Champions Trophy 2025: ಭಾರತೀಯ ಕ್ರಿಕೆಟ್ ನಲ್ಲಿ ಭಾರೀ ಬದಲಾವಣೆಗಳು ಆಗುವ ಅವಕಾಶಗಳಿವೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯಗಳಿಗೆ ವಿದಾಯ ಹೇಳಲಿದ್ದಾರೆ ಎಂಬ ಪ್ರಚಾರ ಜೋರಾಗಿ ನಡೆಯುತ್ತಿದೆ. ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಈ ಇಬ್ಬರು ಸ್ಟಾರ್ ಆಟಗಾರರು ಗೌರವಯುತವಾಗಿ ನಿವೃತ್ತಿಯಾಗಲಿ ಎಂದು ಅಭಿಮಾನಿಗಳು ಸಲಹೆ ನೀಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಶುಕ್ರವಾರದಿಂದ ಸಿಡ್ನಿಯಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಇನ್ನೂ, ಈ ಕುರಿತು ಮಾತನಾಡಿದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ರೋಹಿತ್‌ ತಂಡದ ಹಿತದೃಷ್ಟಿಯಿಂದ ಸ್ವಯಂಪ್ರೇರಣೆಯಿಂದ ಪಂದ್ಯದಿಂದ ನಿರ್ಗಮಿಸಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ಇದರ ಬೆನ್ನಲ್ಲೆ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಿಂದಲೂ ಕೂಡ ದೂರ ಉಳಿಯುತ್ತಾರೆ ಎಂಬ ಪ್ರಚಾರವೂ ಮುನ್ನೆಲೆಗೆ ಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರೋಹಿತ್ ಶರ್ಮಾ ಅವರನ್ನು ಏಕದಿನ ನಾಯಕತ್ವದಿಂದ ವಜಾಗೊಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ನೂತನ ನಾಯಕರನ್ನಾಗಿ ನೇಮಿಸಲು ನಿರ್ಧರಿಸಿದೆ ಎಂಬ ವರದಿಗಳಿವೆ ಇದೀಗ ಕೇಳಿ ಬರುತ್ತಿದೆ.


ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ವಾದಗಳು ಸದ್ಯ ಕೇಳಿ ಬರುತ್ತಿದ್ದು, ಒಂದು ವೇಳೆ ಇದು ನಿಜವೇ ಆದರೆ, ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಬೇಕಾಗುತ್ತದೆ. ಹೀಗಾದರೆ, ಒಂದು ವೇಳೆ ಇದೇ ವೇಳೆ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಬೇಕಾಗುತ್ತದೆ. T20 ವಿಶ್ವಕಪ್ 2024 ಗೆದ್ದ ನಂತರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ T20 ಗೆ ವಿದಾಯ ಹೇಳಿದರು. ಬಿಸಿಸಿಐ ಏಕದಿನ ನಾಯಕತ್ವ ಬದಲಾವಣೆ ನಿರ್ಧಾರ ಪ್ರಕಟಿಸಿದರೆ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವ ಅವಕಾಶವಿದೆ.


ಇನ್ನೂ, ಟಿ 20 ಕ್ರಿಕೆಟ್‌ಗೆ ಸೂರ್ಯಕುಮಾರ್‌ ಯಾದವ್‌ ಅವರು ತಂಡದ ಕ್ಯಾಪ್ಟನ್‌ ಆಗಿ ಮುಂದುವರೆದಿದ್ದು,ಇವರ ನಾಯಕತ್ವದಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. ಟೆಸ್ಟ್‌ನಲ್ಲೆ ಸದು ಜಸ್ಪ್ರಿತ್‌ ಬೂಮ್ರಾ ಅವರು ಹಂಗಾಮಿ ನಾಯರಾಗಿ ಮುಂದು ವರೆಯುತ್ತಿದ್ದಾರೆ. ಈಗ ಮುಂಬರುವ ಚಾಂಪಿಯನ್ಸ್‌ ಟ್ರೋಫಿಗೆ ಹಾರ್ದಿಕ್‌ ಪಾಂಡ್ಯ ಅವರು ನಾಯಕತ್ವ ವಹಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿದ್ದು. ಇದರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು ಎಂಬುದಮನ್ನು ಇನ್ನು ಮುಂದಷ್ಟೆ ಕಾದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.