IND vs AUS: 2ನೇ ಏಕದಿನದಲ್ಲಿ ಬ್ಯಾಟಿಂಗ್ ವೈಫಲ್ಯ: ಆಸೀಸ್ ವಿರುದ್ಧ ಹೀನಾಯ ಸೋಲುಂಡ ಟೀಂ ಇಂಡಿಯಾ!
India vs Australia 2nd ODI Match: ವಿಶಾಖಪಟ್ಟಣದಲ್ಲಿ ಇಂದು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಈ ಪಂದ್ಯದಲ್ಲಿ ಆಸೀಸ್ ಆಟಗಾರ ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಕಳಪೆಯಾಗಿತ್ತು.
India vs Australia 2nd ODI Match: ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಐದು ವಿಕೆಟ್‌ಗಳ ಜಯ ಸಾಧಿಸಿತ್ತು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.
ಇದನ್ನೂ ಓದಿ: March 22 ವಿಕ್ರಮ ಸಂವತ್ಸರ 2080 ಆರಂಭ 4 ರಾಶಿಗಳ ಜನರ ಬ್ಯಾಂಕ್ ಬ್ಯಾಲೆನ್ಸ್ ಅಪಾರ ಹೆಚ್ಚಿಸಲಿದೆ!
ಈ ಪಂದ್ಯದಲ್ಲಿ ಆಸೀಸ್ ಆಟಗಾರ ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಒಟ್ಟಾರೆಯಾಗಿ ಅವರ ಬಿರುಸಿನ ಬ್ಯಾಟಿಂಗ್’ನಲ್ಲಿಯೇ 36 ಎಸೆತಗಳಲ್ಲಿ 66 ರನ್ ಗಳಿಸಿದ್ದಾರೆ. ಇನ್ನು ಒಂದೇ ಒಂದು ವಿಕೆಟ್ ನಷ್ಟವಿಲ್ಲದೆ ಆಸ್ಟ್ರೇಲಿಯಾ 11 ಓವರ್’ಗೆ 121 ರನ್ ಗಳಿಸಿ ಪಂದ್ಯ ಗೆದ್ದುಕೊಂಡಿದೆ.
ಟೀಮ್ ಇಂಡಿಯಾದ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿತ್ತು. ಆರಂಭಿಕ ಇಶಾನ್ ಕಿಶನ್ ಸ್ಥಾನವನ್ನು ರೋಹಿತ್ ಪಡೆದಿದ್ದು, ಶಾರ್ದೂಲ್ ಠಾಕೂರ್ ಅವರನ್ನು ಕೈಬಿಟ್ಟು ಅಕ್ಷರ್ ಪಟೇಲ್ ಅವರಿಗೆ ಅವಕಾಶ ನೀಡಲಾಗಿತ್ತು.
ಟಾಸ್ ಗೆದ್ದ ಬಳಿಕ ಆಸೀಸ್ ಹಂಗಾಮಿ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡಲು ಭಾರತವನ್ನು ಆಹ್ವಾನಿಸಿದರು. ಆದರೆ 49 ರನ್ ಕಲೆ ಹಾಕುವಷ್ಟರಲ್ಲಿ ಟೀಂ ಇಂಡಿಯಾದ ಅರ್ಧದಷ್ಟು ಬ್ಯಾಟ್ಸ್ ಮನ್’ಗಳು ಪೆವಿಲಿಯನ್ ಸೇರಿದ್ದರು. ಒಟ್ಟಾರೆ 26 ಓವರ್’ಗೆ ಎಲ್ಲಾ ವಿಕೆಟ್ ಕಳೆದಿಕೊಂಡ ಭಾರತ 117 ರನ್ ಗಳಿಸಿತ್ತು.
ಟೀಂ ಇಂಡಿಯಾದ 4 ಬ್ಯಾಟ್ಸ್‌ಮನ್‌ಗಳನ್ನು ಬಿಟ್ಟರೆ ಬೇರೆ ಯಾರೂ ಕೂಡ ಎರಡಂಕಿ ದಾಟಿರಲಿಲ್ಲ. ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಅಂದರೆ 35 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 31 ರನ್ ಗಳಿಸಿದರು. ಅಕ್ಷರ್ ಪಟೇಲ್ ಔಟಾಗದೆ 29 ರನ್ ಕಲೆ ಹಾಕಿದ್ದಾರೆ. ನಾಯಕ ರೋಹಿತ್ ಶರ್ಮಾ 13 ರನ್, ರವೀಂದ್ರ ಜಡೇಜಾ 39 ಎಸೆತಗಳಲ್ಲಿ 16 ರನ್ ಗಳಿಸಿದರು.
ಇದನ್ನೂ ಓದಿ: Ugadi 2023: ಈ ರಾಶಿಯವರ ಬಾಳಲ್ಲಿ ಅದೃಷ್ಟ ಹೊತ್ತು ಬರಲಿದೆ ಯುಗಾದಿ, ಮುಟ್ಟಿದ್ದೆಲ್ಲ ಚಿನ್ನವಾಗುವ ವರ್ಷ
ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯ ಪರ ಅತಿ ಹೆಚ್ಚು ಅಂದರೆ 5 ವಿಕೆಟ್ ಪಡೆದರು. ಮಧ್ಯಮ ವೇಗಿ ಸೀನ್ ಅಬಾಟ್ 3 ವಿಕೆಟ್, ನಾಥನ್ ಎಲ್ಲಿಸ್ 2 ವಿಕೆಟ್ ಪಡೆದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.