IND vs ENG: ಆಂಗ್ಲರ ವಿರುದ್ಧದ 5ನೇ ಟೆಸ್ಟ್’ಗೆ ಭಾರತ ತಂಡ ಪ್ರಕಟ: ಜಸ್ಪ್ರೀತ್ ಬುಮ್ರಾ ಕಂಬ್ಯಾಕ್… ರಾಹುಲ್ ಔಟ್
IND vs ENG 5th Test: ನಾಲ್ಕನೇ ಟೆಸ್ಟ್ನಲ್ಲಿ, ಕೆಲಸದ ಹೊರೆ ನಿರ್ವಹಣೆಯಿಂದಾಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ವೇಗದ ಬೌಲರ್ ಆಕಾಶ್ ದೀಪ್ ಅವರ ಸ್ಥಾನಕ್ಕೆ ಪದಾರ್ಪಣೆ ಮಾಡಿದರು. ಇದೀಗ ಕೊನೆಯ ಟೆಸ್ಟ್’ಗೆ ಬುಮ್ರಾ ಸೇರಿಕೊಳ್ಳಲಿದ್ದಾರೆ.
IND vs ENG 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್’ಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಕೊನೆಯ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನೊಂದೆಡೆ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಂಬ್ಯಾಕ್ ಮಾಡಲು ಸಿದ್ಧರಾಗಿದ್ದಾರೆ.
ನಾಲ್ಕನೇ ಟೆಸ್ಟ್ನಲ್ಲಿ, ಕೆಲಸದ ಹೊರೆ ನಿರ್ವಹಣೆಯಿಂದಾಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ವೇಗದ ಬೌಲರ್ ಆಕಾಶ್ ದೀಪ್ ಅವರ ಸ್ಥಾನಕ್ಕೆ ಪದಾರ್ಪಣೆ ಮಾಡಿದರು. ಇದೀಗ ಕೊನೆಯ ಟೆಸ್ಟ್’ಗೆ ಬುಮ್ರಾ ಸೇರಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ 1.5 ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಆಡಿದ್ದು ಕೇವಲ ಒಂದೇ ಒಂದು ಪಂದ್ಯ. ಮೊದಲ ಟೆಸ್ಟ್’ನಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ್ದ ಅವರು, ಆ ಬಳಿಕ ಗಾಯದ ಕಾರಣದಿಂದ ಉಳಿದ ಟೆಸ್ಟ್ಗಳಿಂದ ಹೊರಗುಳಿದಿದ್ದರು. ಆದರೆ, ಮೂರನೇ ಟೆಸ್ಟ್’ಗೂ ಮುನ್ನ ಅವರು ಶೇ.90ರಷ್ಟು ಫಿಟ್ ಆಗಿದ್ದರು ಎಂದು ವರದಿಗಳು ತಿಳಿಸಿದ್ದವು. ಆದರೆ ಲಂಡನ್ನಲ್ಲಿ ತಜ್ಞರ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಅವರಲ್ಲದೆ, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬಗ್ಗೆಯೂ ಬಿಸಿಸಿಐ ಅಪ್ಡೇಟ್ ನೀಡಿದೆ. “ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಮಾರ್ಚ್ 2, 2024 ರಿಂದ ಪ್ರಾರಂಭವಾಗುವ ಮುಂಬೈ ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕಾಗಿ ಅವರು ತಮ್ಮ ರಣಜಿ ತಂಡ ತಮಿಳುನಾಡು ಸೇರಿಕೊಳ್ಳುತ್ತಾರೆ. ಅಗತ್ಯವಿದ್ದರೆ, ತವರಿನ ಪಂದ್ಯಗಳು ಮುಗಿದ ನಂತರ ಅವರು ಐದನೇ ಟೆಸ್ಟ್ಗೆ ಭಾರತ ತಂಡವನ್ನು ಸೇರಿಕೊಳ್ಳುತ್ತಾರೆ” ಎಂದಿದೆ.
ಇದನ್ನೂ ಓದಿ: ಸುರೇಶ್ ರೈನಾ ಮಗನಿಗೆ ಈ ಕ್ರಿಕೆಟಿಗನೆಂದರೆ ಪಂಚಪ್ರಾಣ… ಅಪ್ಪ ದಿಗ್ಗಜನಾದ್ರೂ ಮಗನಿಗೆ ಇವರೇ ಫೇವರೇಟ್!
5ನೇ ಟೆಸ್ಟ್’ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಕುಲದೀಪ್ ಯಾದವ್. , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.