Mushfiqur Rahim retirement: ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ನಂತರ, ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳುವ ಆಟಗಾರರ ಪಟ್ಟಿಗೆ ಮತ್ತೊಂದು ದೊಡ್ಡ ಹೆಸರು ಸೇರ್ಪಡೆಯಾಗಿದೆ. ಸೆಮಿಫೈನಲ್ ಸೋಲಿನ ನಂತರ, ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಏಕದಿನ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದರು. ಈಗ ಬಾಂಗ್ಲಾದೇಶದ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಕೂಡ ಏಕದಿನ ಪಂದ್ಯಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಹಣ್ಣುಗಳನ್ನು ತಿಂದ ತಕ್ಷಣ ನೀವು ಮಾಡುವ ಈ ತಪ್ಪು ಮಧುಮೇಹಕ್ಕೆ ಕಾರಣವಾಗುತ್ತದೆ..! ಎಚ್ಚರವಾಗಿರಿ
ಸಾಮಾಜಿಕ ಮಾಧ್ಯಮ ವೇದಿಕೆಯಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮುಷ್ಫಿಕರ್, "ಬಾಂಗ್ಲಾದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೀಮಿತ ಸಾಧನೆಗಳನ್ನು ಹೊಂದಿರಬಹುದು. ಆದರೆ ಶೇ. 100 ಕ್ಕಿಂತ ಹೆಚ್ಚು ನೀಡಿದ್ದಾರೆ" ಎಂದು ಹೇಳಿದ್ದಾರೆ. "ನಾನು ಇಂದಿನಿಂದ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಎಲ್ಲದಕ್ಕೂ ದೇವರಿಗೆ ಧನ್ಯವಾದಗಳು. ಜಾಗತಿಕ ವೇದಿಕೆಯಲ್ಲಿ ನಮ್ಮ ಸಾಧನೆಗಳು ಸೀಮಿತವಾಗಿರಬಹುದು. ಆದರೆ ಒಂದು ವಿಷಯ ಖಚಿತ, ನಾನು ನನ್ನ ದೇಶಕ್ಕಾಗಿ ಮೈದಾನಕ್ಕೆ ಕಾಲಿಟ್ಟಾಗಲೆಲ್ಲಾ, ನಾನು 100 ಪ್ರತಿಶತಕ್ಕಿಂತ ಹೆಚ್ಚು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ನೀಡಿದ್ದೇನೆ" ಎಂದಿದ್ದಾರೆ.
"ಕಳೆದ ಕೆಲವು ವಾರಗಳು ನನಗೆ ತುಂಬಾ ಸವಾಲಿನದ್ದಾಗಿವೆ, ಮತ್ತು ಇದು ನನ್ನ ಹಣೆಬರಹ ಎಂದು ನಾನು ಅರಿತುಕೊಂಡಿದ್ದೇನೆ. ಕೊನೆಯದಾಗಿ, ಕಳೆದ 19 ವರ್ಷಗಳಿಂದ ನಾನು ಕ್ರಿಕೆಟ್ ಆಡುತ್ತಿದ್ದು ಇದಕ್ಕೆ ಬೆಂಬಲ ಸೂಚಿಸಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ" ಎಂದಿದ್ದಾರೆ.
ಇದನ್ನೂ ಓದಿ: ಏಕಾಏಕಿ ಚಿನ್ನದ ಬೆಲೆಯಲ್ಲಿ ಗಣನೀಯ ಬದಲಾವಣೆ! ಖರೀದಿಗೂ ಮೊದಲು 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ ತಿಳಿದುಕೊಳ್ಳಿ..
ಬಾಂಗ್ಲಾದೇಶದ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 274 ಪಂದ್ಯಗಳಲ್ಲಿ 7795 ರನ್ ಗಳಿಸಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮುಷ್ಫಿಕರ್ ನಿವೃತ್ತರಾದರು. ಇದರಲ್ಲಿ 9 ಶತಕಗಳು ಮತ್ತು 49 ಅರ್ಧಶತಕಗಳು ಸೇರಿವೆ. ಅಷ್ಟೇ ಅಲ್ಲದೆ, 243 ಕ್ಯಾಚ್‌ಗಳು ಮತ್ತು 56 ಸ್ಟಂಪಿಂಗ್‌ಗಳನ್ನು ಸಹ ಹೊಂದಿದ್ದಾರೆ. ಮುಷ್ಫಿಕರ್ 2006 ರಲ್ಲಿ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಅದೇ ವರ್ಷ, ಅವರು ಅಂಡರ್-19 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ನಾಯಕತ್ವ ವಹಿಸಿಕೊಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ









