ಕ್ರಿಕೆಟ್ ಫ್ಯಾನ್ಸ್ಗೆ ಸಿಹಿ ಸುದ್ದಿ: IPL ನೋಡಲು ಎಲ್ಲರಿಗೂ ಎಂಟ್ರಿ
ಐಪಿಎಲ್‌ನ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳನ್ನು ವೀಕ್ಷಿಸಲು ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ 15ನೇ ಆವೃತ್ತಿಯು ಯಶಸ್ವಿಯಾಗಿ ನಡೆಯುತ್ತಿದೆ. ಮೇ 27 ಮತ್ತು 29ರಂದು ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಪಂದ್ಯವನ್ನು ಪೂರ್ಣ ಸಾಮಾರ್ಥ್ಯದ ಪ್ರೇಕ್ಷಕರೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: LSG vs MI: ಇಂದು ಲಕ್ನೋ-ಮುಂಬೈ ಮುಖಾಮುಖಿ... ಇಲ್ಲಿದೆ ಪಿಚ್ ರಿಪೋರ್ಟ್
ಐಪಿಎಲ್‌ನ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳನ್ನು ವೀಕ್ಷಿಸಲು ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೊದಲ ಪ್ಲೇ ಆಫ್ ಮತ್ತು ಎಲಿಮಿನೇಟರ್ ಪಂದ್ಯಗಳು ಮೇ 24 ಮತ್ತು 26ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಆ ಬಳಿಕ ಎರಡನೇ ಪ್ಲೇ ಆಫ್ ಮತ್ತು ಫೈನಲ್ ಪಂದ್ಯಗಳು ಮೇ 27 ಮತ್ತು 29ರಂದು ಅಹಮದಾಬಾದ್‌ನಲ್ಲಿ ನಡೆಯಲಿವೆ ಎಂದು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಹಿಂದೆ ಕೊರೊನಾ ಮುಂಜಾಗೃತಾ ಕ್ರಮವಾಗಿ ಐಪಿಎಲ್ ವೀಕ್ಷಣೆಗೆ ಪೂರ್ಣ ಪ್ರಮಾಣದ ಅವಕಾಶ ನೀಡಿರಲಿಲ್ಲ. ಕೇವಲ ಶೇ. 25 ರಿಂದ 50ರಷ್ಟು ಪ್ರಮಾಣದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆದೇಶವನ್ನು ರದ್ದುಗೊಳಿಸಲಾಗಿದ್ದು, ಪೂರ್ಣ ಪ್ರಮಾಣದ ಸಾಮಾರ್ಥ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ. ಈ ವರದಿಯು ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಇದನ್ನು ಓದಿ: 49ನೇ ವಸಂತಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್: ‘ಗಾಡ್ ಆಫ್ ಕ್ರಿಕೆಟ್’ಗೆ ಶುಭಾಶಯಗಳ ಮಹಾಪೂರ
ಇಂದು ಲಕ್ನೋ-ಮುಂಬೈ ಮುಖಾಮುಖಿ:
ಇಂದು ಐಪಿಎಲ್‌ನ 37ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯವನ್ನಾಡಲಿದೆ. ಈ ಆಟ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಕಳೆದ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಇದೀಗ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.