ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಗೆ 1 ಕೋಟಿ ರೂ, ನೆರವು ನೀಡಲು ಮುಂದಾದ ಬಿಸಿಸಿಐ
ಲಂಡನ್‌ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಕ್ರಿಕೆಟಿಗ ಮತ್ತು ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿ ಬಿಡುಗಡೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.
ನವದೆಹಲಿ: ಲಂಡನ್‌ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಕ್ರಿಕೆಟಿಗ ಮತ್ತು ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿ ಬಿಡುಗಡೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.
ಗಾಯಕ್‌ವಾಡ್‌ಗೆ ಸಹಾಯ ಮಾಡುವಂತೆ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದ್ದ ಮಾಜಿ ನಾಯಕ ಕಪಿಲ್ ದೇವ್ ಮತ್ತು ಸಂದೀಪ್ ಪಾಟೀಲ್ ಅವರ ಭಾವನಾತ್ಮಕ ಮನವಿಯ ನಂತರ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.ಅಂಶುಮಾನ್ ಗಾಯಕ್ವಾಡ್ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ದೇಶದ ಕ್ರಿಕೆಟ್ ಮಂಡಳಿಗೆ ಸೂಚಿಸಿದ್ದಾರೆ. 71 ವರ್ಷದ ಗಾಯಕ್ವಾಡ್ ಕಳೆದ ವರ್ಷದಿಂದ ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗ ಈ ಕುರಿತಾಗಿ ಹೇಳಿಕೆ ನೀಡಿರುವ ಬಿಸಿಸಿಐ 'ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್‌ವಾಡ್‌ಗೆ ಆರ್ಥಿಕ ನೆರವು ನೀಡಲು ತಕ್ಷಣವೇ 1 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗೆ (ಕಾರ್ಯದರ್ಶಿ) ಜಯ್ ಶಾ ಸೂಚಿಸಿದ್ದಾರೆ' ಎಂದು ಪ್ರಕಟನೆ ತಿಳಿಸಿದೆ.
ಇದನ್ನೂ ಓದಿ: ಅಂಬಾನಿ ಪುತ್ರನ ಮದ್ವೆಯಲ್ಲಿ ಟಕೀಲಾ ಏರಿಸಿ ಈ ನಟಿ ಜೊತೆ ಹಾರ್ದಿಕ್ ಪಾಂಡ್ಯ ಬಿಂದಾಸ್ ಡ್ಯಾನ್ಸ್!
ಭಾರತದ ಮಾಜಿ ನಾಯಕ ಡಿಕೆ ಗಾಯಕ್ವಾಡ್ ಅವರ ಪುತ್ರ ಅಂಶುಮಾನ್ ಗಾಯಕ್ವಾಡ್ ಅವರು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಿಸಿಸಿಐ ಹೇಳಿಕೆ ಪ್ರಕಾರ, 'ಷಾ ಗಾಯಕ್ವಾಡ್ ಅವರ ಕುಟುಂಬದೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದ್ದು ನೆರವನ್ನು ಘೋಷಿಸಲಾಗಿದೆ.ಈ ಬಿಕ್ಕಟ್ಟಿನ ಸಮಯದಲ್ಲಿ ಮಂಡಳಿಯು ಗಾಯಕ್‌ವಾಡ್ ಅವರ ಕುಟುಂಬದೊಂದಿಗೆ ಇದೆ ಮತ್ತು ಗಾಯಕ್ವಾಡ್ ಅವರ ಶೀಘ್ರ ಚೇತರಿಕೆಗೆ ಅಗತ್ಯವಿರುವ ಎಲ್ಲ ರೀತಿಯ ಪ್ರಯತ್ನವನ್ನೂ ಮಾಡುತ್ತದೆ.ಗಾಯಕ್ವಾಡ್ ಅವರ ಪ್ರಗತಿಯ ಮೇಲೆ ಬಿಸಿಸಿಐ ಕಣ್ಣಿಡಲಿದೆ ಮತ್ತು ಅವರು ಈ ಹಂತದಿಂದ ಬಲವಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಟೀಂ ಇಂಡಿಯಾದ ಮಾಜಿ ಕೋಚ್’ಗೆ ಕ್ಯಾನ್ಸರ್! 1 ಕೋಟಿ ರೂಪಾಯಿ ನೆರವು ಘೋಷಿಸಿದ BCCI
1983 ರ ವಿಶ್ವಕಪ್ ವಿಜೇತ ಭಾರತದ ನಾಯಕ ಕಪಿಲ್ ದೇವ್ ಅವರು ತಮ್ಮ ಮಾಜಿ ಸಹ ಆಟಗಾರ ಗಾಯಕ್ವಾಡ್ ಅವರಿಗೆ ಹಣಕಾಸಿನ ನೆರವು ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದರು. ಮೊಹಿಂದರ್ ಅಮರನಾಥ್, ಸುನಿಲ್ ಗವಾಸ್ಕರ್, ಸಂದೀಪ್ ಪಾಟೀಲ್, ದಿಲೀಪ್ ವೆಂಗ್‌ಸರ್ಕರ್, ಮದನ್ ಲಾಲ್, ರವಿಶಾಸ್ತ್ರಿ ಮತ್ತು ಕೀರ್ತಿ ಆಜಾದ್ ಅವರಂತಹ ಇತರ ಭಾರತೀಯ ದಿಗ್ಗಜರೊಂದಿಗೆ ತಮ್ಮ ತಂಡದ ಆಟಗಾರರಿಗಾಗಿ ಹಣವನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು. ಭಾರತದ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕ್ರಿಕೆಟಿಗನಿಗೆ ಹಣಕಾಸಿನ ನೆರವು ನೀಡುವಂತೆ ಬಿಸಿಸಿಐಗೆ ಕರೆ ನೀಡಿದ ಮೊದಲ ವ್ಯಕ್ತಿ.
71 ರ ಹರೆಯದ ಗಾಯಕ್‌ವಾಡ್ ಕಳೆದ ಒಂದು ವರ್ಷದಿಂದ ಲಂಡನ್‌ನ ಕಿಂಗ್ಸ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಿಡ್-ಡೇ ಅಂಕಣದಲ್ಲಿ ಪಾಟೀಲ್ ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಾಯಕ್ವಾಡ್ ಪಾಟೀಲ್ ಅವರಿಗೆ ಚಿಕಿತ್ಸೆ ಮುಂದುವರಿಸಲು ಹಣದ ತುರ್ತು ಅಗತ್ಯದ ಬಗ್ಗೆ ತಿಳಿಸಿದರು. ಗಾಯಕ್ವಾಡ್ 1975 ಮತ್ತು 1987 ರ ನಡುವೆ ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದರು ಮತ್ತು ನಂತರ ಎರಡು ಪ್ರತ್ಯೇಕ ಅವಧಿಗಳಲ್ಲಿ (1997-99 ಮತ್ತು 2000) ಭಾರತದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸಿದರು. ಅವರ ಕೋಚಿಂಗ್ ವೃತ್ತಿಜೀವನದ ಹೊರತಾಗಿ, ಗಾಯಕ್ವಾಡ್ 1992-96 ನಡುವೆ ರಾಷ್ಟ್ರೀಯ ಆಯ್ಕೆಗಾರರಾಗಿಯೂ ಕೆಲಸ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ