India vs Australia 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ವಿರಾಮದ ಬಳಿಕ ತಂಡಕ್ಕೆ ವಾಪಸಾಗುತ್ತಿದ್ದಾರೆ. ಈ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಯಾವ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಬಿಸಿಸಿಐ ಅಧಿಕಾರಿಯೊಬ್ಬರು ದೊಡ್ಡ ಹೇಳಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs AUS: ಟೆಸ್ಟ್ ಸರಣಿಗೂ ಮುನ್ನ ಲಂಕಾ ಆಟಗಾರ ನೀಡಿದ ಈ ಹೇಳಿಕೆಗೆ ಉರಿದು ಕೆಂಡವಾದ ಟೀಂ ಇಂಡಿಯಾ ಫ್ಯಾನ್ಸ್!


ಕೆಎಲ್ ರಾಹುಲ್ ಬಗ್ಗೆ ಬಿಗ್ ಅಪ್ಡೇಟ್:


ಕೆಲ ಸಮಯದಿಂದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಕೂಡ ಅತ್ಯುತ್ತಮ ಫಾರ್ಮ್‌ನಲ್ಲಿ ಓಡುತ್ತಿರುವುದರಿಂದ ಅವರು ಇನ್ನಿಂಗ್ಸ್ ಆರಂಭಿಸಬಹುದು ಎಂಬ ಮಾತು ಕೇಳಿಬರುತ್ತಿದೆ. ಇದರ ಜೊತೆಗೆ ಈ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡಬಹುದು ಎಂದು ಅನೇಕ ಅನುಭವಿಗಳು ಹೇಳಿದ್ದಾರೆ. ಆದರೆ ಈ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಪಡೆಯುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗ ಅವರು ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆಯುವುದು ಕಷ್ಟಕರವಾಗಿದೆ.


ಇನ್‌ಸೈಡ್ ಸ್ಪೋರ್ಟ್ಸ್‌ನಲ್ಲಿ ಬಿಸಿಸಿಐ ಅಧಿಕಾರಿಯೊಬ್ಬರು, 'ಕೆಎಲ್ ರಾಹುಲ್ ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಗಾಯಗಳಿಂದ ಬಳಲುತ್ತಿದ್ದಾರೆ. ಟೆಸ್ಟ್‌ನಲ್ಲಿ ಅವರಿಗೆ ವಿಕೆಟ್ ಕೀಪಿಂಗ್ ಸರಿಯಾಗಿಲ್ಲದಿರಬಹುದು. ಟೆಸ್ಟ್ ಕ್ರಿಕೆಟ್‌ಗೆ ಸ್ಪೆಷಲಿಸ್ಟ್ ವಿಕೆಟ್‌ಕೀಪರ್ ಅಗತ್ಯವಿದೆ. ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ತಂಡದಲ್ಲಿರುವ ಇಬ್ಬರು ಸ್ಪೆಷಲಿಸ್ಟ್ ವಿಕೆಟ್ ಕೀಪರ್ ಗಳು. ಅವರು ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ತಂಡದ ಆಡಳಿತದ ಕೆಲಸ” ಎಂದು ಹೇಳಿದ್ದಾರೆ.


ಕೆಎಲ್ ರಾಹುಲ್ ಟೀಂ ಇಂಡಿಯಾ ಪರ ಇದುವರೆಗೆ 45 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ಪಂದ್ಯಗಳಲ್ಲಿ ಕೆಎಲ್ ರಾಹುಲ್ 34.26ರ ಸರಾಸರಿಯಲ್ಲಿ 2604 ರನ್ ಗಳಿಸಿದ್ದಾರೆ. ಈ ವೇಳೆ ಕೆಎಲ್ ರಾಹುಲ್ ಬ್ಯಾಟ್‌ನಿಂದ 13 ಅರ್ಧ ಶತಕ ಹಾಗೂ 7 ಶತಕ ಸಿಡಿಸಿದ್ದಾರೆ. ಕೆಎಲ್ ರಾಹುಲ್ ಟೀಂ ಇಂಡಿಯಾ ಪರ 51 ಏಕದಿನ ಹಾಗೂ 72 ಟಿ20 ಪಂದ್ಯಗಳನ್ನು ಆಡಿದ್ದಾರೆ.


ಇದನ್ನೂ ಓದಿ: IND vs AUS : ಆಸ್ಟ್ರೇಲಿಯಾ ಸರಣಿ ಸೋತರೆ ರೋಹಿತ್ ಕೈ ತಪ್ಪುತ್ತಾ ಟೀಂ ಇಂಡಿಯಾ ನಾಯಕತ್ವ? 


ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ತಂಡ:


ರೋಹಿತ್ ಶರ್ಮಾ (c), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (WK), ಇಶಾನ್ ಕಿಶನ್ (WK), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.