Babar Azam slaps Haris Rauf : ಪಾಕಿಸ್ತಾನ ಕ್ರಿಕೆಟ್ ತಂಡವು ತಮ್ಮ ICC ಕ್ರಿಕೆಟ್ ODI ವಿಶ್ವಕಪ್ 2023 ರ ಮೊದಲ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ 81 ರನ್‌ಗಳ ಜಯದೊಂದಿಗೆ ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ODI ವಿಶ್ವಕಪ್ 2023 ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. 


COMMERCIAL BREAK
SCROLL TO CONTINUE READING

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ, ಮುಹಮ್ಮದ್ ರಿಜ್ವಾನ್ ಮತ್ತು ಸೌದ್ ಶಕೀಲ್ ಅವರ ಅಮೂಲ್ಯ ಕೊಡುಗೆಯ ಹಿನ್ನೆಲೆಯಲ್ಲಿ ಒಟ್ಟು 286 ರನ್ ಗಳಿಸಿತು. ಪ್ರಧಾನ ವೇಗಿ ಹ್ಯಾರಿಸ್ ರೌಫ್ ನೇತೃತ್ವದ ಪಾಕಿಸ್ತಾನ ಬೌಲಿಂಗ್ ದಾಳಿಯು ಡಚ್ ತಂಡವನ್ನು 205 ರನ್‌ಗಳಿಗೆ ಆಲೌಟ್ ಮಾಡಿತು. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಎರಡೂ ODI ವಿಶ್ವಕಪ್ ಅಭ್ಯಾಸ ಪಂದ್ಯಗಳಲ್ಲಿ ಸೋತ ಪಾಕಿಸ್ತಾನಕ್ಕೆ ಈ ಗೆಲುವು ಹೆಚ್ಚು ಅಗತ್ಯವಾಗಿತ್ತು. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿರುವ ಪಾಕಿಸ್ತಾನದ ಈ ಗೆಲುವು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ.


 


ಶುಭ್ಮನ್ ಗಿಲ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಕೋಚ್ ರಾಹುಲ್! ಆಸೀಸ್ ವಿರುದ್ಧ ಕಣಕ್ಕಿಳಿತಾರಾ ‘ಪ್ರಿನ್ಸ್’? 


ಶುಕ್ರವಾರ (ಅಕ್ಟೋಬರ್ 6) ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ನಡುವಿನ ODI ವಿಶ್ವಕಪ್ 2023 ಪಂದ್ಯದ ವೇಳೆ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ವೇಗದ ಬೌಲರ್ ಹ್ಯಾರಿಸ್ ರೌಫ್ ಅವರ ಕಪಾಳಕ್ಕೆ ತಮಾಷೆಯಾಗಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಹ್ಯಾರಿಸ್ ರೌಫ್ ಬೌಲಿಂಗ್ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.


ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯದ ವೇಳೆ ಬಾಬರ್ ಅಜಮ್ ಹ್ಯಾರಿಸ್ ರೌಫ್ ಅವರನ್ನು ತಮಾಷೆಯಾಗಿ ಕಪಾಳಮೋಕ್ಷ ಮಾಡಿದ ವೀಡಿಯೊ ವೈರಲ್‌ ಆಗಿದೆ. 


ಇದನ್ನೂ ಓದಿ : World Cup 2023: ನೆದರ್ಲ್ಯಾಂಡ್ ವಿರುದ್ಧ ಗೆದ್ದು ಬೀಗಿದ ಪಾಕ್: 81 ರನ್’ಗಳ ರೋಚಕ ಜಯ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.