Ex-CSK skipper MS Dhoni in trouble?: ಭಾರತ ತಂಡದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕೋಟಿ ಕೋಟಿ ವಂಚಿಸಿದ ಆರೋಪದಡಿ ಧೋನಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು, ಕ್ರಿಕೆಟ್ ಅಕಾಡೆಮಿ ನಿರ್ವಹಿಸುವ ವಿಚಾರದಲ್ಲಿ ಧೋನಿ ತಮಗೆ 15 ಕೋಟಿ ರೂ. ವಂಚಿಸಿದ್ದಾರೆಂದು ಉತ್ತರ ಪ್ರದೇಶದ ಅಮೇಥಿಯ ರಾಜೇಶ್ ಕುಮಾರ್ ಮೌರ್ಯ ಎಂಬುವವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI)ಗೆ ದೂರು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ದೂರಿನ ಮೇರೆಗೆ ಬಿಸಿಸಿಐ ಎಥಿಕ್ಸ್ ಕಮಿಟಿ ನಿಯಮ 36ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆಗಸ್ಟ್ 30ರೊಳಗೆ ಈ ಬಗ್ಗೆ ವಿವರಣೆ ನೀಡುವಂತೆ ಧೋನಿಗೆ ಸೂಚನೆ ನೀಡಿದ್ದಾರೆ. 2021ರಲ್ಲಿ ಧೋನಿ ಹೆಸರಿನಲ್ಲಿ ಕ್ರಿಕೆಟ್ ಅಕಾಡೆಮಿ ನಡೆಸಲು ಒಪ್ಪಂದಕ್ಕೆ ಸಹಿ ಹಾಕಿದೆ. ನಂತರ ಈ ಒಪ್ಪಂದದ ಬಗ್ಗೆ ವಿವಾದಗಳು ಹುಟ್ಟಿಕೊಂಡಿದ್ದವು. ಒಪ್ಪಂದದ ಪ್ರಕಾರ ಆರ್ಕಾ ಕಂಪನಿ ತನಗೆ ನೀಡಬೇಕಾದ ಮೊತ್ತವನ್ನು ಪಾವತಿಸಿಲ್ಲವೆಂದು ಧೋನಿ ನ್ಯಾಯಾಲಯದ ಮೆಟ್ಟಿಲೇರಿದ್ದರು.


ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಆಫರ್‌ ಬೇಡವೆಂದು ತಿರಸ್ಕರಿಸಿದ ಪ್ಯಾರಿಸ್ ಒಲಿಂಪಿಕ್ ಪದಕ ವಿಜೇತ ಸರಬ್ಜೋತ್ ಸಿಂಗ್! ಕೊಟ್ಟ ಕಾರಣ ಇದು


ಆ ಸಂಸ್ಥೆ ತಮಗೆ ಸುಮಾರು ₹15 ಕೋಟಿ ವಂಚನೆ ಮಾಡಿದೆ ಎಂದು ಅರ್ಕಾ ಸ್ಪೋರ್ಟ್ಸ್ ಕಂಪನಿ ಮಾಲೀಕ ಮಿಹಿರ್ ದಿವಾಕರ್, ವ್ಯವಹಾರ ನಡೆಸುತ್ತಿದ್ದ ಸೌಮ್ಯ ದಾಸ್ ಮತ್ತು ಅರ್ಕಾ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ವಂಚನೆ ಆರೋಪ ಮಾಡಲಾಗಿತ್ತು. 


ರಾಂಚಿ ಸಿವಿಲ್ ಕೋರ್ಟ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಅದೇ ಸಂಸ್ಥೆಗೆ ಸೇರಿದ ರಾಜೇಶ್ ಕುಮಾರ್ ತಮಗೆ ಧೋನಿ ಮೋಸ ಮಾಡಿದ್ದಾರೆ ಅಂತಾ ಬಿಸಿಸಿಐಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ಹಾರ್ದಿಕ್‌ ಪಾಂಡ್ಯ ಇನ್ನೊಂದು ಪಂದ್ಯ ಆಡಿದ್ರೆ ಸಾಕು ಗಂಗೂಲಿಯ ಈ ವಿಶ್ವದಾಖಲೆ ಉಡೀಸ್...!‌ ಕೊಹ್ಲಿಯೂ ಮುಟ್ಟದ ಅಸಾಮಾನ್ಯ ರೆಕಾರ್ಡ್‌ ಅದು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.