BCCI Sacks Selection Committee: ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ಹೀನಾಯ ಸೋಲಿನ ನಂತರ ಬಿಸಿಸಿಐ ಗಂಭೀರ ನಿರ್ಧಾರ ಕೈಗೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ (ನವೆಂಬರ್ 18) ಚೇತನ್ ಶರ್ಮಾ ನೇತೃತ್ವದ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ವಜಾಗೊಳಿಸಿದೆ. ಬಿಸಿಸಿಐ ಟ್ವಿಟರ್‌ನಲ್ಲಿ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ರಾಷ್ಟ್ರೀಯ ಆಯ್ಕೆಗಾರರ (ಹಿರಿಯ ಪುರುಷರ) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ ಮತ್ತು ಅದಕ್ಕಾಗಿ ಅರ್ಹ ಮಾನದಂಡಗಳನ್ನು ಪೂರೈಸಬೇಕು ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ನವೆಂಬರ್ 28 ರವರೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ
"ಒಟ್ಟು 5 ವರ್ಷಗಳ ಕಾಲ ಯಾವುದೇ ಕ್ರಿಕೆಟ್ ಸಮಿತಿಯ (ಬಿಸಿಸಿಐನ ನಿಯಮಗಳು ಮತ್ತು ನಿಬಂಧನೆಗಳಲ್ಲಿ ವ್ಯಾಖ್ಯಾನಿಸಿರುವಂತೆ) ಸದಸ್ಯರಾಗಿರುವ ಯಾವುದೇ ವ್ಯಕ್ತಿ ಪುರುಷರ ಆಯ್ಕೆ ಸಮಿತಿಯ ಸದಸ್ಯರಾಗಲು ಅರ್ಹರಾಗಿರುವುದಿಲ್ಲ. ಅರ್ಜಿಗಳನ್ನು ನವೆಂಬರ್ 28, 2022 ರಂದು ಸಂಜೆ 6 ಗಂಟೆಯೊಳಗೆ ಸಲ್ಲಿಸಬೇಕು ಎಂದು ಹೇಳಲಾಗಿದೆ.
🚨NEWS🚨: BCCI invites applications for the position of National Selectors (Senior Men).
Details : https://t.co/inkWOSoMt9
— BCCI (@BCCI) November 18, 2022
ಅರ್ಜಿಯ ಮಾನದಂಡದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ, ರಾಷ್ಟ್ರೀಯ ಆಯ್ಕೆಗಾರ (ಹಿರಿಯ ಪುರುಷರು) 5 ಹುದ್ದೆಗಳು ಖಾಲಿ ಇವೆ ಎಂದು ಹೇಳಿದೆ. ಅರ್ಜಿ ಸಲ್ಲಿಸುವ ವ್ಯಕ್ತಿ ಕನಿಷ್ಠ 7 ಟೆಸ್ಟ್ ಪಂದ್ಯಗಳು ಅಥವಾ 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ODI ಪಂದ್ಯಗಳನ್ನು ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು. ಇದಲ್ಲದೆ, ಅವರು ಕನಿಷ್ಠ 5 ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು ಎನ್ನಲಾಗಿದೆ.
ಇದನ್ನೂ ಓದಿ-IND vs NZ : ಮೊದಲ ಟಿ20 ರದ್ದು, ಆದರೂ ನ್ಯೂಜಿಲೆಂಡ್‌ಗೆ ಸವಾಲೆಸೆದ ಪಾಂಡ್ಯ!
ಟಿ20 ವಿಶ್ವಕಪ್ ಬಳಿಕ ಟೀಕೆ ವ್ಯಕ್ತವಾಗಿತ್ತು
ಇದೇ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಹೀನಾಯ ಸೋಲನ್ನು ಅನುಭವಿಸಿತ್ತು. ತಂಡದ ಸೆಮಿಫೈನಲ್ ನಿರ್ಗಮನದ ನಂತರ, ಅನೇಕ ಆಟಗಾರರು ಫಾರ್ಮ್‌ನಿಂದ ಹೊರಗಿದ್ದರೂ ತಂಡದಲ್ಲಿ ಅವರ ಆಯ್ಕೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಇದಲ್ಲದೇ ಆಯ್ಕೆ ಸಮಿತಿಯನ್ನು ವಜಾ ಮಾಡಬೇಕೆಂಬ ಆಗ್ರಹವೂ ಕೇಳಿ ಬಂದಿತ್ತು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.