IND vs AUS: ಈ ಆಟಗಾರನ ಸುವರ್ಣಯುಗಕ್ಕೆ ಬಿಸಿಸಿಐ ಬ್ರೇಕ್! ಒಂದೇ ಹೊಡೆತಕ್ಕೆ ತಂಡದಿಂದ ಹೊರಬಿದ್ದ ಬೌಲರ್!

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.

Written by - Bhavishya Shetty | Last Updated : Mar 10, 2023, 08:49 PM IST
    • ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ
    • ನಾಲ್ಕನೇ ಪಂದ್ಯ ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
    • ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
IND vs AUS: ಈ ಆಟಗಾರನ ಸುವರ್ಣಯುಗಕ್ಕೆ ಬಿಸಿಸಿಐ ಬ್ರೇಕ್! ಒಂದೇ ಹೊಡೆತಕ್ಕೆ ತಂಡದಿಂದ ಹೊರಬಿದ್ದ ಬೌಲರ್! title=
Harshal Patel

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ನಾಲ್ಕನೇ ಪಂದ್ಯ ಅಹಮದಾಬಾದ್‌’ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಮಧ್ಯೆ, ಟೆಸ್ಟ್ ಅಥವಾ ಏಕದಿನ ಸರಣಿಯಲ್ಲಿ ಅವಕಾಶ ಸಿಗದೆ ವಂಚಿತನಾದ ಓರ್ವ ಆಟಗಾರನ ಬಗ್ಗೆ ಇಂದು ನಾವು ಮಾತನಾಡಲಿದ್ದೇವೆ.

ಇದನ್ನೂ ಓದಿ: Rishabh Shetty daughter : ರಿಷಬ್ ಶೆಟ್ಟಿ ಮಗಳ ಹುಟ್ಟುಹಬ್ಬಕ್ಕೆ ಯಾರ್ಯಾರು ಸೇರಿದ್ರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ, ನಂತರ ಉಳಿದ ಪಂದ್ಯಗಳು ವಿಶಾಖಪಟ್ಟಣಂ ಮತ್ತು ಚೆನ್ನೈನಲ್ಲಿ ನಡೆಯಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಏಕದಿನ ಸರಣಿಗೆ ವೇಗಿ ಹರ್ಷಲ್ ಪಟೇಲ್ ಅವರನ್ನು ಆಯ್ಕೆ ಮಾಡಿಲ್ಲ. ಈ ವರ್ಷದ ಜನವರಿ ತಿಂಗಳಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲೂ ಅವರಿಗೆ ಅವಕಾಶ ನೀಡಿರಲಿಲ್ಲ. ಇದೀಗ ಮಾರ್ಚ್ 17ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲೂ ಅವರನ್ನು ಕಡೆಗಣಿಸಲಾಗಿದೆ. ಭಾರತ ಟೆಸ್ಟ್ ಮತ್ತು ಏಕದಿನ ತಂಡದಲ್ಲಿ ಹರ್ಷಲ್ ಪಟೇಲ್‌ಗೆ ಅವಕಾಶ ಸಿಗುವುದು ಕಷ್ಟ ಎಂದು ಆಯ್ಕೆಗಾರರು ಸೂಚಿಸಿದ್ದಾರೆ.

ಹರ್ಷಲ್ ಪಟೇಲ್ ಇದುವರೆಗೆ 25 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 29 ವಿಕೆಟ್ ಪಡೆದಿದ್ದಾರೆ. ಈ ವೇಗದ ಬೌಲರ್‌ ಭವಿಷ್ಯ ಇದೇ ರೀತಿ ಮುಂದುವರಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಬೇಕಾಗಬಹುದು.

ಇದನ್ನೂ ಓದಿ: Janhvi Kapoor: ರೆಟ್ರೊ ಲುಕ್‌ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾನ್ವಿ ಕಪೂರ್!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕತ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News