಡಿತ್ತು.

2023 ರ ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನದ ನಂತರ ಬಾಬರ್ ಆಜಮ್ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವವನ್ನು ತೊರೆಯಬೇಕಾಯಿತು. ಏಕದಿನ, ಟೆಸ್ಟ್ ಮತ್ತು ಟಿ20 ಅಂತರಾಷ್ಟ್ರೀಯ ಎಲ್ಲಾ ಮೂರು ಸ್ವರೂಪಗಳ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಟೀಂ ಇಂಡಿಯಾ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮೊಬೈಲ್ ನಂಬರ್ ಬಹಿರಂಗ..!? ಹೀಗಿದೆ ಸಂಪರ್ಕ ಸಂಖ್ಯೆ

ಬಾಬರ್ ಅಜಮ್ ರಾಜೀನಾಮೆಯ ನಂತರ, ಶಾಹೀನ್ ಶಾ ಆಫ್ರಿದಿಯನ್ನು ಟಿ 20 ಮತ್ತು ಶಾನ್ ಮಸೂದ್‌ ಟೆಸ್ಟ್ ನಾಯಕರನ್ನಾಗಿ ಮಾಡಲಾಯಿತು. ಆದರೆ ಪಾಕಿಸ್ತಾನ ಕ್ರಿಕೆಟ್ ತಂಡದ ಭವಿಷ್ಯ ಬದಲಾಗಲೇ ಇಲ್ಲ. ಇದೀಗ ಕಳಪೆ ಪ್ರದರ್ಶನದಿಂದಾಗಿ ಶಾಹೀನ್ ಶಾ ಆಫ್ರಿದಿ ಟಿ20 ನಾಯಕತ್ವ ಕಳೆದುಕೊಂಡಿದ್ದಾರೆ. ಇದೀಗ ಬಾಬರ್ ಆಜಂಗೆ ಮತ್ತೊಮ್ಮೆ ನಾಯಕತ್ವದ ಅವಕಾಶ ಸಿಕ್ಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News